ರೋಹಿತ್ ಶರ್ಮಾರಿಂದ ಮೊಹಮ್ಮದ್ ಶಮಿವರೆಗೆ: ಬೆಂಗಳೂರಿನಲ್ಲಿ ಭರ್ಜರಿ ದೀಪಾವಳಿ ಆಚರಿಸಿದ ಟೀಂ ಇಂಡಿಯಾ
ಬೆಂಗಳೂರು: 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಅದ್ಭುತ ಪ್ರದರ್ಶನದ ಮೂಲಕ ಮಿಂಚುತ್ತಿದೆ. ಈಗಾಗಲೇ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸೆಮೀಸ್‌ಗೆ ಲಗ್ಗೆಯಿಟ್ಟಿರುವ ಟೀಂ ಇಂಡಿಯಾ, ಲೀಗ್ ಹಂತದ ಕೊನೆಯ ಪಂದ್ಯವನ್ನು ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ಆಡಲಿದೆ.
ನೆದರ್‌ಲೆಂಡ್ಸ್ ಎದುರಿನ ಪಂದ್ಯಕ್ಕೂ ಟೀಂ ಇಂಡಿಯಾ ಆಟಗಾರರು ಸಾಂಪ್ರದಾಯಿಕ ಉಡುಗೆ ತೊಟ್ಟು ದೀಪಾವಳಿ ಹಬ್ಬವನ್ನು ಆಚರಿಸಿದರು. ಟೀಂ ಇಂಡಿಯಾ ಆಟಗಾರರ ಸಂಭ್ರಮಾಚರಣೆಯ ಝಲಕ್ ಹೀಗಿತ್ತು ನೋಡಿ.
ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅಜೇಯ ನಾಗಾಲೋಟ ಮುಂದುವರೆಸಿರುವ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಬೆಂಗಳೂರಿನಲ್ಲಿ ಭರ್ಜರಿಯಾಗಿಯೇ ಬೆಳಕಿನ ಹಬ್ಬವಾದ ದೀಪಾವಳಿಯನ್ನು ಆಚರಿಸಿದೆ.
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಪತ್ನಿ ರಿತಿಕಾ ಸಜ್ದೇ ಜತೆ ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದು, ಅಭಿಮಾನಿಗಳಿಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ.
ಮೊಹಮ್ಮದ್ ಶಮಿ ಶೈನಿಂಗ್:
ಟೀಂ ಇಂಡಿಯಾ ಅನುಭವಿ ವೇಗಿ ಮೊಹಮ್ಮದ್ ಶಮಿ ಬಿಳಿ ಬಣ್ಣದ ಶೆರ್ವಾನಿಯಲ್ಲಿ ಮಿಂಚಿದ್ದು, ದೀಪಾವಳಿ ಹಬ್ಬಕ್ಕೆ ದೇಶದ ಜನರಿಗೆ ಶುಭ ಕೋರಿದ್ದಾರೆ.
ವಿಶ್ವಕಪ್ ಟೂರ್ನಿಯಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನದ ಮೂಲಕ ಮಿಂಚುತ್ತಿರುವ ಟೀಂ ಇಂಡಿಯಾ ತ್ರಿವಳಿ ವೇಗಿಗಳಾದ ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಹಾಗೂ ಜಸ್ಪ್ರೀತ್ ಬುಮ್ರಾ ಬಿಂದಾಸ್ ಆಗಿ ಪೋಸ್ ಕೊಟ್ಟಿದ್ದಾರೆ.
ಇನ್ನು ಟೀಂ ಇಂಡಿಯಾ ರನ್ ಮಷೀನ್ ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮಾ ಕೂಡಾ ದೀಪಾವಳಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದು, ಎಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯಗಳು ಎಂದು ಅಭಿಮಾನಿಗಳಿಗೆ ಶುಭ ಹಾರೈಸಿದ್ದಾರೆ.
ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್, ಶುಭ್‌ಮನ್ ಗಿಲ್, ಮಣಿಕಟ್ಟು ಸ್ಪಿನ್ನರ್ ಕುಲ್ದೀಪ್ ಯಾದವ್, ವೇಗಿ ಮೊಹಮ್ಮದ್ ಸಿರಾಜ್ ಒಟ್ಟಿಗೆ ಕುಳಿತುಕೊಂಡು ಫೋಸ್ ಕೊಟ್ಟ ರೀತಿ.