ICC T20 World Cup ಟೂರ್ನಿಯಲ್ಲಿ ಗರಿಷ್ಠ ಸಿಕ್ಸರ್ ಬಾರಿಸಿದ ಟಾಪ್ 5 ಕ್ರಿಕೆಟಿಗರಿವರು..!
ಬೆಂಗಳೂರು: ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಅಕ್ಟೋಬರ್ 16ರಿಂದ ಆರಂಭವಾಗಿ ನವೆಂಬರ್ 13ರವರೆಗೆ ನಡೆಯಲಿದೆ. ಹೊಡಿಬಡಿಯಾಟಕ್ಕೆ ಹೆಸರುವಾಸಿಯಾದ ಟಿ20 ವಿಶ್ವಕಪ್‌ನಲ್ಲಿ ಮತ್ತೊಮ್ಮೆ ರನ್ ಮಳೆ ಹರಿಯುವ ಸಾಧ್ಯತೆಯಿದೆ. ಈ ಸಂದರ್ಭದಲ್ಲಿ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಗರಿಷ್ಠ ಸಿಕ್ಸರ್ ಬಾರಿಸಿದ ಟಾಪ್ 5 ಬ್ಯಾಟರ್‌ಗಳ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.
1. ಕ್ರಿಸ್ ಗೇಲ್- 63 ಸಿಕ್ಸರ್
ಯೂನಿವರ್ಸಲ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್, ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಒಟ್ಟು 33 ಪಂದ್ಯಗಳ 31 ಇನಿಂಗ್ಸ್‌ಗಳನ್ನಾಡಿ 63 ಸಿಕ್ಸರ್ ಬಾರಿಸುವ ಮೂಲಕ ಗರಿಷ್ಠ ಸಿಕ್ಸರ್ ಸಿಡಿಸಿದವರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.
2. ಯುವರಾಜ್ ಸಿಂಗ್ - 33 ಸಿಕ್ಸರ್
ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ಸಿಕ್ಸರ್ ಕಿಂಗ್ ಖ್ಯಾತಿಯ ಯುವರಾಜ್ ಸಿಂಗ್, ಭಾರತ ಪರ 31 ಪಂದ್ಯಗಳ 28 ಇನಿಂಗ್ಸ್‌ಗಳನ್ನಾಡಿ 33 ಸಿಕ್ಸರ್ ಬಾರಿಸುವ ಮೂಲಕ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.
3. ಶೇನ್ ವಾಟ್ಸನ್ - 31 ಸಿಕ್ಸರ್
ಆಸ್ಟ್ರೇಲಿಯಾದ ಮಾಜಿ ಆಲ್ರೌಂಡರ್ ಶೇನ್ ವಾಟ್ಸನ್, 24 ಪಂದ್ಯಗಳ 22 ಇನಿಂಗ್ಸ್‌ಗಳನ್ನಾಡಿ 31 ಸಿಕ್ಸರ್ ಸಿಡಿಸುವ ಮೂಲಕ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ
4. ಡೇವಿಡ್ ವಾರ್ನರ್ - 31 ಸಿಕ್ಸರ್
ಆಸ್ಟ್ರೇಲಿಯಾದ ಆರಂಭಿಕ ಬ್ಯಾಟರ್ ಡೇವಿಡ್ ವಾರ್ನರ್, ಕಾಂಗರೂ ತಂಡದ ಪರ 30 ಪಂದ್ಯಗಳ 30 ಇನಿಂಗ್ಸ್‌ಗಳನ್ನಾಡಿ 31 ಸಿಕ್ಸರ್ ಸಿಡಿಸುವ ಮೂಲಕ ಗರಿಷ್ಠ ಸಿಕ್ಸರ್ ಸಿಡಿಸಿದವರ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ.
5. ರೋಹಿತ್ ಶರ್ಮಾ - 31 ಸಿಕ್ಸರ್
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ 33 ಪಂದ್ಯಗಳ 33 ಇನಿಂಗ್ಸ್‌ಗಳನ್ನಾಡಿ 31 ಸಿಕ್ಸರ್ ಸಿಡಿಸುವ ಮೂಲಕ ಗರಿಷ್ಠ ಸಿಕ್ಸರ್ ಸಿಡಿಸಿದವರ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದು, ಯುವಿ ದಾಖಲೆ ಮುರಿಯುವ ನಿರೀಕ್ಷೆಯಲ್ಲಿದ್ದಾರೆ.