ICC ಏಕದಿನ ಬ್ಯಾಟಿಂಗ್, ಬೌಲಿಂಗ್ ರ‍್ಯಾಂಕಿಂಗ್ ಪ್ರಕಟ, ಇಲ್ಲಿದೆ ಫುಲ್ ಲಿಸ್ಟ್!
First Published Dec 10, 2020, 8:11 PM IST
ಭಾರತ-ಆಸ್ಟ್ರೇಲಿಯಾ ನಡುವಿನ ನಿಗದಿತ ಓವರ್ ಸರಣಿ ಮಗಿದ ಬೆನ್ನಲ್ಲೇ ಐಸಿಸಿ ಏಕದಿನ ರ‍್ಯಾಂಕಿಂಗ್ ಪಟ್ಟಿ ಪ್ರಕಟಗೊಂಡಿದೆ. ಅಗ್ರಸ್ಥಾನದಲ್ಲಿ ಟೀಂ ಇಂಡಿಯಾ ಬ್ಯಾಟ್ಸ್‌ಮನ್ ಕಾಣಿಸಿಕೊಂಡಿದ್ದಾರೆ. ಇನ್ನು ಆಸೀಸ್ ಸರಣಿಯಿಂದ ಹೊರಗುಳಿದಿರುವ ರೋಹಿತ್ ಶರ್ಮಾ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಐಸಿಸಿ ರ‍್ಯಾಂಕಿಂಗ್ ಪಟ್ಟಿ ಇಲ್ಲಿದೆ.

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯನ್ನು ಟೀಂ ಇಂಡಿಯಾ 1-2 ಅಂತರದಿಂದ ಸೋತಿದೆ. ಆದರೆ ರ‍್ಯಾಂಕಿಂಗ್ ಪಟ್ಟಿಯ ಅಗ್ರಸ್ಥಾನ ಉಳಿಸಿಕೊಳ್ಳುವಲ್ಲಿ ಟೀಂ ಇಂಡಿಯಾ ಬ್ಯಾಟ್ಸ್‌ಮನ್‌ಗಳು ಯಶಸ್ವಿಯಾಗಿದ್ದಾರೆ.

ಐಸಿಸಿ ಏಕದಿನ ಬ್ಯಾಟಿಂಗ್ ರ‍್ಯಾಂಕಿಂಗ್ ಪಟ್ಟಿಯಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಗ್ರಸ್ಥಾನ ಮುಂದುವರಿದ್ದಾರೆ. ಆಸೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಕೊಹ್ಲಿ 2 ಅರ್ಧಶತಕ ಸಿಡಿಸಿದ್ದರು.
Today's Poll
ಎಷ್ಟು ಜನರೊಂದಿಗೆ ಆನ್ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?