ಭಾರತಕ್ಕೆ ಮೂರು ಐಸಿಸಿ ಟ್ರೋಫಿ ಗೆದ್ದಕೊಟ್ಟ ನಾಯಕ ಧೋನಿಗೆ ಬಿಸಿಸಿಐನಿಂದ ಸಿಗುವ ಪೆನ್ಷನ್ ಎಷ್ಟು?
ಬೆಂಗಳೂರು: ಮಹೇಂದ್ರ ಸಿಂಗ್ ಧೋನಿ ಭಾರತ ಕಂಡ ಶ್ರೇಷ್ಠ ನಾಯಕರಲ್ಲಿ ಅಗ್ರ ಸಾಲಿನಲ್ಲಿ ನಿಲ್ಲುತ್ತಾರೆ. ಭಾರತಕ್ಕೆ ಮೂರು ಐಸಿಸಿ ಟ್ರೋಫಿ ಗೆದ್ದುಕೊಟ್ಟ ಏಕೈಕ ನಾಯಕ ಎನಿಸಿಕೊಂಡಿರುವ ಧೋನಿಗೆ ಬಿಸಿಸಿಐನಿಂದ ಸಿಗುವ ಪೆನ್ಷನ್ ಎಷ್ಟು ಎನ್ನುವ ಇಂಟ್ರೆಸ್ಟಿಂಗ್ ಡೀಟೈಲ್ಸ್ ಇಲ್ಲಿದೆ ನೋಡಿ.

3 ಐಸಿಸಿ ಟ್ರೋಫಿ ಗೆದ್ದ ಏಕೈಕ ನಾಯಕ ಧೋನಿ
ಕ್ಯಾಪ್ಟನ್ ಕೂಲ್ ಖ್ಯಾತಿಯ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಭಾರತ ಕ್ರಿಕೆಟ್ ತಂಡವು ಒಂದಲ್ಲಾ ಎರಡಲ್ಲಾ ಬರೋಬ್ಬರಿ ಮೂರು ಐಸಿಸಿ ಟ್ರೋಫಿ ಗೆದ್ದುಬೀಗಿದೆ. ಈ ಮೂಲಕ ಧೋನಿ ಭಾರತ ಕ್ರಿಕೆಟ್ ತಂಡವು ಕಂಡ ಶ್ರೇಷ್ಠ ನಾಯಕರ ಪೈಕಿ ಅಗ್ರಸ್ಥಾನದಲ್ಲಿ ನಿಲ್ಲುವಂತೆ ಮಾಡಿದೆ.
ಮೂರು ಐಸಿಸಿ ಟ್ರೋಫಿ ಗೆದ್ದ ಭಾರತದ ಏಕೈಕ ನಾಯಕ
ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಟೀಂ ಇಂಡಿಯಾ 2007ರಲ್ಲಿ ನಡೆದ ಚೊಚ್ಚಲ ಆವೃತ್ತಿಯ ಟಿ20 ವಿಶ್ವಕಪ್ ಟ್ರೋಫಿ ಗೆದ್ದು ಬೀಗಿತ್ತು. ಇದಾದ ಬಳಿಕ 2011ರಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲೂ ಧೋನಿ ಪಡೆ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಇದಷ್ಟೇ ಅಲ್ಲದೇ 2013ರಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಧೋನಿ ಪಡೆ ಗೆದ್ದು ಇತಿಹಾಸ ನಿರ್ಮಿಸಿತ್ತು.
2004ರಲ್ಲಿ ಟೀಂ ಇಂಡಿಯಾಗೆ ಧೋನಿ ಪಾದಾರ್ಪಣೆ
2004ರಲ್ಲಿ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಿದ ಧೋನಿ, 2007ರಲ್ಲಿ ಭಾರತ ಟಿ20 ತಂಡದ ನಾಯಕರಾದರು. ಇದಾದ ಬಳಿಕ ಧೋನಿ ಹಿಂತಿರುಗಿ ನೋಡುವ ಪ್ರಮೇಯವೇ ಬರಲಿಲ್ಲ. ಧೋನಿ ನಾಯಕನಾಗಿ, ವಿಕೆಟ್ ಕೀಪರ್ ಆಗಿ ಹಾಗೂ ಮ್ಯಾಚ್ ಫಿನಿಶರ್ ಆಗಿ ಏಕಾಂಗಿಯಾಗಿ ಪಂದ್ಯದ ದಿಕ್ಕನ್ನೇ ಬದಲಿಸಿದ್ದಾರೆ.
2020ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಧೋನಿ ಗುಡ್ ಬೈ
ಭಾರತ ಪರ 90 ಟೆಸ್ಟ್, 350 ಏಕದಿನ ಹಾಗೂ 98 ಟಿ20 ಪಂದ್ಯಗಳನ್ನಾಡಿ ಒಟ್ಟಾರೆ 17,266 ರನ್ ಸಿಡಿಸಿದ್ದಾರೆ. ಧೋನಿ 2014ರಲ್ಲಿ ಟೆಸ್ಟ್‌ಗೆ ವಿದಾಯ ಘೋಷಿಸಿದರೆ, 2020ರ ಆಗಸ್ಟ್ 15ರಂದು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ.
ಬಿಸಿಸಿಐನಿಂದ ಧೋನಿಗೆ ₹70,000 ಪೆನ್ಷನ್
ಇನ್ನು ಭಾರತಕ್ಕೆ 3 ಐಸಿಸಿ ಟ್ರೋಫಿ ಗೆದ್ದುಕೊಟ್ಟ ನಾಯಕ ಧೋನಿಗೆ ಬಿಸಿಸಿಐನಿಂದ ಎಷ್ಟು ಪಿಂಚಣಿ ಬರುತ್ತೆ ಎನ್ನುವ ಕುತೂಹಲ ನಿಮಗೂ ಇರಬಹುದು ಅಲ್ವಾ? ಧೋನಿಗೆ ಬಿಸಿಸಿಐನಿಂದ ತಿಂಗಳಿಗೆ 70,000 ರುಪಾಯಿ ಪೆನ್ಷನ್ ಬರುತ್ತದೆ.
ಹಲವು ಪ್ರಶಸ್ತಿಗಳಿಗೆ ಪಾತ್ರರಾದ ಧೋನಿ
ಇನ್ನು ಮಹೇಂದ್ರ ಸಿಂಗ್ ಧೋನಿಗೆ ಭಾರತ ಸರ್ಕಾರದಿಂದ ಮೇಜರ್ ಧ್ಯಾನ್‌ಚಂದ್ ಖೇಲ್ ರತ್ನ ಪ್ರಶಸ್ತಿ(2008), ಪದ್ಮಶ್ರೀ(2009), ಪದ್ಮಭೂಷಣ(2018) ಪ್ರಶಸ್ತಿಗಳು ಸಿಕ್ಕಿವೆ. ಇನ್ನು 2025ರ ಜೂನ್‌ನಲ್ಲಿ ಧೋನಿ ಐಸಿಸಿ ಹಾಲ್ ಆಫ್ ಫೇಮ್ ಪ್ರಶಸ್ತಿ ಜಯಿಸಿದ್ದರು
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

