ಟಿ20 ವಿಶ್ವಕಪ್‌ಗೆ ಭಾರತ ತಂಡದ ನಾಯಕ ಹಾರ್ದಿಕ್ ಅಲ್ಲ, ಕ್ಯಾಪ್ಟನ್ ಹೆಸರು ಬಹಿರಂಗಪಡಿಸಿದ ಜಯ್ ಶಾ!
ಟಿ20 ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ ಸಜ್ಜಾಗುತ್ತಿದೆ. ಐಸಿಸಿ ಟ್ರೋಫಿ ಬರ ನೀಗಿಸಿಕೊಳ್ಳಲು ತಯಾರಿ ನಡೆಯುತ್ತಿದೆ. ಟಿ20 ವಿಶ್ವಕಪ್‌ಗೆ ಹಾರ್ದಿಕ್ ಪಾಂಡ್ಯ ನಾಯಕ ಅನ್ನೋ ಮಾತುಗಳು ಕೇಳಿಬರುತ್ತಿತ್ತು. ಆದರೆ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡವನ್ನು ಹಾರ್ದಿಕ್ ಪಾಂಡ್ಯ ಅಲ್ಲ, ಈ ನಾಯಕ ಮುನ್ನಡೆಸಲಿದ್ದಾರೆ. ಈ ಮಾಹಿತಿಯನ್ನು ಜಯ್ ಶಾ ಖಚಿತಪಡಿಸಿದ್ದಾರೆ.
ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಪ್ರಶಸ್ತಿ ಅಂಚಿನಲ್ಲಿ ಎಡವಿ ಬಿದ್ದಿತು. ಇದೀಗ ಟ್ರೋಫಿ ಬರ ನೀಗಿಸಿಕೊಳ್ಳಲು ಟಿ20 ವಿಶ್ವಕಪ್ ಮೇಲೆ ಟೀಂ ಇಂಡಿಯಾ ಕಣ್ಣಿಟ್ಟಿದೆ. ಹೀಗಾಗಿ ಹೊಸ ನಾಯಕನ ಅಡಿಯಲ್ಲಿ ಭಾರತ ಪ್ರವಾಸ ಮಾಡಲಿದೆ ಅನ್ನೋ ಮಾತುಗಳು ಕೇಳಿಬರುತ್ತಿತ್ತು.
ಏಕದಿನ ವಿಶ್ವಕಪ್ ಸೋಲಿನ ಬಳಿಕ ಟಿ20 ವಿಶ್ವಕಪ್ ಟೂರ್ನಿಗೆ ಹಾರ್ದಿಕ್ ಪಾಂಡ್ಯ ನಾಯಕತ್ವದಡಿ ಟೀಂ ಇಂಡಿಯಾ ಸಾಗಲಿದೆ ಎಂದು ವರದಿಯಾಗಿತ್ತು. ಇದೀಗ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಭಾರತದ ಟಿ20 ನಾಯಕನ ಹೆಸರು ಬಹಿರಂಗಪಡಿಸಿದ್ದಾರೆ.
2024ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡವನ್ನು ಹಾರ್ದಿಕ್ ಪಾಂಡ್ಯ ಅಲ್ಲ, ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ ಎಂದು ಜಯ್ ಶಾ ಸ್ಪಷ್ಟಪಡಿಸಿದ್ದಾರೆ.
ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದ ಒಂದು ದಿನ ಮೊದಲು ಮಾತನಾಡಿದ ಜಯ್ ಶಾ, ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಟಿ20 ವಿಶ್ವಕಪ್ ಆಡಲಿದೆ ಎಂದಿದ್ದಾರೆ.
2023ರ ಏಕದಿನ ವಿಶ್ವಕಪ್ ಟೂರ್ನಿ ಸೋಲಿನ ಬಳಿಕ ನಾನು ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ರೋಹಿತ್ ಶರ್ಮಾ ನಾಯಕತ್ವದ ಟಿ20 ತಂಡ ಈ ಬಾರಿಯ ಟಿ20 ವಿಶ್ವಕಪ್ ಟ್ರೋಫಿ ಗೆಲ್ಲಲಿದೆ ಎಂದು ಜಯ್ ಶಾ ಹೇಳಿದ್ದಾರೆ.
2023ರಲ್ಲಿ ರೋಹಿತ್ ಶರ್ಮಾ ಟಿ20 ಪಂದ್ಯವನ್ನೇ ಆಡಿಲ್ಲ. ಇತ್ತ ಏಕದಿನ ವಿಶ್ವಕಪ್ ಸೋಲಿನ ಬಳಿಕ ರೋಹಿತ್ ಶರ್ಮಾ ಟಿ20ಯಿಂದ ದೂರ ಉಳಿಯಲಿದ್ದಾರೆ ಅನ್ನೋ ಸುದ್ದಿ ಹರಿದಾಡಿತ್ತು.ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ 2023ರ ಸಾಲಿನಲ್ಲಿ ಹಾರ್ದಿಕ್ ಪಾಂಡ್ಯ ಟಿ20 ತಂಡವನ್ನು ಮುನ್ನಡೆಸಿದ್ದರು.
ಬರೋಬ್ಬರಿ 1 ವರ್ಷ ಬಳಿಕ ರೋಹಿತ್ ಶರ್ಮಾ ಟಿ20 ತಂಡಕ್ಕೆ ಮರಳಿದ್ದರು. ಆಫ್ಘಾನಿಸ್ತಾನ ವಿರುದ್ಧದ ಟಿ20 ಪಂದ್ಯದಲ್ಲಿ ಕಾಣಿಸಿಕೊಳ್ಳುವ ಮೂಲಕ ಮಹತ್ವದ ಸುಳಿವು ನೀಡಿದ್ದರು.
2024ರ ಜೂನ್ 1 ರಿಂದ ಟಿ20 ವಿಶ್ವಕಪ್ ಟೂರ್ನಿ ನಡೆಯುತ್ತಿದೆ. ಈ ಬಾರಿ ವೆಸ್ಟ್ ಇಂಡೀಸ್ ಟೂರ್ನಿ ಆಯೋಜಿಸುತ್ತಿದೆ. 2013ರಿಂದ ಐಸಿಸಿ ಟ್ರೋಫಿ ಕೊರಗು ಅನುಭವಿಸುತ್ತಿರುವ ಭಾರತ ಈ ಬಾರಿ ಟ್ರೋಫಿ ಗೆಲ್ಲಲಿದೆ ಅನ್ನೋ ವಿಶ್ವಾಸವನ್ನು ಜಯ್ ಶಾ ವ್ಯಕ್ತಪಡಿಸಿದ್ದಾರೆ.