MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ನಿವೃತ್ತಿ ವಾಪಾಸ್ ಪಡೆದ ವಿಶ್ವಕಪ್‌ ರಣಬೇಟೆಗಾರ..! ಮತ್ತೆ ವಿಶ್ವಕಪ್ ಗೆಲ್ಲಿಸಲು ಪಣತೊಟ್ಟ ಸ್ಟಾರ್ ಕ್ರಿಕೆಟಿಗ

ನಿವೃತ್ತಿ ವಾಪಾಸ್ ಪಡೆದ ವಿಶ್ವಕಪ್‌ ರಣಬೇಟೆಗಾರ..! ಮತ್ತೆ ವಿಶ್ವಕಪ್ ಗೆಲ್ಲಿಸಲು ಪಣತೊಟ್ಟ ಸ್ಟಾರ್ ಕ್ರಿಕೆಟಿಗ

ಲಂಡನ್‌(ಆ.16): ಬಹುನಿರೀಕ್ಷಿತ 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ವೇದಿಕೆ ಸಜ್ಜಾಗಿದೆ. ಟೂರ್ನಿಯಲ್ಲಿ 10 ತಂಡಗಳು ಪಾಲ್ಗೊಳ್ಳುತ್ತಿದ್ದು, ಇದೀಗ ಹಾಲಿ ಚಾಂಪಿಯನ್ ಇಂಗ್ಲೆಂಡ್, ಮತ್ತೊಮ್ಮೆ ಶತಾಯಗತಾಯ ಏಕದಿನ ವಿಶ್ವಕಪ್ ಗೆಲ್ಲಲು ರಣತಂತ್ರ ಹೆಣೆದಿದೆ. ಈ ಕಾರಣಕ್ಕಾಗಿಯೇ ವಿಶ್ವಕಪ್‌ ರಣಬೇಟೆಗಾರ, ಚಾಂಪಿಯನ್ ಆಲ್ರೌಂಡರ್ ನಿವೃತ್ತಿ ವಾಪಾಸ್ ಪಡೆಯಲು ಮನವೊಲಿಸುವಲ್ಲಿ ಯಶಸ್ವಿಯಾಗಿದೆ. 

2 Min read
Author : Naveen Kodase
Published : Aug 16 2023, 03:27 PM IST
Share this Photo Gallery
  • FB
  • TW
  • Linkdin
  • Whatsapp
18

2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯು ಅಕ್ಟೋಬರ್ 05ರಿಂದ ನವೆಂಬರ್ 19ರ ವರೆಗೆ ನಡೆಯಲಿದ್ದು, ಸಂಪೂರ್ಣ ಏಕದಿನ ವಿಶ್ವಕಪ್ ಟೂರ್ನಿಗೆ ಇದೇ ಮೊದಲ ಬಾರಿಗೆ ಭಾರತ ಆತಿಥ್ಯವನ್ನು ವಹಿಸಿದೆ.

28

2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್, ನ್ಯೂಜಿಲೆಂಡ್, ಬಲಿಷ್ಠ ಆಸ್ಟ್ರೇಲಿಯಾ, ಆತಿಥೇಯ ಭಾರತ ಸೇರಿದಂತೆ ಒಟ್ಟು 10 ತಂಡಗಳು ಪಾಲ್ಗೊಳ್ಳುತ್ತಿದ್ದು, ಟ್ರೋಫಿ ಗೆಲ್ಲಲು ಸಕಲ ರಣತಂತ್ರ ಹೆಣೆಯುತ್ತಿವೆ.

38

ಹೀಗಿರುವಾಗಲೇ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವು, ಒಂದು ಹೆಜ್ಜೆ ಮುಂದೆ ಹೋಗಿ ಏಕದಿನ ಕ್ರಿಕೆಟ್‌ನಿಂದ ನಿವೃತ್ತಿ ಪಡೆದಿದ್ದ ಚಾಂಪಿಯನ್ ಆಟಗಾರ ಬೆನ್ ಸ್ಟೋಕ್ಸ್ ಅವರ ಮನವೊಲಿಸಿ ನಿವೃತ್ತಿ ವಾಪಾಸ್ ಪಡೆಯುವಂತೆ ಮಾಡುವಲ್ಲಿ ಸಫಲವಾಗಿದೆ.

48

ಮುಂಬರುವ ಸೆಪ್ಟೆಂಬರ್‌ನಲ್ಲಿ ನ್ಯೂಜಿಲೆಂಡ್ ಎದುರಿನ 4 ಪಂದ್ಯಗಳ ಏಕದಿನ ಸರಣಿಗೆ ಇಂಗ್ಲೆಂಡ್ ಕ್ರಿಕೆಟ್ ತಂಡ ಪ್ರಕಟವಾಗಿದ್ದು, ಸ್ಟಾರ್ ಆಲ್ರೌಂಡರ್ ಬೆನ್ ಸ್ಟೋಕ್ಸ್‌ಗೆ ಮಣೆಹಾಕಲಾಗಿದೆ. 2023ರ ಏಕದಿನ ವಿಶ್ವಕಪ್ ಟೂರ್ನಿಗೂ ಮುನ್ನ ಈ ಸರಣಿ ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್‌ಗೆ ಮಹತ್ವದ್ದೆನಿಸಿದೆ.

58

ಇನ್ನು ಅಚ್ಚರಿಯ ಸಂಗತಿಯೆಂದರೆ ನ್ಯೂಜಿಲೆಂಡ್ ಎದುರಿನ ಏಕದಿನ ಪಂದ್ಯಗಳ ಸರಣಿಗೆ ಇಂಗ್ಲೆಂಡ್ ಪ್ರಕಟಿಸಿದ 15 ಆಟಗಾರರನ್ನೊಳಗೊಂಡ ತಂಡದಲ್ಲಿ ಮಾರಕ ವೇಗಿ ಜೋಫ್ರಾ ಆರ್ಚರ್‌ಗೆ ಸ್ಥಾನ ಸಿಕ್ಕಿಲ್ಲ. ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಆರ್ಚರ್‌, 2023ರ ಏಕದಿನ ವಿಶ್ವಕಪ್ ಟೂರ್ನಿ ಆಡುವುದು ಅನುಮಾನ ಎನಿಸಿದೆ. 

68
ben stokes

ben stokes

ಬೆನ್ ಸ್ಟೋಕ್ಸ್‌, ಟೆಸ್ಟ್ ಕ್ರಿಕೆಟ್‌ನಲ್ಲಿ ಹೆಚ್ಚು ಗಮನ ಹರಿಸುವ ಉದ್ದೇಶದಿಂದ ಏಕದಿನ ವಿಶ್ವಕಪ್ ಟೂರ್ನಿಗೂ ಒಂದು ವರ್ಷ ಬಾಕಿ ಇರುವಂತೆ 2022ರ ಜುಲೈನಲ್ಲಿ ಏಕದಿನ ಕ್ರಿಕೆಟ್‌ಗೆ ದಿಢೀರ್ ಗುಡ್‌ ಬೈ ಹೇಳಿದ್ದರು. ಇನ್ನು 2022ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಬೆನ್ ಸ್ಟೋಕ್ಸ್ ಅದ್ಭುತ ಆಟದ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಜಯಿಸಿದ್ದರು.

78

2019ರಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಬೆನ್ ಸ್ಟೋಕ್ಸ್‌ ಅದ್ಭುತ ಆಲ್ರೌಂಡ್‌ ಪ್ರದರ್ಶನ ತೋರುವ ಮೂಲಕ ಇಂಗ್ಲೆಂಡ್ ತಂಡವು ಚೊಚ್ಚಲ ಬಾರಿಗೆ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅದರಲ್ಲೂ ಸೆಮಿಫೈನಲ್‌ ಹಾಗೂ ಫೈನಲ್‌ನಲ್ಲಿ ಬೆನ್ ಸ್ಟೋಕ್ಸ್ ಅದ್ಭುತ ಬ್ಯಾಟಿಂಗ್ ಯಾವ ಕ್ರಿಕೆಟ್ ಅಭಿಮಾನಿಯೂ ಮರೆಯಲು ಸಾಧ್ಯವಿಲ್ಲ.

88
Ben Stokesನ್ಯೂಜಿಲೆಂಡ್ ಎದುರಿನ ಸರಣಿಗೆ ಇಂಗ್ಲೆಂಡ್ ತಂಡ ಹೀಗಿದೆ:

Ben Stokesನ್ಯೂಜಿಲೆಂಡ್ ಎದುರಿನ ಸರಣಿಗೆ ಇಂಗ್ಲೆಂಡ್ ತಂಡ ಹೀಗಿದೆ:

ಜೋಸ್ ಬಟ್ಲರ್(ನಾಯಕ), ಮೋಯಿನ್ ಅಲಿ, ಗುಸ್ ಅಟ್ಕಿನ್‌ಸನ್, ಜಾನಿ ಬೇರ್‌ಸ್ಟೋವ್, ಸ್ಯಾಮ್ ಕರ್ರನ್, ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಲಾನ್, ಆದಿಲ್ ರಶೀದ್, ಜೋ ರೂಟ್, ಜೇಸನ್‌ ರಾಯ್, ಬೆನ್ ಸ್ಟೋಕ್ಸ್, ರೀಸ್ ಟಾಪ್ಲೆ, ಡೇವಿಡ್ ವಿಲ್ಲೇ, ಮಾರ್ಕ್‌ ವುಡ್‌, ಕ್ರಿಸ್ ವೋಕ್ಸ್‌

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಇಂಗ್ಲೆಂಡ್ ಕ್ರಿಕೆಟ್
ಬೆನ್ ಸ್ಟೋಕ್ಸ್

Latest Videos
Recommended Stories
Recommended image1
ರಣಜಿಯಲ್ಲಿ ಅಮೋಘ ಪ್ರದರ್ಶನ, ಕನ್ನಡಿಗರಿಗೆ ಕದ ತೆರೆಯುತ್ತಾ ಟೀಮ್‌ ಇಂಡಿಯಾ?
Recommended image2
'ಇದು ಸೋಲಲ್ಲ, ಭಾರತಕ್ಕೆ ಆದ ಅವಮಾನ': ಟೀಮ್ ಇಂಡಿಯಾ ಹೀನಾಯ ಸೋಲಿಗೆ ಪಾಕ್ ಮಾಜಿ ಆಟಗಾರರ ಕುಚೋದ್ಯ!
Recommended image3
ಟೀಂ ಇಂಡಿಯಾ 2 ಪಂದ್ಯ ಗೆದ್ದರೂ ಸೆಮಿಗೇರುವುದು ಗ್ಯಾರಂಟಿ ಇಲ್ಲ! ಭಾರತಕ್ಕೆ ವಿಲನ್ ಆದ ನೆಟ್ ರನ್‌ರೇಟ್!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved