IPL 2021 ಆರ್‌ಸಿಬಿ ಸಂಭಾವ್ಯ ತಂಡ ಪ್ರಕಟಿಸಿದ ಬ್ರಾಡ್‌ ಹಾಗ್; ದುಬಾರಿ ಆಟಗಾರನಿಗಿಲ್ಲ ಸ್ಥಾನ..!

First Published Apr 4, 2021, 11:20 AM IST

ಬೆಂಗಳೂರು: ಕ್ರಿಕೆಟ್‌ ಅಭಿಮಾನಿಗಳಲ್ಲಿ ನಿಧಾನವಾಗಿ ಐಪಿಎಲ್‌ ಜ್ವರ ಕಾವೇರುತ್ತಿದ್ದು, 14ನೇ ಆವೃತ್ತಿಯ ಐಪಿಎಲ್ ಟೂರ್ನಿಗೆ ಕ್ಷಣಗಣನೆ ಆರಂಭವಾಗಿದೆ.  ಇನ್ನು ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಬ್ರಾಡ್‌ ಹಾಗ್‌ 14ನೇ ಆವೃತ್ತಿಯ ಐಪಿಎಲ್‌ಗೆ ಆರ್‌ಸಿಬಿ ಸಂಭಾವ್ಯ ತಂಡವನ್ನು ಆಯ್ಕೆ ಮಾಡಿದ್ದು, 15 ಕೋಟಿ ರುಪಾಯಿಗೆ ಆರ್‌ಸಿಬಿ ಪಾಲಾಗಿರುವ ಕೈಲ್ ಜೇಮಿಸನ್‌ಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ನೀಡದಿರುವುದು ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ. ಹಾಗ್‌ ಪ್ರಕಾರ ಆರ್‌ಸಿಬಿಯ ಬಲಿಷ್ಠ ತಂಡದಲ್ಲಿ ಯಾರೆಲ್ಲಾ ಸ್ಥಾನ ಪಡೆದಿದ್ದಾರೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.