ಬೆಂಗ್ಳೂರಿನಲ್ಲಿ ನಡೆದ ಆಸ್ಟ್ರೇಲಿಯಾ - ಪಾಕಿಸ್ತಾನ ಮ್ಯಾಚ್ ವೀಕ್ಷಿಸಿದ ಸಿಎಂ, ಡಿಸಿಎಂ
ಬೆಂಗಳೂರು(ಅ.21): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ(ಶುಕ್ರವಾರ) ನಡೆದ ಆಸ್ಟ್ರೇಲಿಯಾ - ಪಾಕಿಸ್ತಾನ ನಡುವಿನ ವಿಶ್ವಕಪ್ ಕ್ರಿಕೆಟ್ ಪಂದ್ಯವನ್ನು ವೀಕ್ಷಿಸಿದ್ದಾರೆ.

ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವ ಎನ್. ಚೆಲುವರಾಯಸ್ವಾಮಿ ಸೇರಿದಂತೆ ಮತ್ತಿತರ ಜೊತೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು ಆಸ್ಟ್ರೇಲಿಯಾ - ಪಾಕಿಸ್ತಾನ ನಡುವಿನ ಪಂದ್ಯವನ್ನ ನೋಡಿ ಆನಂದಿಸಿದ್ದಾರೆ.
ಸಾಕಷ್ಟು ಕೆಲಸದ ಒತ್ತಡದ ಮಧ್ಯೆಯೇ ಸಿಎಂ, ಡಿಸಿಎಂ ಸೇರಿದಂತೆ ಮತ್ತಿತರು ಸಚಿವರು ಸೇರಿದಂತೆ ಬೆಂಗಳೂರಿನಲ್ಲಿ ನಡೆದ ವಿಶ್ವಕಪ್‌ನ ಮೊದಲ ಪಂಡ್ಯವವನ್ನ ನೋಡಿ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ 9 ವಿಕೆಟ್‌ಗೆ 367 ರನ್ ಪೇರಿಸಿತ್ತು, ಈ ಗುರಿ ಬೆನ್ನತ್ತಿದ್ದ ಪಾಕಿಸ್ತಾನ 45.3 ಓವರ್‌ಗಳಲ್ಲಿ ಎಲ್ಲ ವಿಕೆಟ್ ಕಳೆದುಕೊಂಡು 305 ರನ್ ಪೇರಿಸುವ ಮೂಲಕ ಸೋಲಿಗೆ ಶರಣಾಗಿದೆ.
ಪಾಕಿಸ್ತಾನ ತಂಡಕ್ಕೆ ಈ ಸೋಲಿನ ಮೂಲಕ ಸತತ ಎರಡನೇ ಬಾರಿ ಪಂದ್ಯ ಸೋತಿದೆ. ಇದಕ್ಕೂ ಮುನ್ನ ಭಾರತದ ವಿರುದ್ಧ ಪಾಕಿಸ್ತಾನ ತಂಡ ಪರಾಭವ ಹೊಂದಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.