- Home
- Sports
- Cricket
- ಐಸಿಸಿ ರ್‍ಯಾಂಕಿಂಗ್‌ನಲ್ಲಿ ಕೊಹ್ಲಿ, ರೋಹಿತ್ ಹೆಸರು ನಾಪತ್ತೆ, ಗಂಟೆಗಳ ಬಳಿಕ ಪ್ರತ್ಯಕ್ಷ! ಕೊನೆಗೂ ಸ್ಪಷ್ಟನೆ ಕೊಟ್ಟ ಐಸಿಸಿ
ಐಸಿಸಿ ರ್‍ಯಾಂಕಿಂಗ್‌ನಲ್ಲಿ ಕೊಹ್ಲಿ, ರೋಹಿತ್ ಹೆಸರು ನಾಪತ್ತೆ, ಗಂಟೆಗಳ ಬಳಿಕ ಪ್ರತ್ಯಕ್ಷ! ಕೊನೆಗೂ ಸ್ಪಷ್ಟನೆ ಕೊಟ್ಟ ಐಸಿಸಿ
ದುಬೈ: ಭಾರತದ ಕ್ರಿಕೆಟ್ ದಿಗ್ಗಜರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರ ಹೆಸರುಗಳು ಐಸಿಸಿ ಏಕದಿನ ಬ್ಯಾಟರ್‌ಗಳ ರ್‍ಯಾಂಕಿಂಗ್ ಪಟ್ಟಿಯಲ್ಲಿ ನಾಪತ್ತೆಯಾಗಿತ್ತು. ಈ ಕುರಿತಂತೆ ಐಸಿಸಿ ಸ್ಪಷ್ಟನೆ ನೀಡಿದೆ.

ಐಸಿಸಿ ಏಕದಿನ ಬ್ಯಾಟರ್‌ಗಳ ರ್‍ಯಾಂಕಿಂಗ್ ಪಟ್ಟಿಯಲ್ಲಿ ಬುಧವಾರ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹೆಸರು ನಾಪತ್ತೆಯಾಗಿ, ಬಳಿಕ ಪ್ರತ್ಯಕ್ಷಗೊಂಡಿದೆ.
ಮಧ್ಯಾಹ್ನ ಪ್ರಕಟಗೊಂಡ ಪಟ್ಟಿಯಲ್ಲಿ ಇವರಿಬ್ಬರ ಹೆಸರು ಇರಲಿಲ್ಲ. ಶುಭ್‌ಮನ್ ಗಿಲ್ 1ನೇ, ಬಾಬರ್ ಆಜಂ 2ನೇ ಸ್ಥಾನದಲ್ಲಿದ್ದರು. ಇದು ಅಚ್ಚರಿಗೆ ಕಾರಣವಾಗಿತ್ತು.
ಟಾಪ್ 10 ಪಟ್ಟಿಯೊಳಗೆ ಇದ್ದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರ ಹೆಸರು ಇಲ್ಲದೇ ಇರುವುದು ಸೋಷಿಯಲ್ ಮೀಡಿಯಾದಲ್ಲಿ ಹೊಸ ಚರ್ಚೆಯನ್ನೇ ಹುಟ್ಟುಹಾಕಿತ್ತು.
no virat kohli & rohit sharma in the top 10 icc odi rankings💀 only these two are missing.... what's happening- pic.twitter.com/r7XKxutESr
— ` (@cupc4ke77) August 20, 2025
ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ 2025ರ ಫೆಬ್ರವರಿಯಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಕೊನೆಯ ಬಾರಿಗೆ ಭಾರತ ಏಕದಿನ ತಂಡದ ಪರ ಕಣಕ್ಕಿಳಿದಿದ್ದರು. ಇದಾದ ಬಳಿಕ ಯಾವುದೇ ಏಕದಿನ ಪಂದ್ಯಗಳನ್ನಾಡಿಲ್ಲ.
ಕೆಲ ಗಂಟೆಗಳ ಬಳಿಕ ಇಬ್ಬರ ಹೆಸರೂ ಪಟ್ಟಿಯಲ್ಲಿ ಕಾಣಿಸಿಕೊಂಡಿದೆ. ಅದರಲ್ಲಿ ರೋಹಿತ್ ಶರ್ಮಾ 2ನೇ, ವಿರಾಟ್ ಕೊಹ್ಲಿ 4ನೇ ಸ್ಥಾನದಲ್ಲಿದ್ದಾರೆ. ಇನ್ನು, ಬೌಲರ್‌ಗಳ ಪಟ್ಟಿಯಲ್ಲಿ ಕುಲ್ದೀಪ್ ಯಾದವ್ 3ನೇ ಸ್ಥಾನಕ್ಕೆ ಕುಸಿದಿದ್ದಾರೆ.
ಈ ಕುರಿತಂತೆ ಐಸಿಸಿ ವಕ್ತಾರರು ಸ್ಪಷ್ಟನೆ ನೀಡಿದ್ದು, ಇಂದು ರ್‍ಯಾಂಕಿಂಗ್ ಪಟ್ಟಿ ಪ್ರಕಟಿಸುವಾಗ, ತಪ್ಪಾಗಿದೆ. ಆದರೆ ಅದನ್ನು ತಕ್ಷಣವೇ ಸರಿಪಡಿಸಲಾಗಿದೆ ಎಂದು ಎಂದು ಹೇಳಿದ್ದಾರೆ.