ಇಂಗ್ಲೆಂಡ್‌ನಿಂದ ದಿಢೀರ್ ತವರಿಗೆ ವಾಪಾಸ್ ಬಂದ ಗೌತಮ್ ಗಂಭೀರ್! ಟೀಂ ಇಂಡಿಯಾ ಪಾಳಯದಲ್ಲಿ ಆತಂಕ
ಲಂಡನ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಐತಿಹಾಸಿಕ 5 ಪಂದ್ಯಗಳ ಟೆಸ್ಟ್ ಸರಣಿ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ದಿಢೀರ್ ಎನ್ನುವಂತೆ ಗೌತಮ್ ಗಂಭೀರ್ ತವರಿಗೆ ವಾಪಾಸ್ಸಾಗಿದ್ದಾರೆ. ಅಷ್ಟಕ್ಕೂ ಯಾಕೆ ಹೀಗೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

ಭಾರತ ಹಾಗೂ ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಜೂನ್ 20ರಿಂದ ಆರಂಭವಾಗಲಿದೆ. ಈಗಾಗಲೇ ಶುಭ್‌ಮನ್ ಗಿಲ್ ನೇತೃತ್ವದ ಟೀಂ ಇಂಡಿಯಾ, ಇಂಗ್ಲೆಂಡ್‌ನಲ್ಲಿ ಬೀಡುಬಿಟ್ಟಿದ್ದು, ಭರ್ಜರಿ ಅಭ್ಯಾಸ ನಡೆಸುತ್ತಿದೆ.
ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾಗೂ ರವಿಚಂದ್ರನ್ ಅಶ್ಚಿನ್ ಅವರಂತಹ ದಿಗ್ಗಜ ಆಟಗಾರರ ಅನುಪಸ್ಥಿತಿಯಲ್ಲಿ ಯುವ ಆಟಗಾರರನ್ನೊಳಗೊಂಡ ತಂಡ, ಇಂಗ್ಲೆಂಡ್ ಪ್ರವಾಸದಲ್ಲಿದ್ದು 2007ರ ಬಳಿಕ ಆಂಗ್ಲರ ನೆಲದಲ್ಲಿ ಟೆಸ್ಟ್ ಸರಣಿ ಗೆದ್ದು ಇತಿಹಾಸ ಬರೆಯಲು ಎದುರು ನೋಡುತ್ತಿದೆ.
ಇನ್ನು ಟೀಂ ಇಂಡಿಯಾ ಹೆಡ್ ಕೋಚ್ ಗೌತಮ್ ಗಂಭೀರ್, ತಮ್ಮ ಸ್ಪೂರ್ತಿಯ ಮಾತುಗಳನ್ನಾಡುತ್ತಾ ಯುವ ಪಡೆಯನ್ನು ಹುರಿದುಂಬಿಸುತ್ತಿದ್ದರು. ಹೀಗಿರುವಾಗಲೇ ದಿಢೀರ್ ಎನ್ನುವಂತೆ ಇಂಗ್ಲೆಂಡ್‌ನಿಂದ ಭಾರತಕ್ಕೆ ವಾಪಾಸ್ಸಾಗಿದ್ದಾರೆ.
ಹೌದು, ಗೌತಮ್ ಗಂಭೀರ್ ಅವರಿಗೆ ಹೃದಯಾಘಾತವಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ದಾಖಲಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕಾರಣಕ್ಕಾಗಿ ತಾಯಿಯ ಯೋಗಕ್ಷೇಮ ವಿಚಾರಿಸುವ ಸಲುವಾಗಿ ಗೌತಮ್ ಗಂಭೀರ್ ತವರಿಗೆ ವಾಪಾಸ್ಸಾಗಿದ್ದಾರೆ.
ಇದು ಟೀಂ ಇಂಡಿಯಾ ಪಾಳಯದಲ್ಲಿ ಕೊಂಚ ಆತಂಕ ಮನೆಮಾಡುವಂತೆ ಮಾಡಿದೆ. ಆದರೆ ಕೆಲ ವರದಿಗಳ ಪ್ರಕಾರ, ಗೌತಮ್ ಗಂಭೀರ್ ಮೊದಲ ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನವೇ ಇಂಗ್ಲೆಂಡ್‌ನಲ್ಲಿ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.
ಭಾರತ-ಇಂಗ್ಲೆಂಡ್ 5 ಪಂದ್ಯಗಳ ಟೆಸ್ಟ್ ಸರಣಿ ವೇಳಾಪಟ್ಟಿ
ಜೂನ್ 20-24; ಹೆಡಿಂಗ್ಲೆ ಟೆಸ್ಟ್
ಜುಲೈ 2-6; ಎಡ್ಜ್‌ಬಾಸ್ಟನ್ ಟೆಸ್ಟ್
ಜುಲೈ 10-14; ಲಾರ್ಡ್ಸ್ ಟೆಸ್ಟ್
ಜುಲೈ 23-27; ಓಲ್ಡ್ ಟ್ರಾಫರ್ಡ್ ಟೆಸ್ಟ್
ಜುಲೈ 31ರಿಂದ ಆಗಸ್ಟ್ 04; ದಿ ಓವಲ್