- Home
- Sports
- Cricket
- Happy Birthday Suryakumar Yadav: ಭಾರತದ ಮಿಸ್ಟರ್ 360 ಬಗ್ಗೆ ನಿಮಗೆ ಗೊತ್ತಿರದ ಸಂಗತಿಗಳಿವು..!
Happy Birthday Suryakumar Yadav: ಭಾರತದ ಮಿಸ್ಟರ್ 360 ಬಗ್ಗೆ ನಿಮಗೆ ಗೊತ್ತಿರದ ಸಂಗತಿಗಳಿವು..!
ಬೆಂಗಳೂರು: ಭಾರತದ ಮಿಸ್ಟರ್ 360 ಖ್ಯಾತಿಯ ಪ್ರತಿಭಾನ್ವಿತ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್, ಇಂದು 32ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಸೂರ್ಯಕುಮಾರ್ ಯಾದವ್, ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾ ಅವಿಭಾಗ್ಯ ಅಂಗವಾಗುವತ್ತ ದಿಟ್ಟ ಹೆಜ್ಜೆಯಿಟ್ಟಿದ್ದಾರೆ. ಇದೀಗ 32ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಸೂರ್ಯಕುಮಾರ್ ಯಾದವ್ ಬಗ್ಗೆ ನಿಮಗೆ ಗೊತ್ತಿರದ ಇಂಟ್ರೆಸ್ಟಿಂಗ್ ಸಂಗತಿಗಳನ್ನು ನಿಮ್ಮ ಮುಂದಿಡುತ್ತಿದ್ದೇವೆ ನೋಡಿ..

ಸೂರ್ಯಕುಮಾರ್ ಯಾದವ್, ಸೆಪ್ಟೆಂಬರ್ 14, 1990ರಲ್ಲಿ ಉತ್ತರ ಪ್ರದೇಶದಲ್ಲಿ ಜನಿಸಿದರು. ಸೂರ್ಯಕುಮಾರ್ ಉತ್ತರ ಪ್ರದೇಶದಲ್ಲಿ ಹುಟ್ಟಿದರೂ, ಕ್ರಿಕೆಟ್ ಬದುಕು ಕಟ್ಟಿಕೊಂಡಿದ್ದು, ಮುಂಬೈನಲ್ಲಿ. ಸೂರ್ಯಕುಮಾರ್ ಯಾದವ್, ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಮುಂಬೈ ಕ್ರಿಕೆಟ್ ತಂಡವನ್ನು, ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.
ಸೂರ್ಯಕುಮಾರ್ ಯಾದವ್ ನಿರಂತರವಾಗಿ ದೇಶಿ ಕ್ರಿಕೆಟ್‌ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿದ್ದರೂ, ಭಾರತ ತಂಡದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದರು. ಆದರೆ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ಪರ ಅಮೋಘ ಪ್ರದರ್ಶನ ತೋರಿದ್ದರಿಂದ, ಟೀಂ ಇಂಡಿಯಾಗೆ ಲಗ್ಗೆಯಿಡುವಲ್ಲಿ ಯಶಸ್ವಿಯಾದರು.
ಸೂರ್ಯಕುಮಾರ್ ಯಾದವ್ 2010-11ರಲ್ಲಿ ಡೆಲ್ಲಿ ವಿರುದ್ದ ರಣಜಿ ಟ್ರೋಫಿ ಟೂರ್ನಿಯಲ್ಲಿ ಪಾದಾರ್ಪಣೆ ಮಾಡಿದ್ದರು. ಇದಾದ ಮರು ವರ್ಷವೇ(2012) ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಸೂರ್ಯಕುಮಾರ್ ಅವರನ್ನು ಐಪಿಎಲ್ ಹರಾಜಿನಲ್ಲಿ ತನ್ನ ತೆಕ್ಕೆಗೆ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಯಿತು.
ಸೂರ್ಯಕುಮಾರ್ ಯಾದವ್, ಐಪಿಎಲ್‌ನಲ್ಲಿ ಮುಂಬೈ ಪರ ಏಕೈಕ ಪಂದ್ಯವನ್ನಾಡಿದರಾದರೂ, ರನ್ ಖಾತೆ ತೆರೆಯುವ ಮುನ್ನ ವಿಕೆಟ್ ಒಪ್ಪಿಸಿದರು. ಇದಾದ ನಂತರ 2014ರಲ್ಲಿ ಸೂರ್ಯಕುಮಾರ್ ಯಾದವ್ ಕೋಲ್ಕತಾ ನೈಟ್ ರೈಡರ್ಸ್ ತಂಡ ಕೂಡಿಕೊಂಡರು. ಮೂರು ವರ್ಷಗಳ ಕಾಲ ಕೆಕೆಆರ್ ಪರ ಐಪಿಎಲ್ ಆಡಿದ ಸೂರ್ಯ, 2018ರಲ್ಲಿ ಮತ್ತೆ ಮುಂಬೈ ಇಂಡಿಯನ್ಸ್ ತಂಡ ಕೂಡಿಕೊಂಡರು.
ಮುಂಬೈ ಇಂಡಿಯನ್ಸ್ ತಂಡವು ನಾಲ್ಕನೇ ಹಾಗೂ ಐದನೇ ಐಪಿಎಲ್ ಟ್ರೋಫಿ ಗೆಲ್ಲುವಲ್ಲಿ ಸೂರ್ಯಕುಮಾರ್ ಯಾದವ್ ತನ್ನದೇ ಆದ ಪಾತ್ರ ವಹಿಸಿದ್ದರು.
ಸೂರ್ಯಕುಮಾರ್ ಯಾದವ್, ಮಾರ್ಚ್ 14, 2021ರಲ್ಲಿ ಇಂಗ್ಲೆಂಡ್ ವಿರುದ್ದ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು. ಆದರೆ ಮಾರ್ಚ್ 18ರಂದು ನಡೆದ ಸರಣಿಯ ನಾಲ್ಕನೇ ಪಂದ್ಯದಲ್ಲಿ ಸೂರ್ಯನಿಗೆ ಮೊದಲ ಬಾರಿಗೆ ಬ್ಯಾಟಿಂಗ್ ಮಾಡುವ ಅವಕಾಶ ಸಿಕ್ಕಿತು.
ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ತಾನೆದುರಿಸಿದ ಮೊದಲ ಪಂದ್ಯದಲ್ಲೇ ಸೂರ್ಯಕುಮಾರ್ ಯಾದವ್ ಸಿಕ್ಸರ್ ಸಿಡಿಸಿದ್ದರು. ಈ ಮೂಲಕ, ಈ ಸಾಧನೆ ಮಾಡಿದ ಮಾಡಿದ ಭಾರತದ ಮೊದಲ ಕ್ರಿಕೆಟಿಗ ಎನ್ನುವ ದಾಖಲೆಗೆ ಸೂರ್ಯ ಪಾತ್ರರಾಗಿದ್ದರು.
ಸೂರ್ಯಕುಮಾರ್ ಯಾದವ್ ತಾನಾಡಿದ ಮೊದಲ ಅಂತಾರಾಷ್ಟ್ರೀಯ ಪಂದ್ಯದಲ್ಲೇ ಆಕರ್ಷಕ ಅರ್ಧಶತಕ ಬಾರಿಸಿದ್ದರು. ಇನ್ನು 2021ರಲ್ಲೇ ಸೂರ್ಯಕುಮಾರ್ ಯಾದವ್ ತಾನಾಡಿದ ಮೊದಲ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ವಿರುದ್ದ ಅರ್ಧಶತಕ ಚಚ್ಚಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.