ಸೌತ್ ಆಫ್ರಿಕಾ ವಿರುದ್ಧ ODI ಸರಣಿಗೆ ಭಾರತ ತಂಡ ಪ್ರಕಟ, ಕನ್ನಡಿಗ ಕೆಎಲ್ ರಾಹುಲ್‌ಗೆ ನಾಯಕತ್ವ
ಸೌತ್ ಆಫ್ರಿಕಾ ವಿರುದ್ಧ ODI ಸರಣಿಗೆ ಭಾರತ ತಂಡ ಪ್ರಕಟ, ಕೆಎಲ್ ರಾಹುಲ್‌ಗೆ ನಾಯಕತ್ವ ನೀಡಲಾಗಿದೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ತಂಡದಲ್ಲಿ ಸ್ಥಾನ ಪಡೆದಿದ್ದರೆ, ಶುಬಮನ್ ಗಿಲ್‌ಗೆ ವಿಶ್ರಾಂತಿ ನೀಡಲಾಗಿದೆ.

ರಾಹುಲ್‌ಗೆ ನಾಯಕತ್ವ
ಸೌತ್ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟಗೊಂಡಿದೆ. ಗಾಯಗೊಂಡು ಟೆಸ್ಟ್ ಪಂದ್ಯದಿಂದಲೂ ಹೊರಬಿದ್ದಿರುವ ಶುಬಮನ್ ಗಿಲ್‌ಗ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ತಂಡದ ನಾಯಕ ಪಟ್ಟವನ್ನು ಕನ್ನಡಿಗ ಕೆಎಲ್ ರಾಹುಲ್‌ಗೆ ನೀಡಲಾಗಿದೆ. ಮೂರು ಪಂದ್ಯಗಳ ಸರಣಿಯಲ್ಲಿ ಕೆಎಲ್ ರಾಹುಲ್ ಭಾರತ ತಂಡ ಮುನ್ನಡೆಸಲಿದ್ದಾರೆ.
ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಸ್ಥಾನ
ಸೌತ್ ಆಫ್ರಿಕಾ ವಿರುದ್ದದ ಏಕದಿನ ಸರಣಿಗೆ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಸ್ಥಾನ ಪಡೆದಿದ್ದಾರೆ. ರೋಹಿತ್ ಹಾಗೂ ವಿರಾಟ್ ಕೇವಲ ಏಕದಿನ ಮಾದರಿಯಲ್ಲಿ ಮಾತ್ರ ಮುಂದುವರಿದಿದ್ದಾರ. ಟೆಸ್ಟ್ ಹಾಗೂ ಟಿ20 ಮಾದರಿಗೆ ವಿದಾಯ ಹೇಳಿದ್ದಾರೆ. ಇನ್ನು ರಿಷಬ್ ಪಂತ್ ಏಕದಿನ ಸರಣಿಗೆ ಕಮ್‌ಬ್ಯಾಕ್ ಮಾಡಿದ್ದಾರೆ.
ಸೌತ್ ಆಫ್ರಿಕಾ ವಿರುದ್ದ ಏಕದಿನ ಸರಣಿಗೆ ತಂಡ
ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ ತಿಲಕ್ ವರ್ಮಾ, ಕೆಎಲ್ ರಾಹುಲ್, ರಿಷಬ್ ಪಂತ್, ವಾಶಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ರುತುರಾಜ್ ಗಾಯಕ್ವಾಡ್, ಪ್ರಸಿದ್ಧ್ ಕೃಷ್ಣ, ಅರ್ಶದೀಪ್ ಸಿಂಗ್, ಧ್ರುವ್ ಜುರೆಲ್
ಮೊಹಮ್ಮದ್ ಸಿರಾಜ್ ಔಟ್, ಶಮಿಗೆ ಸ್ಥಾನವಿಲ್ಲ
ಮೊಹಮ್ಮದ್ ಸಿರಾಜ್ ಏಕದಿನ ತಂಡದಿಂದ ಹೊರಬಿದ್ದಿದ್ದಾರೆ. ಇತ್ತ ವೇಗಿ ಮೊಹಮ್ಮದ್ ಶಮಿ ಇತ್ತೀಚೆಗೆ ಟೀಂ ಇಂಡಿಯಾ ಆಯ್ಕೆ ಹಾಗೂ ಆಯ್ಕೆ ಸಮಿತಿ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಇದು ವಿವಾದಕ್ಕೂ ಕಾರಣವಾಗಿತ್ತು. ಆದರೆ ಈ ಬಾರಿಯೂ ಮೊಹಮ್ಮದ್ ಶಮಿ ಸ್ಥಾ ಪಡೆದಿಲ್ಲ.
ಮೊಹಮ್ಮದ್ ಸಿರಾಜ್ ಔಟ್, ಶಮಿಗೆ ಸ್ಥಾನವಿಲ್ಲ
ಯಾವಾಕ ಏಕದಿನ ಸರಣಿ
ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಏಕದಿನ ಸರಣಿ ನವೆಂಬರ್ 30 ರಿಂದ ಆರಂಭಗೊಳ್ಳಲಿದೆ. ಮೊದಲ ಪಂದ್ಯ ರಾಂಚಿಯಲ್ಲಿ ನಡೆಯೆಲಿದೆ. ಎರಡನೇ ಪಂದ್ಯ ಡಿಸೆಂಬರ್ 3ರಂದು ರಾಯ್‌ಪುರದಲ್ಲಿ ನಡೆದರೆ, ಮೂರನೇ ಪಂದ್ಯ ಡಿಸೆಂಬರ್ 6ರಂದು ವಿಶಾಖಪಟ್ಟಣದಲ್ಲಿ ನಡೆಯಲಿದೆ. ಎಲ್ಲಾ ಪಂದ್ಯಗಳು ಮಧ್ಯಾಹ್ನ 1.30ಕ್ಕೆ ಆರಂಭಗೊಳ್ಳಲಿದೆ.
ಯಾವಾಕ ಏಕದಿನ ಸರಣಿ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

