- Home
- Sports
- Cricket
- ಮುಂಬೈ ವಿರುದ್ಧ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಪ್ಲೇ-ಆಫ್ ಕನಸು ಜೀವಂತ! ಹರ್ಮನ್‌ಪ್ರೀತ್ ಕೌರ್ ಪಡೆಗೆ ಸಂಕಷ್ಟ
ಮುಂಬೈ ವಿರುದ್ಧ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಪ್ಲೇ-ಆಫ್ ಕನಸು ಜೀವಂತ! ಹರ್ಮನ್‌ಪ್ರೀತ್ ಕೌರ್ ಪಡೆಗೆ ಸಂಕಷ್ಟ
ವಡೋದರಾ: ನಾಲ್ಕನೇ ಆವೃತ್ತಿಯ ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಕೊನೆಗೂ ಗೆಲುವಿನ ಹಳಿಗೆ ಮರಳುವಲ್ಲಿ ಯಶಸ್ವಿಯಾಗಿದೆ. ಇದರ ಜತೆಗೆ ಪ್ಲೇ ಆಫ್ ಕನಸನ್ನು ಜೀವಂತವಾಗಿಟ್ಟುಕೊಂಡಿದೆ.

ಟೂರ್ನಿಯಲ್ಲಿ ಎರಡನೇ ಗೆಲುವು ದಾಖಲಿಸಿದ ಡೆಲ್ಲಿ
ಈ ಬಾರಿ ಡಬ್ಲ್ಯುಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 5 ಪಂದ್ಯಗಳಲ್ಲಿ 2ನೇ ಗೆಲುವು ಸಾಧಿಸಿದೆ. ಮಾಡು ಇಲ್ಲವೇ ಮಡಿ ಎನ್ನುವಂತಿದ್ದ ಪಂದ್ಯದಲ್ಲಿ ಜೆಮಿಮಾ ಪಡೆ ಗೆಲುವಿನ ಕೇಕೆ ಹಾಕುವಲ್ಲಿ ಯಶಸ್ವಿಯಾಗಿದೆ
ಮುಂಬೈ ಎದುರು ಡೆಲ್ಲಿಗೆ 7 ವಿಕೆಟ್ ಜಯ
ಮಂಗಳವಾರ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ 7 ವಿಕೆಟ್ ಅಂತರದಲ್ಲಿ ಜಯಗಳಿಸಿತು. ಇದರೊಂದಿಗೆ ತಂಡ ಪ್ಲೇ-ಆಫ್ ಜೀವಂತವಾಗಿ ಉಳಿದಿದೆ.
ಮುಂಬೈ ಪ್ಲೇ ಆಫ್ ಮತ್ತಷ್ಟು ಕಠಿಣ
ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ 6 ಪಂದ್ಯಗಳಲ್ಲಿ 4ನೇ ಸೋಲು ಕಂಡಿದೆ. ಇದರೊಂದಿಗೆ ಪ್ಲೇ ಆಫ್ ಹಾದಿಯನ್ನು ಮತ್ತಷ್ಟು ಕಠಿಣ ಮಾಡಿಕೊಂಡಿದೆ.
ಸ್ಪರ್ಧಾತ್ಮಕ ಮೊತ್ತ ಕಲೆಹಾಕಿದ ಮುಂಬೈ ಇಂಡಿಯನ್ಸ್
ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 5 ವಿಕೆಟ್‌ಗೆ 154 ರನ್ ಕಲೆಹಾಕಿತು. ಸ್ಕೀವರ್ ಬ್ರಂಟ್ 45 ಎಸೆತಗಳಲ್ಲಿ ಔಟಾಗದೆ 65, ನಾಯಕಿ ಹರ್ಮನ್‌ಪ್ರೀತ್ ಕೌರ್ 33 ಎಸೆತಕ್ಕೆ 41 ರನ್ ಸಿಡಿಸಿದರು. ಡೆಲ್ಲಿ ಕ್ಯಾಪಿಟಲ್ಸ್ ಪರ ಶ್ರೀ ಚರಣಿ 3 ವಿಕೆಟ್ ಕಿತ್ತರು.
ಕೇವಲ ಮೂರು ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿದ ಡೆಲ್ಲಿ
ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 19 ಓವರ್‌ಗಳಲ್ಲಿ ಕೇವಲ ಮೂರು ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಯಿತು.
ಅಜೇಯ ಅರ್ಧಶತಕ ಸಿಡಿಸಿದ ನಾಯಕ ಜೆಮಿಮಾ
ಡೆಲ್ಲಿ ಕ್ಯಾಪಿಟಲ್ಸ್ ಪರ ಆರಂಭಿಕ ಬ್ಯಾಟರ್ ಲಿಜೆಲ್ಲೆ ಲೀ 28 ಎಸೆತಕ್ಕೆ 46 ರನ್ ಗಳಿಸಿದರೆ, ನಾಯಕಿ ಜೆಮಿಮಾ ರೋಡ್ರಿಗ್ಸ್ 37 ಎಸೆತಕ್ಕೆ ಔಟಾಗದೆ 51 ರನ್ ಗಳಿಸಿ ಗೆಲುವಿನ ದಡ ತಲುಪಿಸಿದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

