Big Bash League ಕಡೆ ಮುಖ ಮಾಡಿದ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ! ಈತ ಕೊಹ್ಲಿ ಆಪ್ತ ಗೆಳೆಯ
18ನೇ ಆವೃತ್ತಿಯ IPL ಯಶಸ್ವಿಯಾಗಿ ಮುಕ್ತಾಯವಾದ ಬೆನ್ನಲ್ಲೇ ಇದೀಗ ಕ್ರಿಕೆಟ್ ಅಭಿಮಾನಿಗಳ ಚಿತ್ತ 2025ರ ಬಿಗ್‌ಬ್ಯಾಶ್ ಲೀಗ್‌ನತ್ತ ನೆಟ್ಟಿದೆ. ಇದರ ಬೆನ್ನಲ್ಲೇ ಮಹತ್ವದ ಅಪ್‌ಡೇಟ್ ಹೊರಬಿದ್ದಿದ್ದು, ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಟೂರ್ನಿಯ ಡ್ರಾಫ್ಟ್‌ಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ.

18ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿಕೊಂಡು ಬೀಗಿದೆ. ಇದರ ಬೆನ್ನಲ್ಲೇ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಬಿಗ್‌ಬ್ಯಾಶ್ ಲೀಗ್‌ನತ್ತ ಅಭಿಮಾನಿಗಳ ಚಿತ್ತ ನೆಟ್ಟಿದೆ.
ಐಪಿಎಲ್‌ನಂತೆ ಬಿಗ್‌ಬ್ಯಾಶ್ ಲೀಗ್ ಟೂರ್ನಿಯಲ್ಲೂ ಆಸ್ಟ್ರೇಲಿಯಾದ ಆಟಗಾರರ ಜತೆಗೆ ಜಗತ್ತಿನ ಬೇರೆ ಬೇರೆ ಸ್ಟಾರ್ ಆಟಗಾರರು ಪಾಲ್ಗೊಳ್ಳುತ್ತಾರೆ.
ಇದೀಗ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಹಾಗೂ ವಿರಾಟ್ ಕೊಹ್ಲಿಯ ಆಪ್ತ ಗೆಳೆಯ ಕೂಡಾ ಬಿಗ್ ಬ್ಯಾಶ್ ಲೀಗ್ ಟೂರ್ನಿಯಲ್ಲಿ ಪಾಲ್ಗೊಳ್ಳಲು ತಮ್ಮ ಹೆಸರು ನೋದಾಯಿಸಿಕೊಂಡಿದ್ದಾರೆ.
ಹೌದು, ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಅಂಡರ್ 19 ವಿಶ್ವಕಪ್ ಚಾಂಪಿಯನ್ ಭಾರತ ತಂಡದಲ್ಲಿದ್ದ ವೇಗಿ ಸಿದ್ದಾರ್ಥ್ ಕೌಲ್, ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಬಿಗ್ ಬ್ಯಾಶ್ ಲೀಗ್ ಡ್ರಾಫ್ಟ್‌ಗೆ ತಮ್ಮ ಹೆಸರು ರಿಜಿಸ್ಟರ್ ಮಾಡಿಸಿಕೊಂಡಿದ್ದಾರೆ.
ಭಾರತ ಪರ 3 ಏಕದಿನ, ಮೂರು ಟಿ20 ಪಂದ್ಯಗಳನ್ನಾಡಿರುವ ಸಿದ್ದಾರ್ಥ್ ಕೌಲ್, ಕಳೆದ ನವೆಂಬರ್‌ನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದರು.
ಇದೀಗ ಸಿದ್ದಾರ್ಥ್ ಕೌಲ್, ಬಿಗ್ ಬ್ಯಾಶ್ ಲೀಗ್‌ಗೆ ಡ್ರಾಫ್ಟ್‌ನಲ್ಲಿರುವ ಭಾರತದ ಏಕೈಕ ಪುರುಷ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ.
ಭಾರತ ಪರ 3 ಏಕದಿನ, ಮೂರು ಟಿ20 ಪಂದ್ಯಗಳನ್ನಾಡಿರುವ ಸಿದ್ದಾರ್ಥ್ ಕೌಲ್, ಕಳೆದ ನವೆಂಬರ್‌ನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದರು.
ಐಪಿಎಲ್‌ನಲ್ಲಿ ಸಿದ್ದಾರ್ಥ್ ಕೌಲ್, ಸನ್‌ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸಿದ್ದರು. ಕೌಲ್ 55 ಐಪಿಎಲ್ ಪಂದ್ಯಗಳನ್ನಾಡಿ 58 ವಿಕೆಟ್ ಕಬಳಿಸಿದ್ದಾರೆ.
ಇದೇ ವೇಳೆ ಹರ್ಮನ್‌ಪ್ರೀತ್ ಕೌರ್, ಸ್ಮೃತಿ ಮಂಧನಾ, ಕರ್ನಾಟಕದ ನಿಕಿ ಪ್ರಸಾದ್ ಸೇರಿದಂತೆ 15 ಆಟಗಾರ್ತಿಯರು ಮಹಿಳಾ ಬಿಗ್ ಬ್ಯಾಶ್ ಲೀಗ್ ಡ್ರಾಫ್ಟ್‌ಗೆ ನೋಂದಾಯಿಸಿಕೊಂಡಿದ್ದಾರೆ.