MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ಹಾರ್ದಿಕ್ ಪಾಂಡ್ಯ ವಿಶ್ವದಾಖಲೆ: ಟಿ20 ಇತಿಹಾಸದಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ!

ಹಾರ್ದಿಕ್ ಪಾಂಡ್ಯ ವಿಶ್ವದಾಖಲೆ: ಟಿ20 ಇತಿಹಾಸದಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ!

2026ರ ಟಿ20 ವಿಶ್ವಕಪ್‌ನಲ್ಲಿ ನೆದರ್ಲೆಂಡ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದೆ. ಇದೇ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ 6000 ರನ್ ಮತ್ತು 200 ವಿಕೆಟ್‌ಗಳ ಮೈಲಿಗಲ್ಲು ತಲುಪಿದ್ದು, ಈ ಸಾಧನೆ ಮಾಡಿದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

2 Min read
Author : Naveen Kodase
Published : Feb 19 2026, 10:44 AM IST
Share this Photo Gallery
  • FB
  • TW
  • Linkdin
  • Whatsapp
16
ಅಜೇಯವಾಗಿ ಸೂಪರ್ 8 ಹಂತ ಪ್ರವೇಶಿಸಿದ ಭಾರತ
Image Credit : ANI

ಅಜೇಯವಾಗಿ ಸೂಪರ್-8 ಹಂತ ಪ್ರವೇಶಿಸಿದ ಭಾರತ

2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ, ನೆದರ್‌ಲೆಂಡ್ಸ್ ಎದುರು ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಟೂರ್ನಿಯಲ್ಲಿ ಸತತ 4 ಗೆಲುವು ದಾಖಲಿಸುವ ಮೂಲಕ ಅಜೇಯವಾಗಿ ಸೂಪರ್-8 ಹಂತವನ್ನು ಪ್ರವೇಶಿಸಿದೆ. ಇನ್ನು ಇದೇ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಅಪರೂಪದ ದಾಖಲೆ ನಿರ್ಮಿಸಿದ್ದಾರೆ. 

26
ಹೊಸ ಮೈಲಿಗಲ್ಲು ನೆಟ್ಟ ಹಾರ್ದಿಕ್ ಪಾಂಡ್ಯ
Image Credit : Getty

ಹೊಸ ಮೈಲಿಗಲ್ಲು ನೆಟ್ಟ ಹಾರ್ದಿಕ್ ಪಾಂಡ್ಯ

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ 2026ರ ಟಿ20 ವಿಶ್ವಕಪ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಈ ಹೊಸ ಮೈಲಿಗಲ್ಲು ಸ್ಥಾಪಿಸಿದರು. ಈ ಪಂದ್ಯದಲ್ಲಿ 21 ಎಸೆತಗಳಲ್ಲಿ 30 ರನ್ ಗಳಿಸಿದ ಅವರು, ಟಿ20 ಕ್ರಿಕೆಟ್‌ನಲ್ಲಿ 6,000 ರನ್ ಮತ್ತು 200 ವಿಕೆಟ್ ಪಡೆದ ಮೊದಲ ಭಾರತೀಯ ಆಟಗಾರನಾಗಿ ದಾಖಲೆ ಬರೆದರು. ತಮ್ಮ ಇನ್ನಿಂಗ್ಸ್‌ನಲ್ಲಿ 3 ಬೌಂಡರಿ ಬಾರಿಸಿದ್ದರು. ಇನ್ನಿಂಗ್ಸ್‌ನ ಕೊನೆಯ ಎಸೆತದಲ್ಲಿ ಔಟಾದರೂ, ಅಷ್ಟರಲ್ಲಾಗಲೇ ಅವರ ಹೆಸರು ದಾಖಲೆ ಪುಸ್ತಕ ಸೇರಿತ್ತು.

Related Articles

Related image1
ಪಾಕ್ ಎದುರು ಗೆದ್ದರೂ ಕುಲ್ದೀಪ್ ಯಾದವ್ ಮೇಲೆ ಸೂರ್ಯಕುಮಾರ್-ಪಾಂಡ್ಯ ರೇಗಿದ್ದೇಕೆ? ವಿಡಿಯೋ ನೋಡಿ
Related image2
ಟಿ20 ವಿಶ್ವಕಪ್ ಸೂಪರ್‌-8: ರೋಚಕ ಕಾದಾಟಕ್ಕೆ ವೇದಿಕೆ ಸಜ್ಜು! ಇಲ್ಲಿದೆ ಕಂಪ್ಲೀಟ್ ವೇಳಾಪಟ್ಟಿ
36
ಟಿ20 ಕ್ರಿಕೆಟ್‌ನಲ್ಲಿ ಹಾರ್ದಿಕ್ ಪಾಂಡ್ಯ ಟ್ರ್ಯಾಕ್ ರೆಕಾರ್ಡ್
Image Credit : X@BCCI

ಟಿ20 ಕ್ರಿಕೆಟ್‌ನಲ್ಲಿ ಹಾರ್ದಿಕ್ ಪಾಂಡ್ಯ ಟ್ರ್ಯಾಕ್ ರೆಕಾರ್ಡ್

ಹಾರ್ದಿಕ್ ಪಾಂಡ್ಯ ತಮ್ಮ ವೃತ್ತಿಜೀವನದಲ್ಲಿ ಇಲ್ಲಿಯವರೆಗೆ 323 ಟಿ20 ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ 279 ಇನ್ನಿಂಗ್ಸ್‌ಗಳಿಂದ 6008 ರನ್ ಗಳಿಸಿದ್ದಾರೆ. ಅವರ ಸರಾಸರಿ 29.89 ಮತ್ತು ಸ್ಟ್ರೈಕ್ ರೇಟ್ 144.04 ಆಗಿದೆ. 

ಬೌಲಿಂಗ್‌ನಲ್ಲೂ ಮಿಂಚಿರುವ ಅವರು 222 ವಿಕೆಟ್‌ಗಳನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ. 2013ರಲ್ಲಿ ಬರೋಡಾ ಪರ ಮಧ್ಯಪ್ರದೇಶ ವಿರುದ್ಧ ಟಿ20ಗೆ ಪಾದಾರ್ಪಣೆ ಮಾಡಿದ ಹಾರ್ದಿಕ್, ಇಂದು ವಿಶ್ವದ ಅತ್ಯುತ್ತಮ ವೇಗದ ಬೌಲಿಂಗ್ ಆಲ್‌ರೌಂಡರ್‌ಗಳಲ್ಲಿ ಒಬ್ಬರಾಗಿ ಬೆಳೆದಿದ್ದಾರೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಕೀರಾನ್ ಪೊಲಾರ್ಡ್, ಆಂಡ್ರೆ ರಸೆಲ್ ಅವರಂತಹ ದಿಗ್ಗಜರ ಸಾಲಿಗೆ ಸೇರಿದ್ದಾರೆ.

46
ದುಬೆ ಜತೆ ಪಾಂಡ್ಯ ಭರ್ಜರಿ ಜತೆಯಾಟ
Image Credit : AFP

ದುಬೆ ಜತೆ ಪಾಂಡ್ಯ ಭರ್ಜರಿ ಜತೆಯಾಟ

ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಜೊತೆಗೂಡಿ ಶಿವಂ ದುಬೆ ಅದ್ಭುತ ಜೊತೆಯಾಟವಾಡಿದರು. ಇವರಿಬ್ಬರು ಐದನೇ ವಿಕೆಟ್‌ಗೆ 76 ರನ್‌ಗಳ ಕಾಣಿಕೆ ನೀಡಿದರು. ದುಬೆ ಕೇವಲ 31 ಎಸೆತಗಳಲ್ಲಿ 66 ರನ್ ಗಳಿಸಿ, ಟೀಮ್ ಇಂಡಿಯಾ 193/6 ಬೃಹತ್ ಸ್ಕೋರ್ ಮಾಡಲು ಪ್ರಮುಖ ಪಾತ್ರ ವಹಿಸಿದರು. ದುಬೆ ಅವರ ಇನ್ನಿಂಗ್ಸ್‌ನಲ್ಲಿ 6 ಸಿಕ್ಸರ್ ಮತ್ತು 4 ಬೌಂಡರಿಗಳಿದ್ದವು. ಸೂರ್ಯಕುಮಾರ್ ಯಾದವ್ (34) ಮತ್ತು ತಿಲಕ್ ವರ್ಮಾ (31) ಕೂಡ ಉಪಯುಕ್ತ ರನ್ ಗಳಿಸಿದರು. ನೆದರ್ಲೆಂಡ್ಸ್ ಬೌಲರ್‌ಗಳ ಪೈಕಿ ಲೋಗನ್ ವಾನ್ ಬೀಕ್ 3 ವಿಕೆಟ್ ಪಡೆದರು.
56
ಮುಂಬೈ ಇಂಡಿಯನ್ಸ್ ಪ್ರತಿಭೆ ಪಾಂಡ್ಯ
Image Credit : x@bcci

ಮುಂಬೈ ಇಂಡಿಯನ್ಸ್ ಪ್ರತಿಭೆ ಪಾಂಡ್ಯ

2015ರಲ್ಲಿ ಮುಂಬೈ ಇಂಡಿಯನ್ಸ್ ಪರ ಐಪಿಎಲ್ ಆಡುವ ಮೂಲಕ ಹಾರ್ದಿಕ್ ಪಾಂಡ್ಯ ಬೆಳಕಿಗೆ ಬಂದರು. 2016ರಲ್ಲಿ ಆಸ್ಟ್ರೇಲಿಯಾ ಪ್ರವಾಸದ ಮೂಲಕ ಭಾರತ ತಂಡಕ್ಕೆ ಪಾದಾರ್ಪಣೆ ಮಾಡಿದರು. 2022ರಲ್ಲಿ ಗುಜರಾತ್ ಟೈಟಾನ್ಸ್ ತಂಡದ ನಾಯಕರಾಗಿ ತಂಡಕ್ಕೆ ಚೊಚ್ಚಲ ಟ್ರೋಫಿ ಗೆದ್ದುಕೊಟ್ಟು ತಮ್ಮ ನಾಯಕತ್ವದ ಸಾಮರ್ಥ್ಯವನ್ನು ಸಾಬೀತುಪಡಿಸಿದರು. ನಂತರ 2024ರಲ್ಲಿ ಮತ್ತೆ ಮುಂಬೈ ಇಂಡಿಯನ್ಸ್‌ಗೆ ನಾಯಕರಾಗಿ ಮರಳಿದರು. 

ನಾಯಕನಾಗಿ ಟೀಂ ಇಂಡಿಯಾವನ್ನು 16 ಪಂದ್ಯಗಳಲ್ಲಿ ಮುನ್ನಡೆಸಿದ್ದು, ಅದರಲ್ಲಿ 10 ಪಂದ್ಯಗಳಲ್ಲಿ ಭಾರತ ಗೆಲುವು ಸಾಧಿಸಿದೆ. ಸದ್ಯ ನಾಯಕತ್ವದ ಜವಾಬ್ದಾರಿಯಲ್ಲಿ ಇಲ್ಲದಿದ್ದರೂ, ತಂಡದ ಪ್ರಮುಖ ಸದಸ್ಯರಾಗಿ ಮುಂದುವರಿದಿದ್ದಾರೆ.

66
ನೆದರ್‌ಲೆಂಡ್ಸ್ ಎದುರು ಭಾರತಕ್ಕೆ ಭರ್ಜರಿ ಜಯ
Image Credit : BCCI\Twitter

ನೆದರ್‌ಲೆಂಡ್ಸ್ ಎದುರು ಭಾರತಕ್ಕೆ ಭರ್ಜರಿ ಜಯ

ಈ ಗೆಲುವಿನೊಂದಿಗೆ ಭಾರತವು ಗ್ರೂಪ್-ಎ ನಲ್ಲಿ ಸತತ ನಾಲ್ಕು ಗೆಲುವುಗಳನ್ನು ದಾಖಲಿಸಿ ಅಜೇಯವಾಗಿ ಉಳಿದಿದೆ. 194 ರನ್‌ಗಳ ಗುರಿ ಬೆನ್ನಟ್ಟಿದ ನೆದರ್ಲೆಂಡ್ಸ್ 176/7 ರನ್‌ಗಳಿಗೆ ಸೀಮಿತವಾಗಿ, 17 ರನ್‌ಗಳ ಅಂತರದಿಂದ ಸೋಲೊಪ್ಪಿಕೊಂಡಿತು. ಟೀಂ ಇಂಡಿಯಾ ಈಗಾಗಲೇ ಸೂಪರ್-8 ಹಂತವನ್ನು ತಲುಪಿದೆ. 

ಗ್ರೂಪ್-1ರಲ್ಲಿ ಭಾರತವು ವೆಸ್ಟ್ ಇಂಡೀಸ್, ದಕ್ಷಿಣ ಆಫ್ರಿಕಾ ಮತ್ತು ಜಿಂಬಾಬ್ವೆ ತಂಡಗಳನ್ನು ಎದುರಿಸಲಿದೆ. ಫೆಬ್ರವರಿ 22 ರಂದು ಅಹಮದಾಬಾದ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತನ್ನ ಮೊದಲ ಸೂಪರ್-8 ಪಂದ್ಯವನ್ನು ಆಡಲಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಹಾರ್ದಿಕ್ ಪಾಂಡ್ಯ
ಐಸಿಸಿ ಟಿ20 ವಿಶ್ವಕಪ್
ಟೀಮ್ ಇಂಡಿಯಾ

Latest Videos
Recommended Stories
Recommended image1
ಟಿ20 ವಿಶ್ವಕಪ್ ಸೂಪರ್‌-8: ರೋಚಕ ಕಾದಾಟಕ್ಕೆ ವೇದಿಕೆ ಸಜ್ಜು! ಇಲ್ಲಿದೆ ಕಂಪ್ಲೀಟ್ ವೇಳಾಪಟ್ಟಿ
Recommended image2
ರಣಜಿ ಟ್ರೋಫಿ: 67 ವರ್ಷಗಳಲ್ಲೇ ಮೊದಲ ಸಲ ಜಮ್ಮು-ಕಾಶ್ಮೀರ ಫೈನಲ್‌ಗೆ ಲಗ್ಗೆ! ಹುಬ್ಬಳ್ಳಿಯಲ್ಲಿ ಫೈನಲ್ ಮ್ಯಾಚ್!
Recommended image3
ರಣಜಿ ಟ್ರೋಫಿ ಸೆಮಿಫೈನಲ್: ಎರಡು ಇನ್ನಿಂಗ್ಸ್‌ಗಳಲ್ಲಿ ಕರ್ನಾಟಕ ದಾಖಲೆಯ 1035 ರನ್! ಫೈನಲ್‌ಗೇರೋದು ಕನ್ಫರ್ಮ್
Related Stories
Recommended image1
ಪಾಕ್ ಎದುರು ಗೆದ್ದರೂ ಕುಲ್ದೀಪ್ ಯಾದವ್ ಮೇಲೆ ಸೂರ್ಯಕುಮಾರ್-ಪಾಂಡ್ಯ ರೇಗಿದ್ದೇಕೆ? ವಿಡಿಯೋ ನೋಡಿ
Recommended image2
ಟಿ20 ವಿಶ್ವಕಪ್ ಸೂಪರ್‌-8: ರೋಚಕ ಕಾದಾಟಕ್ಕೆ ವೇದಿಕೆ ಸಜ್ಜು! ಇಲ್ಲಿದೆ ಕಂಪ್ಲೀಟ್ ವೇಳಾಪಟ್ಟಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved