ಪ್ಲೇ ಆಫ್ ಲೆಕ್ಕಾಚಾರ ತುಂಬಾ ಸುಲಭ: ಆರ್‌ಸಿಬಿ ನಾಕೌಟ್ ಹಾದಿ ಹೀಗಿದೆ ನೋಡಿ
ಬೆಂಗಳೂರು: 17ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಹ್ಯಾಟ್ರಿಕ್ ಗೆಲುವು ಸಾಧಿಸುವ ಮೂಲಕ ಪ್ಲೇ ಆಫ್ ಆಸೆ ಜೀವಂತವಾಗಿರಿಸಿಕೊಂಡಿದೆ. ನಾವಿಂದು ಆರ್‌ಸಿಬಿ ಪ್ಲೇ ಆಫ್ ದಾರಿ ಹೇಗಿದೆ ಎನ್ನುವುದನ್ನು ನೋಡೋಣ ಬನ್ನಿ
ಫಾಫ್ ಡು ಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಆರಂಭಿಕ 8 ಪಂದ್ಯಗಳಲ್ಲಿ 7 ಪಂದ್ಯಗಳನ್ನು ಸೋತು ನಿರಾಸೆ ಅನುಭವಿಸಿತ್ತು. ಆದರೆ ಇದೀಗ ಹ್ಯಾಟ್ರಿಕ್ ಗೆಲುವು ಸಾಧಿಸುವ ಮೂಲಕ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ.
ಸದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 11 ಪಂದ್ಯಗಳನ್ನಾಡಿ 4 ಗೆಲುವು ಹಾಗೂ 7 ಸೋಲು ಸಹಿತ 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ಆರ್‌ಸಿಬಿ ಲೀಗ್ ಹಂತದಲ್ಲಿ ಇನ್ನೂ 3 ಪಂದ್ಯಗಳನ್ನು ಆಡಲಿದೆ.
ಆರ್‌ಸಿಬಿ ತಂಡವು ಲೀಗ್ ಹಂತದಲ್ಲಿ ಉಳಿದಿರುವ ಮೂರು ಪಂದ್ಯಗಳನ್ನು ದೊಡ್ಡ ಅಂತರದಲ್ಲಿ ಜಯಿಸಿದರೆ ನೆಟ್ ರನ್‌ರೇಟ್ ಉತ್ತಮಪಡಿಸಿಕೊಳ್ಳುವುದರ ಜತೆಗೆ ತನ್ನ ಖಾತೆಗೆ 14 ಅಂಕಗಳು ಸೇರ್ಪಡೆಯಾಗಲಿದೆ.
ಇದರ ಜತೆಗೆ ಲಖನೌ ಸೂಪರ್ ಜೈಂಟ್ಸ್, ಸನ್‌ರೈಸರ್ಸ್ ಹೈದರಾಬಾದ್, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು 14 ಅಂಕಗಳಿಗಿಂತ ಹೆಚ್ಚಿಗೆ ಅಂಕಗಳನ್ನು ಗಳಿಸಬಾರದು.
ಇನ್ನು ಇದೇ ವೇಳೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಗುಜರಾತ್ ಟೈಟಾನ್ಸ್ ತಂಡ ಕೂಡಾ ತನ್ನ ಪಾಲಿನ ಎಲ್ಲಾ ಪಂದ್ಯಗಳನ್ನು ಗೆಲ್ಲಬಾರದು. ಒಂದು ವೇಳೆ ಗುಜರಾತ್ ಟೈಟಾನ್ಸ್ ಇನ್ನುಳಿದ 3 ಪಂದ್ಯಗಳನ್ನು ದೊಡ್ಡ ಅಂತರದಲ್ಲಿ ಜಯಿಸಿದರೆ ಆರ್‌ಸಿಬಿಗೆ ಅಪಾಯ ತಪ್ಪಿದ್ದಲ್ಲ.
ಹೀಗಾದಲ್ಲಿ ಆರ್‌ಸಿಬಿ ತಂಡವು 17ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ನಾಲ್ಕನೇ ತಂಡವಾಗಿ ಪ್ಲೇ ಆಫ್‌ಗೆ ಲಗ್ಗೆಯಿಡುವುದನ್ನು ಯಾರಿಂದಲೂ ತಪ್ಪಿಸಲೂ ಸಾಧ್ಯವಿಲ್ಲ. ಆರ್‌ಸಿಬಿ ಪ್ಲೇ ಆಫ್‌ಗೆ ಹೋಗುತ್ತಾ ಎನ್ನುವುದನ್ನು ಕಾಮೆಂಟ್ ಮಾಡಿ