ಎಲ್ಲಾ ಖರ್ಚು ವೆಚ್ಚ ಬಿಸಿಸಿಐ ನೋಡಿಕೊಳ್ಳಲಿದೆ, ವೈಭವ್ ಸೂರ್ಯವಂಶಿಗಾಗಿ ಮಹತ್ವದ ನಿರ್ಧಾರ
ವೈಭವ್ ಸೂರ್ಯವಂಶಿಗೆ ನೆರವಾಗಲು ಬಿಸಿಸಿಐ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ವೈಭವ್ ಕೇವಲ 15ರ ಹುಡುಗ. ಹೀಗಾಗಿ ಆತನಿಗಾಗಿ ನಿಯಮ ಬದಲಿಸಿದ ಬಿಸಿಸಿಐ ಎಲ್ಲಾ ಖರ್ಚು ವೆಚ್ಚ ನೋಡಿಕೊಳ್ಳುವುದಾಗಿ ಹೇಳಿದೆ.

ಬಿಸಿಸಿಐ ಮಹತ್ವದ ನಿರ್ಧಾರ
ಐರ್ಲೆಂಡ್, ಇಂಗ್ಲೆಂಡ್ ಪ್ರವಾಸದ ಟೀಂ ಇಂಡಿಯಾಗೆ ವೈಭವ್ ಸೂರ್ಯವಂಶಿ ಆಯ್ಕೆಯಾಗಿದ್ದಾರೆ. ಭಾರತ ತಂಡಕ್ಕೆ ಕೇವಲ 15ರ ಹರೆಯದಲ್ಲೇ ವೈಭವ್ ಆಯ್ಕೆಯಾಗಿದ್ದಾರೆ. ದೇಶದಲ್ಲೆಡೆ ಅಭಿಮಾನಿಗಳು ಸಂಭ್ರಮ ಆಚರಿಸುತ್ತಿದ್ದಾರೆ. ಇದರ ನಡುವೆ ಬಿಸಿಸಿಐ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ವೈಭವ್‌ಗೆ ನೆರವಾಗುತ್ತಿದೆ ಬಿಸಿಸಿಐ
ವೈಭವ್ ಸೂರ್ಯವಂಶಿ ವಯಸ್ಸು ಕೇವಲ 15. ಮೊದಲ ಬಾರಿಗೆ ಟೀಂ ಇಂಡಿಯಾ ಆಯ್ಕೆ ಮಾತ್ರವಲ್ಲ ಸೀನಿಯರ್ ತಂಡದ ಜೊತೆ ವಿದೇಶಿ ಪ್ರವಾಸ ಮಾಡುತ್ತಿದ್ದಾರೆ. 15ರ ಹುಡುಗನಾಗಿರುವ ಕಾರಣ ಆತನ ಜೊತೆ ಪೋಷಕರು ಇದ್ದರೆ ಉತ್ತಮ ಅನ್ನೋ ಅಭಿಪ್ರಾಯಗಳು ಕೇಳಿಬಂದಿತ್ತು. ಹೀಗಾಗಿ ವೈಭವ್ ಸೂರ್ಯವಂಶಿಗಾಗಿ ಬಿಸಿಸಿಐ ಇದೀಗ ವೈಭವ್ ಪೋಷಕರನ್ನು ಐರ್ಲೆಂಡ್, ಇಂಗ್ಲೆಂಡ್ ಪ್ರವಾಸಕ್ಕೆ ಕರೆದುಕೊಂಡು ಹೋಗುತ್ತಿದೆ.
ಎಲ್ಲಾ ಖರ್ಚು ವೆಚ್ಚ ಬಿಸಿಸಿಐ ಹೆಗಲಿಗೆ
ವೈಭವ್ ಸೂರ್ಯವಂಶಿ ಪೋಷಕರು ಎಲ್ಲಾ ಖರ್ಚು ವೆಚ್ಚಗಳನ್ನು ಬಿಸಿಸಿಐ ನೋಡಿಕೊಳ್ಳಲಿದೆ. ಹೊಸ ವಾತಾವರಣದಲ್ಲಿ ವೈಭವ್ ಸೂರ್ಯವಂಶಿ ಹೊಂದಿಕೊಳ್ಳಬೇಕಿದೆ. ಬಾಲಕನಾಗಿರುವ ಕಾರಣ ಆತನ ಪೋಷಕರನ್ನು ಕರೆದುಕೊಂಡು ಹೋಗಲಾಗುತ್ತದೆ. ಇದರಿಂದ ವೈಭವ್ ಸೂರ್ಯವಂಶಿಗೆ ತನ್ನ ಆಟದ ಮೇಲೆ ಹೆಚ್ಚು ಫೋಕಸ್ ಮಾಡಲು ಸಾಧ್ಯವಾಗುತ್ತದೆ ಎಂದು ಬಿಸಿಸಿಐ ಸೆಕ್ರಟರಿ ದೇವಜಿತ್ ಸೈಕಿಯಾ ಹೇಳಿದ್ದಾರೆ.
ವೈಭವ್ ಸೂರ್ಯವಂಶಿ ಹೊಸ ಅಧ್ಯಾಯ
ವೈಭವ್ ಸೂರ್ಯವಂಶಿ ಐಪಿಎಲ್ ಟೂರ್ನಿಯಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಹಲವು ದಾಖಲೆ ಬರೆದಿದ್ದಾರೆ. ದಿಗ್ಗಜ ಬೌಲರ್ ವಿರುದ್ಧ ಸಿಕ್ಸರ್ ಸಿಡಿಸಿದ್ದಾರೆ. ಇದೀಗ ಟೀಂ ಇಂಡಿಯಾ ಮೂಲಕ ಅಬ್ಬರಿಸಲು ಸಜ್ಜಾಗಿದ್ದಾರೆ. ಸದ್ಯ ಭಾರತ ಎ ತಂಡದ ಜೊತೆ ಶ್ರೀಲಂಕಾ ಪ್ರವಾಸದಲ್ಲಿರುವ ವೈಭವ್ ಬಳಿಕ ನೇರವಾಗಿ ಸೀನಿಯರ್ ತಂಡ ಸೇರಿಕೊಳ್ಳಲಿದ್ದಾರೆ.
ಸಚಿನ್ ದಾಖಲೆ ಮುರಿದ ವೈಭವ್
ಸಚಿನ್ ತೆಂಡೂಲ್ಕರ್ ತಮ್ಮ 16ನೇ ವಯಸ್ಸಿನಲ್ಲಿ ಟೀಂ ಇಂಡಿಯಾಗೆ ಆಯ್ಕೆಯಾಗಿದ್ದರು. ಇದು ಅತ್ಯಂತ ಕಿರಿಯ ಕ್ರಿಕೆಟಿಕನೊಬ್ಬ ಟೀಂ ಇಂಡಿಯಾಗೆ ಆಯ್ಕೆಯಾದ ಇದುವರೆಗಿನ ದಾಖಲೆಯಾಗಿತ್ತು. 36 ವರ್ಷ ಬಳಿಕ ವೈಭವ್ ಸೂರ್ಯವಂಶಿ ಈ ದಾಖಲೆ ಮುರಿದಿದ್ದಾರೆ. ವೈಭವ್ 15ನೇ ವಯಸ್ಸಿಗೆ ಟೀಂ ಇಂಡಿಯಾಗೆ ಆಯ್ಕೆಯಾಗಿದ್ದಾರೆ.
ಐಪಿಎಲ್ ಅಬ್ಬರ
ಐಪಿಎಲ್ ಟೂರ್ನಿಯಲ್ಲಿ ವೈಭವ್ ಸೂರ್ಯವಂಶಿ ಆರೇಂಜ್ ಕ್ಯಾಪ್ ಗೆದ್ದುಕೊಂಡಿದ್ದಾರೆ. ಟೂರ್ನಿಯಲ್ಲಿ ಗರಿಷ್ಠ ರನ್ ಸಿಡಿಸಿದ್ದಾರೆ. ಇನ್ನು ಒಂದು ಆವೃತ್ತಿಯಲ್ಲಿ ಗರಿಷ್ಠಿ ಸಿಕ್ಸರ್ ಸಿಡಿಸಿ ಕ್ರಿಸ್ ಗೇಲ್ ದಾಖಲೆ ಮುರಿದಿದ್ದಾರೆ. ಇತ್ತ ಐದು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

