- Home
- Sports
- Cricket
- ಟೀಂ ಇಂಡಿಯಾವನ್ನು ಹೀನಾಯವಾಗಿ ಸೋಲಿಸಿ ಹಾಲಿ ಚಾಂಪಿಯನ್ನರಿಗೆ ಕ್ರಿಕೆಟ್ ಪಾಠ ಮಾಡಿದ ಇಂಗ್ಲೆಂಡ್ ನಾಯಕ ಹ್ಯಾರಿ ಬ್ರೂಕ್!
ಟೀಂ ಇಂಡಿಯಾವನ್ನು ಹೀನಾಯವಾಗಿ ಸೋಲಿಸಿ ಹಾಲಿ ಚಾಂಪಿಯನ್ನರಿಗೆ ಕ್ರಿಕೆಟ್ ಪಾಠ ಮಾಡಿದ ಇಂಗ್ಲೆಂಡ್ ನಾಯಕ ಹ್ಯಾರಿ ಬ್ರೂಕ್!
ಬೆಂಗಳೂರು: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯನ್ನು ಆತಿಥೇಯ ಇಂಗ್ಲೆಂಡ್ ತಂಡವು ಕ್ಲೀನ್ ಸ್ವೀಪ್ ಮಾಡಿದೆ. ಇದರ ಬೆನ್ನಲ್ಲೇ ಇಂಗ್ಲೆಂಡ್ ನಾಯಕ ಹ್ಯಾರಿ ಬ್ರೂಕ್, ಹಾಲಿ ಚಾಂಪಿಯನ್ನರಿಗೆ ಕ್ರಿಕೆಟ್ ಪಾಠ ಹೇಳುವ ಮೂಲಕ ಕಾಲೆಳೆದಿದ್ದಾರೆ.

ಇಂಗ್ಲೆಂಡ್ ಸರಣಿಯಲ್ಲಿ ಟೀಂ ಇಂಡಿಯಾಗೆ ಮುಖಭಂಗ
2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಈ ಮೂಲಕ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸತತ ಎರಡು ಬಾರಿ ಟಿ20 ವಿಶ್ವಕಪ್ ಗೆದ್ದ ಮೊದಲ ತಂಡ ಎನ್ನುವ ಅಪರೂಪದ ದಾಖಲೆಗೆ ಪಾತ್ರವಾಗಿತ್ತು. ಇದರ ಬೆನ್ನಲ್ಲೇ ಭಾರತ ಆಡಿದ ಎರಡು ಟಿ20 ಸರಣಿಯನ್ನೂ ಸೋತು ಮುಖಭಂಗ ಅನುಭವಿಸಿದೆ.
ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಸತತ ಎರಡು ಟಿ20 ಸರಣಿ ಸೋಲು
2026ರ ಟಿ20 ವಿಶ್ವಕಪ್ ಗೆದ್ದ ಬಳಿಕ ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಟೀಂ ಇಂಡಿಯಾ ಆಡಿದ ಐರ್ಲೆಂಡ್ ಎದುರಿನ ಎರಡು ಪಂದ್ಯಗಳ ಸರಣಿಯಲ್ಲಿ ವೈಟ್‌ವಾಷ್ ಮುಖಭಂಗ ಅನುಭವಿಸಿತ್ತು. ಇದಾದ ಬಳಿಕ ಇಂಗ್ಲೆಂಡ್ ಎದುರಿನ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ಒಂದೂ ಪಂದ್ಯವನ್ನು ಗೆಲ್ಲದೇ ತನ್ನ ಅಭಿಯಾನವನ್ನು ಮುಗಿಸಿದೆ.
ಭಾರತದ ಮೇಲೆ ಸೇಡು ತೀರಿಸಿಕೊಂಡ ಇಂಗ್ಲೆಂಡ್
ಕೆಲ ತಿಂಗಳ ಹಿಂದಷ್ಟೇ ನಡೆದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್‌ನಲ್ಲಿ ಭಾರತ ಎದುರು ಇಂಗ್ಲೆಂಡ್ ಸೋಲು ಕಂಡಿತ್ತು. ಆ ಸೋಲಿಗೆ ಇದೀಗ ತವರಿನಲ್ಲೇ ಭಾರತ ಎದುರು ಸೇಡು ತೀರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇದರ ಜತೆಗೆ ಐಸಿಸಿ ಟಿ20 ಶ್ರೇಯಾಂಕದಲ್ಲಿ ನಂ.1 ಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದೆ.
ಟೀಂ ಇಂಡಿಯಾಗೆ ಬ್ರೂಕ್ ಕ್ರಿಕೆಟ್ ಪಾಠ
ಭಾರತವನ್ನು ಸೋಲಿಸಿ ಮಾತನಾಡಿದ ಇಂಗ್ಲೆಂಡ್ ನಾಯಕ ಹ್ಯಾರಿ ಬ್ರೂಕ್, 'ಕ್ರಿಕೆಟ್ ಅನ್ನೋದು ತಂಬಾನೆ ಸಿಂಪಲ್ ಗೇಮ್. ಆದ್ರೆ ನಾವು ಅದನ್ನು ಸುಮ್ಮನೇ ಕ್ಲಿಷ್ಟಕರವನ್ನಾಗಿಸುತ್ತಿದ್ದೇವೆ. ಚೆಂಡನ್ನು ನೋಡಿ ಅದಕ್ಕೆ ತಕ್ಕಂತೆ ಶಾಟ್ ಮಾಡಬೇಕು. ಟಿ20 ಕ್ರಿಕೆಟ್ ಮಾದರಿಯಲ್ಲಿ ಇಂಗ್ಲೆಂಡ್ ತಂಡ ನಂಬರ್ ಒನ್ ಆಗಿದ್ದಕ್ಕೆ ತುಂಬಾನೆ ಸಂತೋಷವಾಗಿದೆ' ಎಂದು ಹೇಳಿದ್ದಾರೆ.
ನಂ.1 ಸ್ಥಾನ ಕಳೆದುಕೊಂಡ ಟೀಂ ಇಂಡಿಯಾ
ಹಾಲಿ ಟಿ20 ಚಾಂಪಿಯನ್ ಟೀಂ ಇಂಡಿಯಾ, ಬರೋಬ್ಬರಿ 1605 ದಿನಗಳಿಂದ ಟಿ20 ಕ್ರಿಕೆಟ್‌ನ ಐಸಿಸಿ ಶ್ರೇಯಾಂಕದಲ್ಲಿ ನಂಬರ್ 1 ಸ್ಥಾನ ಕಾಯ್ದುಕೊಂಡಿತ್ತು. ಆದರೆ ಐರ್ಲೆಂಡ್ ಹಾಗೂ ಇಂಗ್ಲೆಂಡ್ ಎದುರಿನ ಟಿ20 ಸರಣಿ ಸೋಲಿನಿಂದ ಭಾರತ ಅಗ್ರಸ್ಥಾನವನ್ನು ಕಳೆದುಕೊಂಡಿದೆ. ಇದೀಗ ಇಂಗ್ಲೆಂಡ್ ಟಿ20 ಶ್ರೇಯಾಂಕದಲ್ಲಿ ನಂ.1 ಸ್ಥಾನಕ್ಕೇರಿದೆ.
ಮೊದಲ ಸಲ ಇಂಗ್ಲೆಂಡ್ ಎದುರು ದ್ವಿಪಕ್ಷೀಯ ಟಿ20 ಸರಣಿ ಸೋತ ಭಾರತ
ದ್ವಿಪಕ್ಷೀಯ ಟಿ20 ಸರಣಿಯಲ್ಲಿ ಭಾರತ ತಂಡವು ಇಂಗ್ಲೆಂಡ್ ಎದುರು ಸೋಲು ಕಂಡಿರಲಿಲ್ಲ. ಆದರೆ ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಮೂರನೇ ಟಿ20 ಸರಣಿ ಸೋಲುತ್ತಿದ್ದಂತೆಯೇ ಭಾರತ ಸರಣಿ ಕೈಚೆಲ್ಲಿತ್ತು. ಇನ್ನು ಕೊನೆಯ ಪಂದ್ಯದಲ್ಲಾದರೂ ಭಾರತ ಗೆಲ್ಲಬಹುದು ಎನ್ನುವ ನಿರೀಕ್ಷೆ ಕೂಡಾ ಹುಸಿಯಾಗಿದೆ. ಇದೀಗ ಭಾರತ ತಂಡವು ಇಂಗ್ಲೆಂಡ್ ಎದುರಿನ ಏಕದಿನ ಸರಣಿಯಲ್ಲಾದರೂ ಗೆಲುವಿನ ಹಳಿಗೆ ಮರಳುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

