MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Ind vs SL 1st Test
Bandipur National Park
Hanur Shootout Case
Bengaluru Schools H1N1 Case
Ayodhye Ram Mandir Theft Case
Tungabhadra Backwaters Accident
DPL Nitish Rana
Congress Vande Mataram Row
Karnataka Housing Scheme
Bengaluru Elevated Corridor
JDS MLC Suraj Revanna
Bengaluru Outer Ring-Road Project
  • Home
  • Sports
  • Cricket
  • 2022ರ ಟಿ20 ವಿಶ್ವಕಪ್‌ಗೆ ಸೆಲೆಕ್ಟ್ ಆಗಿದ್ದೇ ಆರ್‌ಸಿಬಿ ಫ್ಯಾನ್ಸ್‌ಗಳಿಂದ..! ಅವರ ಸಪೋರ್ಟ್ ನಾನೆಂದೂ ಮರೆಯೊಲ್ಲ: ಡಿಕೆ

2022ರ ಟಿ20 ವಿಶ್ವಕಪ್‌ಗೆ ಸೆಲೆಕ್ಟ್ ಆಗಿದ್ದೇ ಆರ್‌ಸಿಬಿ ಫ್ಯಾನ್ಸ್‌ಗಳಿಂದ..! ಅವರ ಸಪೋರ್ಟ್ ನಾನೆಂದೂ ಮರೆಯೊಲ್ಲ: ಡಿಕೆ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಕೆಟ್ ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್ ಇದೀಗ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಇದರ ಬೆನ್ನಲ್ಲೇ ಆರ್‌ಸಿಬಿ ತಂಡ ಹಾಗೂ ಆರ್‌ಸಿಬಿ ಅಭಿಮಾನಿಗಳನ್ನು ಕೃತಜ್ಞತೆಯಿಂದ ಸ್ಮರಿಸಿಕೊಂಡಿದ್ದಾರೆ. 

2 Min read
Author : Naveen Kodase
Published : May 25 2024, 06:01 PM IST
Share this Photo Gallery
  • FB
  • TW
  • Linkdin
  • Whatsapp
110

17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಯಾನ ಎಲಿಮಿನೇಟರ್ ಹಂತದಲ್ಲೇ ಮುಕ್ತಾಯವಾಯಿತು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
210

ಇನ್ನು ಆರ್‌ಸಿಬಿ ತಂಡವು ನಾಕೌಟ್ ಹಂತದಲ್ಲಿ ಸೋಲುವುದರೊಂದಿಗೆ ತಂಡದ ಅನುಭವಿ ವಿಕೆಟ್ ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್ ಅವರ ಸ್ಪರ್ಧಾತ್ಮಕ ಕ್ರಿಕೆಟ್ ವೃತ್ತಿ ಬದುಕಿಗೂ ತೆರೆ ಬಿದ್ದಿತು.

310

ಇನ್ನು ವಿದಾಯದ ಬೆನ್ನಲ್ಲೇ ದಿನೇಶ್ ಕಾರ್ತಿಕ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಆರ್‌ಸಿಬಿ ಫ್ಯಾನ್ಸ್ ಸಪೋರ್ಟ್‌ ಅನ್ನು ಮನದುಂಬಿ ಸ್ಮರಿಸಿಕೊಂಡಿದ್ದಾರೆ.

410

ಹೌದು, 2022ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆಯಲು ಆರ್‌ಸಿಬಿ ಹಾಗೂ ಆರ್‌ಸಿಬಿ ಫ್ಯಾನ್ಸ್ ಪಾತ್ರ ಮಹತ್ವದ್ದಾಗಿದೆ ಎಂದು ಡಿಕೆ ಹೇಳಿದ್ದಾರೆ.

510

2019ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಸೆಮೀಸ್‌ನಲ್ಲಿ ಸೋತು ಹೊರಬೀಳುತ್ತಿದ್ದಂತೆಯೇ ದಿನೇಶ್ ಕಾರ್ತಿಕ್ ಅವರಿಗೆ ಟೀಂ ಇಂಡಿಯಾ ಡೋರ್ ಬಂದ್ ಆಗಿತ್ತು.

610

ಆದರೆ ಮರು ವರ್ಷ ಆರ್‌ಸಿಬಿ ತಂಡ ಕೂಡಿಕೊಂಡ ಡಿಕೆ ಅದ್ಭುತ ಪ್ರದರ್ಶನ ತೋರಿದ್ದರು. 2022ರ ಐಪಿಎಲ್ ಟೂರ್ನಿಯಲ್ಲಿ ಡಿಕೆ 55ರ ಸರಾಸರಿಯಲ್ಲಿ 330 ರನ್ ಸಿಡಿಸಿ ಆಯ್ಕೆ ಸಮಿತಿಯ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದರು.

710

ಇದರ ಬೆನ್ನಲ್ಲೇ ದಕ್ಷಿಣ ಆಫ್ರಿಕಾ ಎದುರಿನ ಸರಣಿಗೆ ಡಿಕೆಯನ್ನು ಆಯ್ಕೆ ಮಾಡಲಾಯಿತು. ಅಲ್ಲಿಯೂ ಉತ್ತಮ ಪ್ರದರ್ಶನ ತೋರಿದ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ 2022ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ದಿನೇಶ್ ಕಾರ್ತಿಕ್ ಅವರನ್ನು ಭಾರತ ತಂಡಕ್ಕೆ ಆಯ್ಕೆ ಮಾಡಲಾಯಿತು.

810

"ಆರ್‌ಸಿಬಿ ಜತೆಗಿನ ನನ್ನ ಪಯಣ ಅತ್ಯದ್ಭುತ. ನನ್ನ ಪ್ರಕಾರ ಆರ್‌ಸಿಬಿ ಅಂದರೆ ಅದು ಫ್ಯಾನ್ಸ್. ಆರ್‌ಸಿಬಿ ತಂಡದಲ್ಲಿ ವಿರಾಟ್ ಕೊಹ್ಲಿಗೆ ದೊಡ್ಡ ಹೆಸರಿದೆ ಎನ್ನುವುದು ಗೊತ್ತು. ಆದರೆ ಆರ್‌ಸಿಬಿಗೆ ವಿರಾಟ್ ಕೊಹ್ಲಿಗಿಂತ ದೊಡ್ಡ ಫ್ಯಾನ್ ಬೇಸ್‌ ಇದೆ ಎಂದು ಡಿಕೆ ಹೇಳಿದ್ದಾರೆ.

910

ನನಗಂಗೂ ಆರ್‌ಸಿಬಿ ಅಭಿಮಾನಿಗಳು ಅಪಾರ ಪ್ರೀತಿ ಹಾಗೂ ಗೌರವ ನೀಡಿದ್ದಾರೆ. 2022ರ ಟಿ20 ವಿಶ್ವಕಪ್ ಆಯ್ಕೆ ನೆನಸಿಕೊಂಡರೆ, ಅದು ಸಾಧ್ಯವಾಗಿದ್ದು ಆರ್‌ಸಿಬಿ ಫ್ಯಾನ್ಸ್‌ನಿಂದ ಎಂದೆನಿಸುತ್ತದೆ. ಡಿಕೆಗೆ ಟೀಂ ಇಂಡಿಯಾದಲ್ಲಿ ಸ್ಥಾನ ನೀಡಬೇಕು ಎಂದು ದೊಡ್ಡ ಸಂಖ್ಯೆಯಲ್ಲಿ ಆರ್‌ಸಿಬಿ ಫ್ಯಾನ್ಸ್ ಆಗ್ರಹಿಸಿದ್ದರು. ಅದನ್ನಂತು ನಾನು ಯಾವತ್ತಿಗೂ ಮರೆಯೊಲ್ಲ ಎಂದು ಡಿಕೆ ಹೇಳಿದ್ದಾರೆ.

1010

37 ವರ್ಷದ ದಿನೇಶ್ ಕಾರ್ತಿಕ್, ರಾಜಸ್ಥಾನ ರಾಯಲ್ಸ್ ಎದುರು ತಮ್ಮ ವೃತ್ತಿಜೀವನದ ಕೊನೆಯ ಐಪಿಎಲ್ ಪಂದ್ಯವನ್ನಾಡಿದ್ದಾರೆ. ಇದೀಗ ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಡಿಕೆ ಕಾಮೆಂಟೇಟರ್ ಆಗಿ ಕಾಣಿಸಿಕೊಳ್ಳಲಿದ್ದಾರೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಆರ್‌ಸಿಬಿ

Latest Videos
Recommended Stories
Recommended image1
ಗಾಲೆ ಟೆಸ್ಟ್‌: ಶುಭ್‌ಮನ್ ಗಿಲ್ ದಾಖಲೆ ನುಚ್ಚುನೂರು, WTC ಯಲ್ಲಿ ಯಾವ ಭಾರತೀಯನೂ ಮಾಡಿರದ ಅಪರೂಪದ ದಾಖಲೆ ನಿರ್ಮಿಸಿದ ರಿಷಭ್ ಪಂತ್!
Recommended image2
ಮೈದಾನದಲ್ಲಿ ಈತನ ಕಾಮೆಂಟರಿ ನಗು ತರಿಸಿದ್ರೂ, ಕೆಲವೊಮ್ಮೆ ಇರಿಟೇಟ್ ಎಂದ ಅಜಿಂಕ್ಯ ರಹಾನೆ..! ಹೀಗಂದಿದ್ದು ಈ ಸ್ಟಾರ್ ಕ್ರಿಕೆಟರ್‌ಗೆ
Recommended image3
ಅರ್ಧಶತಕ ಬಾರಿಸಿ ಮೈದಾನದಲ್ಲೇ ಕಣ್ಣೀರಿಟ್ಟ ನಿತೀಶ್ ರಾಣಾ: ಅಗಲಿದ ಅಮ್ಮನ ನೆನೆದು ಕ್ರಿಕೆಟಿಗ ಭಾವುಕ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved