ಟೀಂ ಇಂಡಿಯಾ ಬಳಿ ಕ್ಷಮೆ ಕೇಳಿದ ಕ್ರಿಕೆಟ್ ಆಸ್ಟ್ರೇಲಿಯಾ; ಕಠಿಣ ಕ್ರಮದ ಭರವಸೆ!
First Published Jan 10, 2021, 4:11 PM IST
ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ ನಡುವಿನ ಹೋರಾಟ ಅಂತಿಮ ಘಟ್ಟ ತಲುಪಿದೆ. ಇತ್ತ ಕ್ರಿಕೆಟ್ ಆಸ್ಟ್ರೇಲಿಯಾ ಭಾರತೀಯ ಆಟಗಾರರನ್ನು ಕ್ಷಮೆ ಕೇಳಿದೆ. ಜನಾಂಗೀಯ ನಿಂದನೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದೆ. ಈ ಕುರಿತು ಕ್ರಿಕೆಟ್ ಆಸ್ಟ್ರೇಲಿಯಾ, ಅಧೀಕೃತ ಪ್ರಕಟಣೆ ಹೊರಡಿಸಿದೆ. ಇದರ ವಿವರ ಇಲ್ಲಿದೆ.

ಟೀಂ ಇಂಡಿಯಾದ ಪ್ರತಿ ಆಸ್ಟ್ರೇಲಿಯಾ ಪ್ರವಾಸ ಒಂದಲ್ಲ ಒಂದು ವಿವಾದಕ್ಕೆ ಗುರಿಯಾಗಿದೆ. ಆಟಗಾರರ ಸ್ಲೆಡ್ಜಿಂಗ್, ಅಭಿಮಾನಿಗಳ ಅತೀರೇಕದ ವರ್ತನೆ ಸೇರಿದಂತೆ ಹಲವು ಘಟನೆಗಳು ಬಹುದೊಡ್ಡ ವಿವಾದವಾಗಿ ಮಾರ್ಪಟ್ಟಿದೆ. ಇದಕ್ಕೆ ಈ ಬಾರಿಯ ಟೂರ್ನಿ ಕೂಡ ಹೊರತಾಗಿಲ್ಲ.

ಈ ಬಾರಿ ಪ್ರವಾಸದಲ್ಲಿ ಸಿಡ್ನಿ ಟೆಸ್ಟ್ ಪಂದ್ಯ ಜನಾಂಗೀಯ ನಿಂದನೆ ವಿವಾದಕ್ಕೆ ಕಾರಣವಾಗಿದೆ. ಟೀಂ ಇಂಡಿಯಾ ಕ್ರಿಕೆಟಿಗರ ಮೇಲೆ ಸಿಡ್ನಿ ಅಭಿಮಾನಿಗಳು ಜನಾಂಗೀಯ ನಿಂದನೆ ಮಾಡಿದ್ದಾರೆ.
Today's Poll
ಎಷ್ಟು ಜನರೊಂದಿಗೆ ಆನ್ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?