Ind vs Eng ಇಂಗ್ಲೆಂಡ್ ಎದುರಿನ 3ನೇ ಟಿ20 ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಒಂದು ಬದಲಾವಣೆ?
ನಾಟಿಂಗ್‌ಹ್ಯಾಮ್: ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಮೂರು ಪಂದ್ಯಗಳ ಟಿ20 ಸರಣಿಗಳ ಪೈಕಿ ಎರಡನೇ ಪಂದ್ಯದಲ್ಲಿ 49 ರನ್‌ಗಳ ಗೆಲುವು ದಾಖಲಿಸುವ ಮೂಲಕ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ 2-0 ಅಂತರದಲ್ಲಿ ಟಿ20 ಸರಣಿಯನ್ನು ಕೈವಶ ಮಾಡಿಕೊಂಡಿದೆ. ಇದೀಗ ಇಂದು ನಡೆಯಲಿರುವ ಮೂರನೇ ಟಿ20 ಪಂದ್ಯದಲ್ಲಿ ಭಾರತ ತಂಡವು ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಇಂಗ್ಲೆಂಡ್ ಎದುರಿನ ಮೂರನೇ ಟಿ20 ಪಂದ್ಯಕ್ಕೆ ಭಾರತದ ಸಂಭಾವ್ಯ ತಂಡ ಹೀಗಿದೆ ನೋಡಿ

1. ರೋಹಿತ್ ಶರ್ಮಾ
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಬ್ಯಾಟಿಂಗ್‌ನಲ್ಲಿ ಸ್ಪೋಟಕ ಆರಂಭವನ್ನು ಒದಗಿಸಿಕೊಡುತ್ತಿದ್ದಾರೆ. ಆದರೆ ಉತ್ತಮ ಆರಂಭವನ್ನು ದೊಡ್ಡ ಮೊತ್ತವನ್ನಾಗಿ ಪರಿವರ್ತಿಸಲು ವಿಫಲವಾಗುತ್ತಿದ್ದಾರೆ. ಮೂರನೇ ಟಿ20 ಪಂದ್ಯದಲ್ಲಿ ದೊಡ್ಡ ಮೊತ್ತ ಕಲೆಹಾಕುವ ಪ್ರಯತ್ನದಲ್ಲಿದ್ದಾರೆ.
Image credit: PTI
2. ರಿಷಭ್ ಪಂತ್
ವಿಕೆಟ್ ಕೀಪರ್ ಬ್ಯಾಟರ್ ಎರಡನೇ ಟಿ20 ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದು, ಪವರ್ ಪ್ಲೇ ಲಾಭ ಎತ್ತುವಲ್ಲಿ ಯಶಸ್ವಿಯಾಗಿದ್ದರು. ಹೀಗಾಗಿ ಇಂದಿನ ಪಂದ್ಯದಲ್ಲೂ ಪಂತ್ ಆರಂಭಿಕನಾಗಿ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ.
Image credit: Getty
3. ವಿರಾಟ್ ಕೊಹ್ಲಿ
ಮಾಜಿ ನಾಯಕ ವಿರಾಟ್ ಕೊಹ್ಲಿ ಎರಡನೇ ಟಿ20 ಪಂದ್ಯದಲ್ಲಿ ದೊಡ್ಡ ಹೊಡೆತಕ್ಕೆ ಯತ್ನಿಸಿ ಅಲ್ಪಮೊತ್ತಕ್ಕೆ ವಿಕೆಟ್ ಒಪ್ಪಿಸಿದ್ದರು. ಹೀಗಿದ್ದೂ ಮೂರನೇ ಟಿ20 ಪಂದ್ಯದಲ್ಲಿ ಫಾರ್ಮ್‌ಗೆ ಮರಳಲು ಕಿಂಗ್ ಕೊಹ್ಲಿ ಎದುರು ನೋಡುತ್ತಿದ್ದಾರೆ.
4. ಸೂರ್ಯಕುಮಾರ್ ಯಾದವ್
ಮುಂಬೈ ಮೂಲದ ಪ್ರತಿಭಾನ್ವಿತ ಬ್ಯಾಟರ್ ಸೂರ್ಯಕುಮಾರ್ ಯಾದವ್, ನಾಲ್ಕನೇ ಕ್ರಮಾಂಕದಲ್ಲಿ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುತ್ತಿದ್ದು, ಮತ್ತೊಮ್ಮೆ ಇಂಗ್ಲೆಂಡ್ ಬೌಲರ್‌ಗಳನ್ನು ಕಾಡಲು ಸಜ್ಜಾಗಿದ್ದಾರೆ.
Image credit: Getty
5. ಹಾರ್ದಿಕ್ ಪಾಂಡ್ಯ
ಟೀಂ ಇಂಡಿಯಾ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ, 15ನೇ ಆವೃತ್ತಿಯ ಐಪಿಎಲ್ ಬಳಿಕ ಭರ್ಜರಿ ಆಲ್ರೌಂಡ್ ಪ್ರದರ್ಶನ ತೋರುತ್ತಿದ್ದು, ಮಧ್ಯಮ ಕ್ರಮಾಂಕದಲ್ಲಿ ನಂಬಿಗಸ್ಥ ಬ್ಯಾಟರ್ ಎನಿಸಿಕೊಂಡಿದ್ದಾರೆ.
Image credit: PTI
6. ದಿನೇಶ್ ಕಾರ್ತಿಕ್
ಟೀಂ ಇಂಡಿಯಾ ಅನುಭವಿ ಬ್ಯಾಟರ್ ದಿನೇಶ್ ಕಾರ್ತಿಕ್ ಮ್ಯಾಚ್ ಫಿನಿಶರ್ ಆಗಿ ಗಮನ ಸೆಳೆಯುತ್ತಿದ್ದು, ಕಳೆದ ಪಂದ್ಯದಲ್ಲಿ ದೊಡ್ಡ ಮೊತ್ತ ಗಳಿಸುವ ಮುನ್ನವೇ ರನೌಟ್ ಆಗಿದ್ದರು. ಇಂದಿನ ಪಂದ್ಯದಲ್ಲಿ ಡಿಕೆ ಬಾಸ್ ಅಬ್ಬರಿಸುತ್ತಾರಾ ಕಾದು ನೋಡಬೇಕಿದೆ.
7. ರವೀಂದ್ರ ಜಡೇಜಾ
ಅನುಭವಿ ಆಲ್ರೌಂಡರ್ ಜಡೇಜಾ, ಎರಡನೇ ಟಿ20 ಪಂದ್ಯದಲ್ಲಿ ಭಾರತ ತಂಡವು ಬ್ಯಾಟಿಂಗ್‌ನಲ್ಲಿ ಅಲ್ಪಮೊತ್ತಕ್ಕೆ ಕುಸಿಯುವ ಭೀತಿಗೆ ಸಿಲುಕಿದ್ದಾಗ ಅಜೇಯ 46 ರನ್ ಬಾರಿಸಿದ್ದರು. ಇದೀಗ ಜಡ್ಡು ಅದೇ ಲಯ ಮುಂದುವರೆಸಿಕೊಂಡು ಹೋಗಲು ಎದುರು ನೋಡುತ್ತಿದ್ದಾರೆ.
8. ಭುವನೇಶ್ವರ್ ಕುಮಾರ್
ಗಾಯದಿಂದ ಚೇತರಿಸಿಕೊಂಡು ಬಂದಿರುವ ಅನುಭವಿ ವೇಗಿ ಭುವನೇಶ್ವರ್ ಕುಮಾರ್, ತಮ್ಮ ಸ್ವಿಂಗ್ ಬೌಲಿಂಗ್ ಮೂಲಕ ಇಂಗ್ಲೆಂಡ್ ಬ್ಯಾಟರ್‌ಗಳನ್ನು ಕಾಡುತ್ತಿದ್ದಾರೆ. ಇದರ ಜತೆಗೆ ಎದುರಾಳಿ ತಂಡದ ರನ್ ವೇಗಕ್ಕೂ ಕಡಿವಾಣ ಹಾಕುತ್ತಿರುವುದು ತಂಡಕ್ಕೆ ಪ್ಲಸ್ ಪಾಯಿಂಟ್ ಎನಿಸಿದೆ.
Jasprit Bumrah
9. ಜಸ್ಪ್ರೀತ್ ಬುಮ್ರಾ
ಚುಟುಕು ಕ್ರಿಕೆಟ್‌ನಲ್ಲಿ ಕೊಂಚ ಮಂಕಾಗಿದ್ದ ಟೀಂ ಇಂಡಿಯಾ ಮಾರಕ ವೇಗಿ ಬುಮ್ರಾ, ಕಳೆದ ಟಿ20 ಪಂದ್ಯದಲ್ಲಿ ಚಾಣಾಕ್ಷ ಬೌಲಿಂಗ್ ದಾಳಿ ನಡೆಸುವ ಮೂಲಕ ಇಂಗ್ಲೆಂಡ್ ಬ್ಯಾಟರ್‌ಗಳನ್ನು ಕಾಡಿದ್ದಾರೆ. ಬುಮ್ರಾ ಎದುರಿಸುವುದು ಇಂಗ್ಲೆಂಡ್ ಬ್ಯಾಟರ್‌ಗಳಿಗೆ ದೊಡ್ಡ ತಲೆನೋವಾಗಿದೆ.
10. ಆರ್ಶದೀಪ್ ಸಿಂಗ್
ಹರ್ಷಲ್ ಪಟೇಲ್ ಸತತವಾಗಿ ಅಂತಾರಾಷ್ಟ್ರೀಯ ಪಂದ್ಯಗಳನ್ನಾಡುತ್ತಿದ್ದಾರೆ. ಹೀಗಾಗಿ ಮೂರನೇ ಟಿ20 ಪಂದ್ಯದಲ್ಲಿ ಹರ್ಷಲ್ ಪಟೇಲ್‌ಗೆ ವಿಶ್ರಾಂತಿ ನೀಡಿ ಆರ್ಶದೀಪ್ ಸಿಂಗ್‌ಗೆ ಟೀಂ ಇಂಡಿಯಾ ಆಡುವ ಹನ್ನೊಂದರ ಬಳಗದಲ್ಲಿ ಮಣೆಹಾಕುವ ಸಾಧ್ಯತೆಯಿದೆ.
Image credit: PTI
11. ಯುಜುವೇಂದ್ರ ಚಹಲ್
ಟೀಂ ಇಂಡಿಯಾ ತಾರಾ ಲೆಗ್ ಸ್ಪಿನ್ನರ್ ಯುಜುವೇಂದ್ರ ಚಹಲ್, ತಮ್ಮ ಹಳೆಯ ಲಯಕ್ಕೆ ಮರಳುವಲ್ಲಿ ಯಶಸ್ವಿಯಾಗಿದ್ದು, ಎರಡನೇ ಟಿ20 ಪಂದ್ಯದಲ್ಲಿ ಕೇವಲ 10 ರನ್ ನೀಡಿ 2 ವಿಕೆಟ್ ಉರುಳಿಸಿದ್ದರು. ಟಿ20 ವಿಶ್ವಕಪ್ ಟೂರ್ನಿಯಲ್ಲಿ ತಮ್ಮ ಹೆಸರು ಖಚಿತ ಪಡಿಸಿಕೊಳ್ಳುವ ಹಾತೊರೆಯುತ್ತಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.