ವಿಶ್ವದ ಅತಿದೊಡ್ಡ ಕ್ರಿಕೆಟ್‌ ಸ್ಟೇಡಿಯಂ ಮೊಟೇರಾ ಮೈದಾನದ ಇಂಟ್ರೆಸ್ಟಿಂಗ್‌ ಸಂಗತಿಗಳು...!

First Published Feb 23, 2021, 5:06 PM IST

ಬೆಂಗಳೂರು: ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೂರನೇ ಟೆಸ್ಟ್ ಪಂದ್ಯ ಫೆಬ್ರವರಿ 24ರಿಂದ ಆರಂಭವಾಗಲಿದ್ದು, ವಿಶ್ವದ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ಎನಿಸಿಕೊಂಡಿರುವ ಮೊಟೇರಾ ಸ್ಟೇಡಿಯಂನಲ್ಲಿ ಮೊದಲ ಅಂತಾರಾಷ್ಟ್ರೀಯ ಪಂದ್ಯ ಜರುಗಲಿದೆ.
ಮೊಟೇರಾ ಸ್ಟೇಡಿಯಂನಲ್ಲಿ ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಕೊನೆಯ ಎರಡು ಟೆಸ್ಟ್ ಹಾಗೂ 5 ಪಂದ್ಯಗಳ ಟಿ20 ಸರಣಿ ನಡೆಯಲಿದೆ. ವಿಶ್ವದ ಅತ್ಯಂತ ದೊಡ್ಡ ಕ್ರಿಕೆಟ್ ಸ್ಟೇಡಿಯಂ ಎನಿಸಿಕೊಂಡಿರುವ ಮೊಟೇರಾ ಸ್ಟೇಡಿಯಂನ ಕೆಲವೊಂದು ಕುತೂಹಲಕಾರಿ ಸಂಗತಿಗಳನ್ನು ಕ್ರಿಕೆಟ್‌ ಅಭಿಮಾನಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಹೆಕ್ಕಿತಂದಿದೆ.