ICC Test Rankings ಪ್ರಕಟ; ಅಶ್ವಿನ್, ಅಜಾಜ್ ಪಟೇಲ್‌ಗೆ ಜಾಕ್‌ಪಾಟ್..!
ದುಬೈ: ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ತಂಡಗಳ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಮುಕ್ತಾಯವಾದ ಬೆನ್ನಲ್ಲೇ ಐಸಿಸಿ (ICC) ತನ್ನ ಪರಿಷ್ಕೃತ ಟೆಸ್ಟ್ ರ‍್ಯಾಂಕಿಂಗ್ (Test Rankings) ಪ್ರಕಟಿಸಿದ್ದು, ಮುಂಬೈ ಟೆಸ್ಟ್ (Mumbai Test) ಪಂದ್ಯದ ಇನಿಂಗ್ಸ್‌ವೊಂದರಲ್ಲಿ 10 ವಿಕೆಟ್ ಕಬಳಿಸಿ ಮಿಂಚಿದ್ದ ಕಿವೀಸ್ ಅಜಾಜ್ ಪಟೇಲ್ (Ajaz Patel), ಭಾರತದ ಅನುಭವಿ ಆಟಗಾರ ರವಿಚಂದ್ರನ್ ಅಶ್ವಿನ್ (Ravichandran Ashwin) ಹಾಗೂ ಆಕರ್ಷಕ ಬ್ಯಾಟಿಂಗ್ ಪ್ರದರ್ಶನ ತೋರಿದ್ದ ಕನ್ನಡಿಗ ಮಯಾಂಕ್ ಅಗರ್‌ವಾಲ್ (Mayank Agarwal) ಅವರ ರ‍್ಯಾಂಕಿಂಗ್‌ನಲ್ಲಿ ಗಣನೀಯ ಬದಲಾವಣೆಗಳಾಗಿವೆ. ನೂತನ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ಯಾರಿಗೆಲ್ಲಾ ಜಾಕ್‌ಪಾಟ್ ಹೊಡೆದಿದೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

ಐಸಿಸಿ ನೂತನವಾಗಿ ಪ್ರಕಟಿಸಿದ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ಟೀಂ ಇಂಡಿಯಾ ಅನುಭವಿ ಆಫ್‌ಸ್ಪಿನ್ನರ್ ರವಿಚಂದ್ರನ್ ಅಶ್ವಿನ್, ಆರಂಭಿಕ ಬ್ಯಾಟರ್ ಮಯಾಂಕ್ ಅಗರ್‌ವಾಲ್ ಹಾಗೂ ಕಿವೀಸ್ ಎಡಗೈ ಆಫ್ ಸ್ಪಿನ್ನರ್ ಅಜಾಜ್ ಪಟೇಲ್ ರ‍್ಯಾಂಕಿಂಗ್‌ನಲ್ಲಿ ಮಹತ್ವದ ಬದಲಾವಣೆಗಳಾಗಿವೆ.
Mayank Agarwal
ಮುಂಬೈ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ 150 ರನ್ ಹಾಗೂ ಎರಡನೇ ಇನಿಂಗ್ಸ್‌ನಲ್ಲಿ 62 ರನ್ ಬಾರಿಸುವ ಮೂಲಕ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವಿನಲ್ಲಿ ಮಹತ್ವದ ಪಾತ್ರವಹಿಸಿದ್ದ ಮಯಾಂಕ್ ಅಗರ್‌ವಾಲ್ ಬರೋಬ್ಬರಿ 30 ಸ್ಥಾನ ಜಿಗಿತಕಂಡು 11ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ.
Ajaz Patel
ಇನ್ನು ಮುಂಬೈ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಭಾರತದ ಎಲ್ಲಾ 10 ವಿಕೆಟ್ ಕಬಳಿಸಿ ಜಿಮ್ ಲೇಕರ್ ಹಾಗೂ ಅನಿಲ್ ಕುಂಬ್ಳೆ ಸಾಲಿಗೆ ಸೇರಿದ ಕಿವೀಸ್ ಸ್ಪಿನ್ನರ್ ಅಜಾಜ್ ಪಟೇಲ್ ಎರಡನೇ ಟೆಸ್ಟ್‌ನಲ್ಲಿ 14 ವಿಕೆಟ್ ಕಬಳಿಸಿ ಮಿಂಚಿದ್ದರು. ಪರಿಣಾಮ ಅಜಾಜ್ 23 ಸ್ಥಾನ ಜಿಗಿತ ಕಂಡು 38ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ.
ಭಾರತದ ಅನುಭವಿ ಆಟಗಾರ ರವಿಚಂದ್ರನ್ ಅಶ್ವಿನ್‌ಗೆ ಡಬಲ್ ಜಾಕ್‌ಪಾಟ್ ಹೊಡೆದಿದ್ದು, ಬೌಲಿಂಗ್ ಹಾಗೂ ಆಲ್ರೌಂಡರ್‌ಗಳ ವಿಭಾಗದಲ್ಲಿ ಎರಡನೇ ಸ್ಥಾನಕ್ಕೆ ಪ್ರವೇಶ ಪಡೆದಿದ್ದಾರೆ. ಮುಂಬೈ ಟೆಸ್ಟ್ ಪಂದ್ಯದಲ್ಲಿ ಅಶ್ವಿನ್ 8 ವಿಕೆಟ್ ಕಬಳಿಸಿ ಮಿಂಚಿದ್ದರು.
ಆಲ್ರೌಂಡರ್‌ಗಳ ವಿಭಾಗದಲ್ಲಿ ಜೇಸನ್ ಹೋಲ್ಡರ್ ಮೊದಲ ಸ್ಥಾನದಲ್ಲೇ ಮುಂದುವರೆದಿದ್ದರೇ, ರವಿಚಂದ್ರನ್ ಅಶ್ವಿನ್ ಹಾಗೂ ಬೆನ್ ಸ್ಟೋಕ್ಸ್ ತಲಾ ಒಂದೊಂದು ಸ್ಥಾನ ಏರಿಕೆ ಕಂಡು ಕ್ರಮವಾಗಿ ಎರಡು ಹಾಗೂ ಮೂರನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಇನ್ನು ರವೀಂದ್ರ ಜಡೇಜಾ ಎರಡು ಸ್ಥಾನ ಕುಸಿತ ಕಂಡು ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.
Joe Root
ಐಸಿಸಿ ಬ್ಯಾಟರ್‌ಗಳ ಪಟ್ಟಿಯಲ್ಲಿ ಜೋ ರೂಟ್ ಮೊದಲ ಸ್ಥಾನದಲ್ಲಿದ್ದರೇ, ಸ್ಟೀವ್ ಸ್ಮಿತ್, ಕೇನ್ ವಿಲಿಯಮ್ಸನ್, ಮಾರ್ನಸ್ ಲಬುಶೇನ್ ಮೊದಲ 4 ಸ್ಥಾನದಲ್ಲಿದ್ದಾರೆ. ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕ್ರಮವಾಗಿ ಐದು ಹಾಗೂ ಆರನೇ ಸ್ಥಾನದಲ್ಲಿದ್ದಾರೆ.
ಇನ್ನು ಬೌಲಿಂಗ್ ವಿಭಾಗದಲ್ಲಿ ಆಸ್ಟ್ರೇಲಿಯಾದ ಮಾಜಿ ನಾಯಕ ಪ್ಯಾಟ್ ಕಮಿನ್ಸ್ ಮೊದಲ ಸ್ಥಾನ ಪಡೆದಿದ್ದರೆ, ಅಶ್ವಿನ್, ಜೋಶ್ ಹೇಜಲ್‌ವುಡ್, ಟಿಮ್ ಸೌಥಿ ಹಾಗೂ ಶಾಹೀನ್ ಅಫ್ರಿದಿ ಮೊದಲ 5 ಸ್ಥಾನ ಪಡೆದಿದ್ದಾರೆ. ಜಸ್ಪ್ರೀತ್ ಬುಮ್ರಾ 10ನೇ ಸ್ಥಾನದಲ್ಲಿದ್ದು, ಟಾಪ್ 10 ಪಟ್ಟಿಯೊಳಗೆ ಸ್ಥಾನ ಪಡೆದ ಎರಡನೇ ಬೌಲರ್ ಎನಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.