- Home
- Sports
- Cricket
- ಟಿ20 ವಿಶ್ವಕಪ್‌ಗೆ ಟೀಂ ಇಂಡಿಯಾದಿಂದ ಹೊರಬಿದ್ದ ಟಾಪ್-5 ಆಟಗಾರರಿವರು! ಪಟ್ಟಿಯಲ್ಲಿವೆ ಅಚ್ಚರಿ ಹೆಸರು
ಟಿ20 ವಿಶ್ವಕಪ್‌ಗೆ ಟೀಂ ಇಂಡಿಯಾದಿಂದ ಹೊರಬಿದ್ದ ಟಾಪ್-5 ಆಟಗಾರರಿವರು! ಪಟ್ಟಿಯಲ್ಲಿವೆ ಅಚ್ಚರಿ ಹೆಸರು
ಮುಂಬೈ: 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ಟಿ20 ತಂಡ ಪ್ರಕಟವಾಗಿದ್ದು, ಸೂರ್ಯಕುಮಾರ್ ಯಾದವ್ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಈ ಟೂರ್ನಿಗೆ ಭಾರತ ತಂಡದಿಂದ ಹೊರಬಿದ್ದ ಐದು ಸ್ಟಾರ್ ಆಟಗಾರರು ಯಾರು ಎನ್ನುವುದನ್ನು ನೋಡೋಣ ಬನ್ನಿ.

ಬಲಿಷ್ಠ ಭಾರತ ಕ್ರಿಕೆಟ್ ತಂಡ ಪ್ರಕಟ
ಅಜಿತ್ ಅಗರ್ಕರ್ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿಯು ಡಿಸೆಂಬರ್ 20ರಂದು ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ 15 ಆಟಗಾರರನ್ನೊಳಗೊಂಡ ಬಲಿಷ್ಠ ಭಾರತ ಕ್ರಿಕೆಟ್ ತಂಡವನ್ನು ಆಯ್ಕೆ ಮಾಡಿತು.
ಐವರಿಗೆ ಶಾಕ್
ಇನ್ನು ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಈ ಐವರು ಆಟಗಾರರಿಗೆ ನಿರಾಸೆ ಎದುರಾಗಿದೆ. ಯಾರು ಆ ಐದು ಆಟಗಾರರು ಎನ್ನುವುದನ್ನು ನೋಡೋಣ ಬನ್ನಿ.
1. ಶುಭ್‌ಮನ್ ಗಿಲ್
ಟಿ20 ಕ್ರಿಕೆಟ್ ಮಾದರಿಯಲ್ಲಿ ಕಳಪೆ ಫಾರ್ಮ್‌ನಿಂದ ಬಳಲುತ್ತಿದ್ದ ಶುಭ್‌ಮನ್ ಗಿಲ್, ಭಾರತ ತಂಡದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದಾರೆ.
2. ಜಿತೇಶ್ ಶರ್ಮಾ
ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾ ಕೂಡಾ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದಾರೆ. ಜಿತೇಶ್ ಟಿ20 ಬ್ಯಾಟಿಂಗ್ ಸರಾಸರಿ ಕೇವಲ 18.
3. ಯಶಸ್ವಿ ಜೈಸ್ವಾಲ್
ಸ್ಪೋಟಕ ಆರಂಭಿಕ ಬ್ಯಾಟರ್ ಆಗಿರುವ ಯಶಸ್ವಿ ಜೈಸ್ವಾಲ್, ಬ್ಯಾಕ್‌ಅಪ್ ಓಪನ್ನರ್ ಆಗಿ ಭಾರತ ತಂಡದಲ್ಲಿ ಸ್ಥಾನ ಪಡೆಯಬಹುದು ಎನ್ನುವ ನಿರೀಕ್ಷೆ ಹುಸಿಯಾಗಿದೆ.
4. ಮೊಹಮ್ಮದ್ ಸಿರಾಜ್:
ಭಾರತ ಟೆಸ್ಟ್ ಹಾಗೂ ಏಕದಿನ ತಂಡದ ನಂಬಿಗಸ್ಥ ಬೌಲರ್ ಮೊಹಮ್ಮದ್ ಸಿರಾಜ್ ಕೂಡಾ ಟಿ20 ವಿಶ್ವಕಪ್‌ಗೆ ಸ್ಥಾನ ಪಡೆಯಲು ವಿಫಲರಾಗಿದ್ದಾರೆ. ಸಿರಾಜ್ 16 ಟಿ20 ಪಂದ್ಯಗಳಿಂದ ಕೇವಲ 14 ವಿಕೆಟ್ ಕಬಳಿಸಿದ್ದಾರೆ.
5. ರಿಷಭ್ ಪಂತ್:
ಟೀಂ ಇಂಡಿಯಾ ಅನುಭವಿ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಅವರು ಕೂಡಾ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದಾರೆ. ಪಂತ್ ಹಿಂದಿಕ್ಕಿ ಇಶಾನ್ ಕಿಶನ್ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

