MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Sports
  • Cricket
  • Good News: ಟೀಂ ಇಂಡಿಯಾ ಹೆಡ್ ಕೋಚ್ ಆಗಿ ರಾಹುಲ್ ದ್ರಾವಿಡ್‌ ಆಯ್ಕೆ..!

Good News: ಟೀಂ ಇಂಡಿಯಾ ಹೆಡ್ ಕೋಚ್ ಆಗಿ ರಾಹುಲ್ ದ್ರಾವಿಡ್‌ ಆಯ್ಕೆ..!

ಬೆಂಗಳೂರು: 'ದ ವಾಲ್‌' ಖ್ಯಾತಿಯ ದಿಗ್ಗಜ ಕ್ರಿಕೆಟಿಗ, ಕನ್ನಡಿಗ ರಾಹುಲ್‌ ದ್ರಾವಿಡ್‌ (Rahul Dravid) ಟೀಂ ಇಂಡಿಯಾ ಕೋಚ್ (Team India Coach) ಆಗಲು ಸಮ್ಮತಿ ಸೂಚಿಸಿದ್ದಾರೆ. ಈ ಸುದ್ದಿ ಭಾರತೀಯ ಕ್ರಿಕೆಟ್ ವಲಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿದೆ. ಸದ್ಯ ರವಿಶಾಸ್ತ್ರಿ (Ravi Shastri) ಟೀಂ ಇಂಡಿಯಾ ಹೆಡ್ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, 2021ರ ಟಿ20 ವಿಶ್ವಕಪ್ (T20 World Cup) ಮುಕ್ತಾಯದ ಬಳಿಕ ರವಿಶಾಸ್ತ್ರಿ ಒಪ್ಪಂದದ ಅವಧಿ ಮುಕ್ತಾಯಗೊಳ್ಳಲಿದೆ. ಬಳಿಕ ದ್ರಾವಿಡ್ ಪ್ರಧಾನ ಕೋಚ್ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಸೌರವ್ ಗಂಗೂಲಿ (Sourav Ganguly) ಯ ನಿರಂತರ ಪ್ರಯತ್ನ ಕೊನೆಗೂ ಫಲ ಕೊಟ್ಟಿದೆ. ಈ ಕುರಿತಾದ ಇಂಟ್ರೆಸ್ಟಿಂಗ್ ರಿಪೋರ್ಟ್ ಇಲ್ಲಿದೆ ನೋಡಿ.

2 Min read
Suvarna News | Asianet News
Published : Oct 16 2021, 02:45 PM IST
Share this Photo Gallery
  • FB
  • TW
  • Linkdin
  • Whatsapp
111

ಭಾರತೀಯ ಕ್ರಿಕೆಟ್ ವಲಯದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಟೀಂ ಇಂಡಿಯಾ ಹೆಡ್ ಕೋಚ್ ಆಗಿ ಕಾರ್ಯ ನಿರ್ವಹಿಸಲು ರಾಹುಲ್ ದ್ರಾವಿಡ್ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.

211

ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೋಲ್ಕತ ನೈಟ್ ರೈಡರ್ಸ್ ನಡುವಿನ ಫೈನಲ್ ಪಂದ್ಯದ ವೇಳೆ ಈ ಮಹತ್ವದ ಬೆಳವಣಿಗೆಯಾಗಿದೆ. ದುಬೈನಲ್ಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹಾಗೂ ಕಾರ್ಯದರ್ಶಿ ಜಯ್ ಶಾ ವಿಡಿಯೋ ಕಾನ್ಫರೆನ್ಸ್‌ ಮೂಲಕ ರಾಹುಲ್ ದ್ರಾವಿಡ್ ಜತೆ ಸಮಾಲೋಚನೆ ನಡೆಸಿದ್ದಾರೆ. 

311

ಮುಂಬರುವ ಐಸಿಸಿ ಟಿ20 ವಿಶ್ವಕಪ್ ಮುಕ್ತಾಯದ ಬಳಿಕ ಟೀಂ ಇಂಡಿಯಾ ಕೋಚ್ ಆಗಲು ರಾಹುಲ್ ದ್ರಾವಿಡ್ ಒಪ್ಪಿಕೊಂಡಿದ್ದಾರೆ ಟೈಮ್ಸ್ ಆಫ್‌ ಇಂಡಿಯಾ ವರದಿ ಮಾಡಿದೆ.
 

411

ರಾಹುಲ್ ದ್ರಾವಿಡ್ ಭಾರತ ಕ್ರಿಕೆಟ್ ತಂಡದ ಮುಂದಿನ ಕೋಚ್ ಆಗುವುದು ಖಚಿತವಾಗಿದೆ. ಶೀಘ್ರದಲ್ಲಿಯೇ ನ್ಯಾಷನಲ್ ಕ್ರಿಕೆಟ್ ಅಕಾಡಮಿ(ಎನ್‌ಸಿಎ) ಮುಖ್ಯಸ್ಥ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ ಎಂದು ಬಿಸಿಸಿಐ ಅಧಿಕಾರಿಗಳು ಟೈಮ್ಸ್ ಆಫ್‌ ಇಂಡಿಯಾಗೆ ತಿಳಿಸಿದ್ದಾರೆಂದು ವರದಿಯಾಗಿದೆ.
 

511

ಇನ್ನು ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಪರಾಸ್ ಮಹಾಂಬ್ರೆ ಭಾರತ ಕ್ರಿಕೆಟ್ ತಂಡದ ಬೌಲಿಂಗ್ ಕೋಚ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ. ಆದರೆ ಫೀಲ್ಡಿಂಗ್ ಕೋಚ್ ಆಗಿ ಶ್ರೀಧರ್ ಅವರೇ ಮುಂದುವರೆಯುವ ಸಾಧ್ಯತೆಯಿದೆ ಎನ್ನಲಾಗಿದೆ.
 

611

ರಾಹುಲ್ ದ್ರಾವಿಡ್ ಅವರು 2023ರವರೆಗೆ ಭಾರತ ಕ್ರಿಕೆಟ್ ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸಲು ಒಪ್ಪಂದ ಮಾಡಿಕೊಂಡಿದ್ದು, ವಾರ್ಷಿಕ 10 ಕೋಟಿ ಸಂಭಾವನೆಯನ್ನು ಬಿಸಿಸಿಐನಿಂದ ಪಡೆಯಲಿದ್ದಾರೆ ಎಂದು ವರದಿಯಾಗಿದೆ. 

711

ಸದ್ಯ ಭಾರತ ತಂಡದ ಹೆಡ್‌ ಕೋಚ್ ಆಗಿ ರವಿಶಾಸ್ತ್ರಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮುಂಬರುವ ಟಿ20 ವಿಶ್ವಕಪ್ ಬಳಿಕ ರವಿಶಾಸ್ತ್ರಿ ಕೋಚ್ ಅಧಿಕಾರವಧಿ ಮುಕ್ತಾಯವಾಗಲಿದ್ದು, ರವಿಶಾಸ್ತ್ರಿ ಸ್ಥಾನವನ್ನು ರಾಹುಲ್ ದ್ರಾವಿಡ್ ತುಂಬಲಿದ್ದಾರೆ.
 

811

2012ರಲ್ಲಿ ರಾಹುಲ್ ದ್ರಾವಿಡ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು, ಇದಾದ ಬಳಿಕ 2016ರಿಂದ 2019ರವರೆಗೆ ಭಾರತ 'ಎ' ಹಾಗೂ ಅಂಡರ್ 19 ತಂಡಕ್ಕೆ ಕೋಚ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 

911

2016ರ ಅಂಡರ್ 19 ವಿಶ್ವಕಪ್‌ನಲ್ಲಿ ಭಾರತ ತಂಡ ರನ್ನರ್ ಅಪ್‌ ಸ್ಥಾನ ಪಡೆದರೆ, 2018ರಲ್ಲಿ ದ್ರಾವಿಡ್‌ ಮಾರ್ಗದರ್ಶನದಲ್ಲಿ ಪೃಥ್ವಿ ಶಾ ನೇತೃತ್ವದ ಭಾರತ ಕಿರಿಯರ ತಂಡ ವಿಶ್ವಕಪ್ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. 

1011

2019ರ ಬಳಿಕ ಬೆಂಗಳೂರಿನಲ್ಲಿರುವ ನ್ಯಾಷನಲ್ ಕ್ರಿಕೆಟ್ ಅಕಾಡಮಿ (ಎನ್‌ಸಿಎ) ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೆಲ ತಿಂಗಳ ಹಿಂದಷ್ಟೇ ಭಾರತ ತಂಡ ಲಂಕಾ ಪ್ರವಾಸ ಕೈಗೊಂಡಿದ್ದಾಗ ರಾಹುಲ್‌ ಮೊದಲ ಬಾರಿಗೆ ಟೀಂ ಇಂಡಿಯಾ ಕೋಚ್ ಆಗಿ ಕಾರ್ಯ ನಿರ್ವಹಿಸಿ ಸೈ ಎನಿಸಿಕೊಂಡಿದ್ದರು.

1111

ರಾಹುಲ್ ದ್ರಾವಿಡ್ ಭಾರತ ಪರ 164 ಟೆಸ್ಟ್, 344 ಏಕದಿನ ಹಾಗೂ ಒಂದು ಟಿ20 ಪಂದ್ಯಗಳನ್ನಾಡಿದ್ದು, ಕ್ರಮವಾಗಿ 13,288, 10,889 ಹಾಗೂ 31 ರನ್‌ ಬಾರಿಸಿದ್ದಾರೆ. 

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved