ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಗರಿಷ್ಠ ರನ್, ಗರಿಷ್ಠ ವಿಕೆಟ್ ಕಬಳಿಸಿದ ಆಟಗಾರರಿವರು!
ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಗಿಲ್ ರನ್‌ಗಳಿಸುವುದರಲ್ಲಿ ಮುಂದಿದ್ದರೆ, ವಿಕೆಟ್ ಪಡೆಯುವುದರಲ್ಲಿ ಮೊಹಮ್ಮದ್ ಸಿರಾಜ್ ಮುಂಚೂಣಿಯಲ್ಲಿದ್ದಾರೆ.
ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿಯ ಐದು ಪಂದ್ಯಗಳಲ್ಲಿ ನಾಲ್ಕು ಶತಕ ಸೇರಿದಂತೆ 754 ರನ್ ಗಳಿಸಿ ಗಿಲ್ ಮೊದಲ ಸ್ಥಾನ ಪಡೆಯುವಲ್ಲಿ ಯಶಸ್ವಿಯಾದರು.
537 ರನ್‌ಗಳೊಂದಿಗೆ ಇಂಗ್ಲೆಂಡ್ ಮಾಜಿ ನಾಯಕ ಜೋ ರೂಟ್, ಕನ್ನಡಿಗ ರಾಹುಲ್‌ರನ್ನು ಹಿಂದಿಕ್ಕಿ ಎರಡನೇ ಸ್ಥಾನ ಪಡೆದರು.
ಐದು ಟೆಸ್ಟ್‌ಗಳಲ್ಲಿ 185.3 ಓವರ್‌ಗಳನ್ನು ಎಸೆದ ಸಿರಾಜ್ 23 ವಿಕೆಟ್‌ಗಳನ್ನು ಪಡೆದು ಗರಿಷ್ಠ ವಿಕೆಟ್ ಕಬಳಿಸಿದ ಬೌಲರ್ ಆಗಿ ಹೊರಹೊಮ್ಮಿದರು.
5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 4 ಶತಕ ಸಿಡಿಸುವ ಮೂಲಕ ಶುಭ್‌ಮನ್ ಗಿಲ್, ಈ ಟೆಸ್ಟ್ ಸರಣಿಯಲ್ಲಿ ಗರಿಷ್ಠ ಶತಕ ಸಿಡಿಸಿದ ಬ್ಯಾಟರ್ ಎನ್ನುವ ಕೀರ್ತಿಗೆ ಪಾತ್ರರಾದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

