- Home
- Sports
- Cricket
- ಅಯ್ಯೋ ಇದೇನಾಯ್ತು..? ಫೈನಲ್ ಸೋತು ಹೋಟೆಲ್ ಕಡೆ ಹೊರಟಿದ್ದ ಗುಜರಾತ್ ಟೈಟಾನ್ಸ್ ಬಸ್‌ನಲ್ಲಿ ಅಗ್ನಿ ಅವಘಡ!
ಅಯ್ಯೋ ಇದೇನಾಯ್ತು..? ಫೈನಲ್ ಸೋತು ಹೋಟೆಲ್ ಕಡೆ ಹೊರಟಿದ್ದ ಗುಜರಾತ್ ಟೈಟಾನ್ಸ್ ಬಸ್‌ನಲ್ಲಿ ಅಗ್ನಿ ಅವಘಡ!
ಅಹಮದಾಬಾದ್: ಎರಡನೇ ಐಪಿಎಲ್ ಟ್ರೋಫಿ ಮೇಲೆ ಕಣ್ಣಿಟ್ಟಿದ್ದ ಗುಜರಾತ್ ಟೈಟಾನ್ಸ್ ತಂಡಕ್ಕೆ ನಿರಾಸೆ ಎದುರಾಗಿದೆ. ಈ ಆಘಾತದಿಂದ ಹೊರಬರುವ ಮುನ್ನವೇ ಮ್ಯಾಚ್ ಮುಗಿಸಿ ಹೋಟೆಲ್ ಕಡೆ ಹೊರಟಿದ್ದ ಗುಜರಾತ್ ಟೈಟಾನ್ಸ್ ಆಟಗಾರರಿದ್ದ ಬಸ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಗುಜರಾತ್ ಟೈಟಾನ್ಸ್ ಆಟಗಾರರಿದ್ದ ಬಸ್‌ನಲ್ಲಿ ತಾಂತ್ರಿಕ ದೋಷ
ಐಪಿಎಲ್ ಫೈನಲ್‌ನಲ್ಲಿ ಸೋತ ನೋವಿನಲ್ಲಿದ್ದ ಶುಭ್‌ಮನ್ ಗಿಲ್ ನೇತೃತ್ವದ ಗುಜರಾತ್ ಟೈಟನ್ಸ್ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಭಾನುವಾರ ರಾತ್ರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಫೈನಲ್ ಪಂದ್ಯ ಮುಗಿಸಿ ಹೋಟೆಲ್‌ಗೆ ಮರಳುತ್ತಿದ್ದಾಗ, ತಂಡದ ಆಟಗಾರರು ಮತ್ತು ಸಹಾಯಕ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಬಸ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ.
ಬಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್
ವರದಿಗಳ ಪ್ರಕಾರ, ಬಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ, ವಾಹನವು ದಾರಿ ಮಧ್ಯೆಯೇ ನಿಂತುಹೋಗಿದೆ. ಇದರ ಬೆನ್ನಲ್ಲೇ ಬಸ್‌ನೊಳಗೆ ದಟ್ಟ ಹೊಗೆ ಆವರಿಸಿದೆ ಎಂದು ಪಿಟಿಐ ವರದಿ ಮಾಡಿದೆ. ಹೊಗೆಯನ್ನು ಕಂಡ ತಕ್ಷಣ ಆಟಗಾರರು ಮತ್ತು ಸಿಬ್ಬಂದಿ ಆತಂಕಗೊಂಡಿದ್ದಾರೆ. ತಕ್ಷಣವೇ ಎಲ್ಲರನ್ನೂ ಬಸ್‌ನಿಂದ ಕೆಳಗೆ ಇಳಿಸಲಾಗಿದೆ.
ಬೇರೆ ಬಸ್‌ನಲ್ಲಿ ಹೋಟೆಲ್‌ಗೆ ತೆರಳಿದ ಗುಜರಾತ್ ಟೈಟಾನ್ಸ್ ತಂಡ
ಈ ಘಟನೆಯಲ್ಲಿ ಯಾವುದೇ ಆಟಗಾರರಿಗೆ ಅಥವಾ ಸಿಬ್ಬಂದಿಗೆ ಗಾಯಗಳಾಗಿಲ್ಲ, ಎಲ್ಲರೂ ಸುರಕ್ಷಿತವಾಗಿದ್ದಾರೆ. ಬಸ್‌ನಿಂದ ಇಳಿದ ತಂಡದ ಸದಸ್ಯರು ಸ್ವಲ್ಪ ಸಮಯ ರಸ್ತೆ ಬದಿಯಲ್ಲೇ ಕಾಯಬೇಕಾಯಿತು. ನಂತರ, ಅಧಿಕಾರಿಗಳು ಮತ್ತೊಂದು ಬಸ್ ವ್ಯವಸ್ಥೆ ಮಾಡಿದರು. ಆ ಬಸ್‌ನಲ್ಲಿ ಆಟಗಾರರು ಮತ್ತು ಸಿಬ್ಬಂದಿ ತಮ್ಮ ಹೋಟೆಲ್‌ಗೆ ಪ್ರಯಾಣ ಮುಗಿಸಿದರು.
ಗುಜರಾತ್ ಟೈಟಾನ್ಸ್‌ಗೆ ಗಾಯದ ಮೇಲೆ ಬರೆ ಎಳೆದಂತಾದ ಈ ಘಟನೆ
ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಐದು ವಿಕೆಟ್‌ಗಳಿಂದ ಸೋಲುಂಡು ನಿರಾಸೆಯಲ್ಲಿದ್ದ ಗುಜರಾತ್ ಟೈಟನ್ಸ್ ತಂಡಕ್ಕೆ ಈ ಘಟನೆ ಮತ್ತೊಂದು ಹಿನ್ನಡೆಯಾಗಿ ಪರಿಣಮಿಸಿತು.
ಎಲ್ಲರೂ ಸುರಕ್ಷಿತವಾಗಿದ್ದಾರೆಂದು ಖಚಿತಪಡಿಸಿದ ಗುಜರಾತ್ ಟೈಟಾನ್ಸ್ ಫ್ರಾಂಚೈಸಿ
ಆದರೆ, ಬಸ್‌ನಲ್ಲಿ ಹೊಗೆ ಕಾಣಿಸಿಕೊಂಡರೂ ಸಮಯಕ್ಕೆ ಸರಿಯಾಗಿ ಎಲ್ಲರನ್ನೂ ಕೆಳಗಿಳಿಸಿದ್ದರಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಸದ್ಯ ತಂಡದ ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ತಂಡದ ಆಡಳಿತ ಮಂಡಳಿ ಖಚಿತಪಡಿಸಿದೆ.
RCB ಚಾಂಪಿಯನ್
2026ರ ಐಪಿಎಲ್ ಫೈನಲ್‌ನಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು ನಿಗದಿತ 20 ಓವರ್‌ಗಳಲ್ಲಿ ಕೇವಲ 155 ರನ್‌ಗಳ ಸಾಧಾರಣ ಮೊತ್ತ ಕಲೆಹಾಕಿತು. ಈ ಗುರಿ ಬೆನ್ನತ್ತಿದ ಆರ್‌ಸಿಬಿ ತಂಡವು ಇನ್ನೂ ಎರಡು ಓವರ್ ಬಾಕಿ ಇರುವಂತೆಯೇ, ಐದು ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿ ಸತತ ಎರಡನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

