ಮಹಿಳಾ ವಿಶ್ವಕಪ್: ಟಾಸ್ ಬಗ್ಗೆ ಮಹತ್ವದ ಅಪ್‌ಡೇಟ್ ಕೊಟ್ಟ ಐಸಿಸಿ!
ನವಿ ಮುಂಬೈ: 2025ರ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆತಿಥೇಯ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಿವೆ.ಈ ಪಂದ್ಯಕ್ಕೆ ಮಳೆ ಅಡ್ಡಿಯಾಗಿದ್ದು, ಟಾಸ್ ಯಾವಾಗ ಎಂದು ಕುತೂಹಲದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ.

ವಿಶ್ವಕಪ್ ಫೈನಲ್‌ಗೆ ಡಿವೈ ಪಾಟೀಲ್ ಸ್ಟೇಡಿಯಂ ಆತಿಥ್ಯ
ಭಾರತ ಹಾಗೂ ದಕ್ಷಿಣ ಆಫ್ರಿಕಾ ಮಹಿಳಾ ತಂಡಗಳು ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಪ್ರಶಸ್ತಿಗಾಗಿ ಕಾದಾಡಲು ರೆಡಿಯಾಗಿವೆ. ಈ ಪಂದ್ಯಕ್ಕೆ ಇಲ್ಲಿನ ಡಿವೈ ಪಾಟೀಲ್ ಮೈದಾನ ಆತಿಥ್ಯ ವಹಿಸಿದೆ.'
2.30ಕ್ಕೆ ನಡೆಯಬೇಕಿದ್ದ ಟಾಸ್
ಈ ಪಂದ್ಯವು ಈ ಮೊದಲೇ ನಿಗದಿಯಾದಂತೆ ಇಂದು ಮಧ್ಯಾಹ್ನ 2.30ಕ್ಕೆ ಟಾಸ್ ನಡೆಯಬೇಕಿತ್ತು. ಆದರೆ ಔಟ್ ಫೀಲ್ಡ್ ಒದ್ದೆಯಾಗಿದ್ದರಿಂದ ಅರ್ಧ ಗಂಟೆ ತಡವಾಗಿ ಅಂದರೆ ಭಾರತೀಯ ಕಾಲಮಾನ 3 ಗಂಟೆಗೆ ನಡೆಸಲಾಗುವುದು ಎಂದು ಐಸಿಸಿ ತಿಳಿಸಿತ್ತು.
ಕ್ರಿಕೆಟ್ ಅಭಿಮಾನಿಗಳಿಗೆ ಗುಡ್ ನ್ಯೂಸ್
ಇನ್ನೇನು ಮೂರು ಗಂಟೆ ಸುಮಾರಿಗೆ ಟಾಸ್ ನಡೆಯಲಿದೆ ಎನ್ನುವಷ್ಟರಲ್ಲಿ ಮತ್ತೆ ತುಂತುರು ಮಳೆ ಸುರಿಯಲಾರಂಭಿಸಿತು. ಹೀಗಾಗಿ ಮತ್ತೆ ಟಾಸ್ ನಡೆಸುವುದು ಕೊಂಚ ತಡವಾಯಿತು. ಟಾಸ್ ಯಾವಾಗ ಎಂದು ಕುತೂಹಲದಿಂದ ಕಾಯುತ್ತಿದ್ದ ಫ್ಯಾನ್ಸ್‌ಗೆ ಇದೀಗ ಗುಡ್ ನ್ಯೂಸ್ ಸಿಕ್ಕಿದೆ.
5 ಗಂಟೆಗೆ ಪಂದ್ಯಕ್ಕೆ ಅಧಿಕೃತ ಚಾಲನೆ
ಹೌದು, ಏಕದಿನ ವಿಶ್ವಕಪ್ ಫೈನಲ್ ಪಂದ್ಯದ ಟಾಸ್ ಇಂದು ಸಂಜೆ 4.32ಕ್ಕೆ ನಡೆಯಲಿದ್ದು, 5 ಗಂಟೆಯಿಂದ ಪಂದ್ಯಕ್ಕೆ ಅಧಿಕೃತ ಚಾಲನೆ ಸಿಗಲಿದೆ ಎಂದು ಮಹತ್ವದ ಪ್ರಕಟಣೆ ಹೊರಬಿದ್ದಿದೆ. ಯಾವುದೇ ಓವರ್ ಕಡಿತವಾಗುವುದಿಲ್ಲ. 50 ಓವರ್ ಪಂದ್ಯ ನಡೆಯಲಿದೆ ಎಂದು ಆಯೋಜಕರು ಪ್ರಕಟಿಸಿದ್ದಾರೆ.
ಹೈವೋಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ
ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಸಮಬಲದ ತಂಡವಾಗಿ ಗುರುತಿಸಿಕೊಂಡಿದ್ದು, ಚೊಚ್ಚಲ ವಿಶ್ವಕಪ್ ಗೆಲ್ಲಲು ಜಿದ್ದಾಜಿದ್ದಿನ ಪೈಪೋಟಿ ನಡೆಸುವ ನಿರೀಕ್ಷೆಯಿದೆ. ಈಗಾಗಲೇ ಫೈನಲ್ ಪಂದ್ಯದ ಎಲ್ಲಾ ಮ್ಯಾಚ್ ಟಿಕೆಟ್‌ಗಳು ಸೋಲ್ಡೌಟ್ ಆಗಿವೆ.
ಹೊಸ ಚಾಂಪಿಯನ್ ಉದಯಕ್ಕೆ ಕ್ಷಣಗಣನೆ
ಇದೇ ಮೊದಲ ಬಾರಿಗೆ ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ತಂಡವಿಲ್ಲದ ಮಹಿಳಾ ಏಕದಿನ ವಿಶ್ವಕಪ್ ಫೈನಲ್ ಆಗಿದ್ದು, ಇಂದು ಯಾರೇ ಗೆದ್ದರೂ ಹೊಸ ಚಾಂಪಿಯನ್ ಉದಯವಾಗಲಿದೆ.
ಚೊಚ್ಚಲ ವಿಶ್ವಕಪ್ ಕನವರಿಕೆಯಲ್ಲಿ ಉಭಯ ತಂಡಗಳು
ಭಾರತ ತಂಡವು ಮೂರನೇ ಬಾರಿಗೆ ವಿಶ್ವಕಪ್ ಫೈನಲ್ ಪ್ರವೇಶಿಸಿದ್ದರೇ, ದಕ್ಷಿಣ ಆಫ್ರಿಕಾ ತಂಡವು ಮೊದಲ ಬಾರಿ ಪ್ರಶಸ್ತಿ ಸುತ್ತಿಗೆ ಪ್ರವೇಶ ಪಡೆದಿದೆ.