IPL ಫೈನಲ್‌ಗೂ ಮುನ್ನ ಹಾಲಿ ಚಾಂಪಿಯನ್ RCB ತಂಡಕ್ಕೆ ಶುಭಕೋರಿದ ಭಾವಿ ಸಿಎಂ ಡಿಕೆ ಶಿವಕುಮಾರ್!
ಬೆಂಗಳೂರು: 2026ರ ಐಪಿಎಲ್ ಟೂರ್ನಿಯ ಫೈನಲ್ ಪಂದ್ಯದಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಈ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಕರ್ನಾಟಕದ ಭಾವಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಮ್ಮ ಬೆಂಗಳೂರು ತಂಡಕ್ಕೆ ಶುಭಹಾರೈಸಿದ್ದಾರೆ.

ಐಪಿಎಲ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ
ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿಂದು ರಜತ್ ಪಾಟೀದಾರ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು, ಮಾಜಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಭಾರತೀಯ ಕಾಲಮಾನ ಸಂಜೆ 7.30ಕ್ಕೆ ಆರಂಭವಾಗಲಿದೆ.
ಎರಡನೇ ಟ್ರೋಫಿ ಮೇಲೆ ಕಣ್ಣಿಟ್ಟ ಉಭಯ ತಂಡಗಳು
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಟೂರ್ನಿಯಲ್ಲಿ ಸತತ ಎರಡನೇ ಬಾರಿಗೆ ಕಪ್ ಎತ್ತಿಹಿಡಿಯುವ ವಿಶ್ವಾಸದಲ್ಲಿದೆ. ಇನ್ನೊಂದೆಡೆ ಶುಭ್‌ಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡವು ತವರಿನಲ್ಲಿ ಗೆದ್ದು ಸಂಭ್ರಮಿಸಲು ತುದಿಗಾಲಿನಲ್ಲಿ ನಿಂತಿದೆ.
ಆರ್‌ಸಿಬಿ ತಂಡಕ್ಕೆ ಡಿಕೆ ಶುಭಹಾರೈಕೆ
ಇನ್ನು ಇದೆಲ್ಲದರ ನಡುವೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಹಾಗೂ ಕರ್ನಾಟಕದ ಭಾವಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಐಪಿಎಲ್ ಫೈನಲ್ ಪಂದ್ಯಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಶುಭ ಕೋರಿದ್ದಾರೆ.
ಹಾಲಿ ಚಾಂಪಿಯನ್ನರಿಗೆ ಆಲ್ ದಿ ಬೆಸ್ಟ್ ಎಂದ ಭಾವಿ ಸಿಎಂ
ಹಾಲಿ ಚಾಂಪಿಯನ್ನರಿಗೆ ಆಲ್ ದಿ ಬೆಸ್ಟ್. ಇದು RCBಯ ಹೊಸ ಅಧ್ಯಾಯ. ಮೊದಲ ಮ್ಯಾಚ್‌ನಿಂದ ಫೈನಲ್ ಮ್ಯಾಚ್‌ವರೆಗೆ ಆರ್‌ಸಿಬಿ ತಂಡವು ಅತ್ಯಂತ ಶಿಸ್ತುಬದ್ದ, ಸಂಘಟಿತವಾದಂತಹ ಪ್ರದರ್ಶನವನ್ನು ತೋರಿದೆ. ಈ ತಂಡವು ಮತ್ತೊಮ್ಮೆ ಇಡೀ ಬೆಂಗಳೂರು ಹೆಮ್ಮೆ ಪಡುವಂತೆ ಮಾಡಿದೆ ಹಾಗೆಯೇ ಲಕ್ಷಾಂತರ ಅಭಿಮಾನಿಗಳು ಸಂಭ್ರಮಾಚರಣೆ ಮಾಡುವಂತೆ ಮಾಡಿದ್ದಾರೆ.
ಶುಭ ಹಾರೈಸಿದ ಡಿಕೆಶಿ
ಐಪಿಎಲ್ ಫೈನಲ್ ಪಂದ್ಯಕ್ಕೆ ಶುಭ ಹಾರೈಕೆಗಳು. ಇವತ್ತಿನ ಪಂದ್ಯವು ಮತ್ತೊಮ್ಮೆ ನಮ್ಮ ಬೆಂಗಳೂರಿಗೆ ವೈಭವವನ್ನು ಮರುಕಳಿಸುವಂತೆ ಮಾಡಲಿ ಹಾಗೂ ಕರ್ನಾಟಕದಾದ್ಯಂತ ಎಲ್ಲರೂ ಸಂಭ್ರಮ ಪಡುವಂತೆ ಆಡಿ ಎಂದು ಡಿಕೆ ಶಿವಕುಮಾರ್ ಶುಭ ಹಾರೈಸಿದ್ದಾರೆ.
ಜಿದ್ದಾಜಿದ್ದಿನ ಪೈಪೋಟಿ ನಿರೀಕ್ಷೆ
ಇಂದು ನಡೆಯಲಿರುವ ಪಂದ್ಯದಲ್ಲಿ ಯಾವುದೇ ತಂಡವು ಗೆದ್ದರೂ ಎರಡನೇ ಬಾರಿ ಐಪಿಎಲ್ ಟ್ರೋಫಿ ಗೆದ್ದಂತೆ ಆಗಲಿದೆ. ಒಟ್ಟಿನಲ್ಲಿ ಇಂದಿನ ಪಂದ್ಯ ಕ್ರಿಕೆಟ್ ಅಭಿಮಾನಿಗಳಿಗೆ ಭರಪೂರ ಮನರಂಜನೆ ನೀಡುವ ನಿರೀಕ್ಷೆಯಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

