Ind vs NZ ನ್ಯೂಜಿಲೆಂಡ್ ಎದುರಿನ ಎರಡನೇ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 2 ಬದಲಾವಣೆ..?
ಹ್ಯಾಮಿಲ್ಟನ್(ನ.26): ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯವು ಇಲ್ಲಿನ ಸೆಡನ್ ಪಾರ್ಕ್‌ನಲ್ಲಿ ಭಾನುವಾರ ಭಾರತೀಯ ಕಾಲಮಾನ ಬೆಳಗ್ಗೆ 7 ಗಂಟೆಯಿಂದ ಆರಂಭವಾಗಲಿದೆ. ಈಗಾಗಲೇ ಮೊದಲ ಏಕದಿನ ಪಂದ್ಯ ಸೋತು ಕಂಗಾಲಾಗಿರುವ ಶಿಖರ್ ಧವನ್ ನೇತೃತ್ವದ ಟೀಂ ಇಂಡಿಯಾ ಪಾಲಿಗೆ ಈ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯ ಎನಿಸಿದ್ದು, ಎರಡನೇ ಏಕದಿನ ಪಂದ್ಯದಲ್ಲಿ ಎರಡು ಪ್ರಮುಖ ಬದಲಾವಣೆಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ.

1. ಶಿಖರ್ ಧವನ್: ಟೀಂ ಇಂಡಿಯಾ ನಾಯಕ ಧವನ್, ಮೊದಲ ಪಂದ್ಯದಲ್ಲೇ ಆಕರ್ಷಕ ಅರ್ಧಶತಕ ಸಿಡಿಸುವ ಮೂಲಕ ತಂಡಕ್ಕೆ ಆಸರೆಯಾಗಿದ್ದರು. ಆದರೆ ನಾಯಕನಾಗಿ ಪಂದ್ಯವನ್ನು ಗೆಲ್ಲಿಸಲು ವಿಫಲವಾಗಿದ್ದರು.
2. ಶುಭ್‌ಮನ್ ಗಿಲ್: ಪ್ರತಿಭಾನ್ವಿತ ಬ್ಯಾಟರ್ ಗಿಲ್ ಕೂಡಾ ಮೊದಲ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ್ದು ಮಾತ್ರವಲ್ಲದೇ ಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟಿದ್ದರು. ಅದೇ ಲಯ ಮುಂದುವರೆಸಿಕೊಂಡು ಹೋಗಲು ಗಿಲ್ ಎದುರು ನೋಡುತ್ತಿದ್ದಾರೆ.
3. ಶ್ರೇಯಸ್ ಅಯ್ಯರ್: ಮುಂಬೈ ಮೂಲದ ಪ್ರತಿಭಾನ್ವಿತ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಏಕದಿನ ಕ್ರಿಕೆಟ್‌ನಲ್ಲಿ ಅತ್ಯಂತ ಸ್ಥಿರ ಪ್ರದರ್ಶನದ ಮೂಲಕ ಗಮನ ಸೆಳೆಯುತ್ತಿದ್ದು, ಕಳೆದ ಪಂದ್ಯದಲ್ಲೂ 80 ರನ್ ಸಿಡಿಸಿದ್ದರು.
4. ಸೂರ್ಯಕುಮಾರ್ ಯಾದವ್: ಟೀಂ ಇಂಡಿಯಾ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಬೆನ್ನೆಲುಬು ಎನಿಸಿಕೊಂಡಿರುವ ಸೂರ್ಯ ಮೊದಲ ಪಂದ್ಯದಲ್ಲಿ ಅಲ್ಪ ಮೊತ್ತಕ್ಕೆ ವಿಕೆಟ್ ಒಪ್ಪಿಸಿದ್ದರು. ಇದೀಗ ಎರಡನೇ ಪಂದ್ಯದಲ್ಲಿ ಫಾರ್ಮ್‌ಗೆ ಮರಳು ಎದುರು ನೋಡುತ್ತಿದ್ದಾರೆ.
5. ರಿಷಭ್ ಪಂತ್: ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಪಂತ್, ಮತ್ತೊಮ್ಮೆ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದಾರೆ. ಕೆ ಎಲ್ ರಾಹುಲ್ ಅನುಪಸ್ಥಿತಿಯಲ್ಲಿ ಉಪನಾಯಕರಾಗಿರುವ ಪಂತ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶನ ತೋರಬೇಕಿದೆ.
6. ಸಂಜು ಸ್ಯಾಮ್ಸನ್: ಕೇರಳ ಮೂಲದ ಕ್ರಿಕೆಟಿಗ ಸಂಜು ಸ್ಯಾಮ್ಸನ್, ಕಳೆದ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಜತೆ ಜವಬ್ದಾರಿಯುತ ಜತೆಯಾಟ ನಿಭಾಯಿಸಿದ್ದರು. ಸಂಜು ಸ್ಪೋಟಕ ಇನಿಂಗ್ಸ್ ಆಡಬೇಕಿದೆ.
7. ವಾಷಿಂಗ್ಟನ್ ಸುಂದರ್: ತಮಿಳುನಾಡು ಮೂಲದ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಬ್ಯಾಟಿಂಗ್‌ನಲ್ಲಿ ಚುರುಕಾಗಿ ರನ್ ಗಳಿಸಿ ಗಮನ ಸೆಳೆದಿದ್ದರು. ಬೌಲಿಂಗ್‌ನಲ್ಲೂ ಸುಂದರ್ ವಿಕೆಟ್ ಕಬಳಿಸಲು ಎದುರು ನೋಡುತ್ತಿದ್ದಾರೆ.
8. ದೀಪಕ್ ಚಹರ್: ಕಳೆದ ಪಂದ್ಯದಲ್ಲಿ ಶಾರ್ದೂಲ್ ಠಾಕೂರ್ ಕೊಂಚ ದುಬಾರಿಯಾಗಿದ್ದರು. ಹೀಗಾಗಿ ಸ್ವಿಂಗ್ ಸ್ಪೆಷಲಿಸ್ಟ್ ವೇಗಿ ದೀಪಕ್ ಚಹರ್ ಟೀಂ ಇಂಡಿಯಾ ಆಡುವ ಹನ್ನೊಂದರ ಬಳಗ ಕೂಡಿಕೊಳ್ಳುವ ನಿರೀಕ್ಷೆಯಿದೆ.
9. ಆರ್ಶದೀಪ್ ಸಿಂಗ್: ಟೀಂ ಇಂಡಿಯಾ ಎಡಗೈ ವೇಗಿ ಆರ್ಶದೀಪ್ ಸಿಂಗ್, ಟಿ20 ಮಾದರಿಯಲ್ಲಿ ಮಾರಕ ದಾಳಿ ನಡೆಸಿದ್ದರು, ಆದರೆ ಏಕದಿನ ಕ್ರಿಕೆಟ್‌ನಲ್ಲಿ ನಿರೀಕ್ಷಿತ ಯಶಸ್ಸು ಸಿಕ್ಕಿಲ್ಲ. ಎರಡನೇ ಏಕದಿನ ಪಂದ್ಯದಲ್ಲಿ ಯಾವ ರೀತಿ ಪ್ರದರ್ಶನ ತೋರಲಿದ್ದಾರೆ ಕಾದು ನೋಡಬೇಕಿದೆ.
10. ಕುಲ್ದೀಪ್ ಯಾದವ್: ಇತ್ತೀಚಿಗೆ ಯುಜುವೇಂದ್ರ ಚಹಲ್ ವಿಕೆಟ್ ಕಬಳಿಸಲು ವಿಫಲವಾಗುತ್ತಿದ್ದು, ಎರಡನೇ ಪಂದ್ಯಕ್ಕೆ ಚಹಲ್‌ಗೆ ವಿಶ್ರಾಂತಿ ನೀಡಿ ಕುಲ್ದೀಪ್ ಯಾದವ್‌ಗೆ ಅವಕಾಶ ಸಿಗುವ ಸಾಧ್ಯತೆಯಿದೆ.
10. ಉಮ್ರಾನ್ ಮಲಿಕ್: ಮಾರಕ ವೇಗಿ ಮೊದಲ ಪಂದ್ಯದಲ್ಲೇ 2 ವಿಕೆಟ್ ಕಬಳಿಸಿ ಮಿಂಚಿದ್ದ ಕಾಶ್ಮೀರ್ ಎಕ್ಸ್‌ಪ್ರೆಸ್, ಇದೀಗ ಎರಡನೇ ಪಂದ್ಯದಲ್ಲೂ ವೇಗದ ದಾಳಿಯ ಮೂಲಕ ಕಿವೀಸ್ ಬ್ಯಾಟರ್‌ಗಳನ್ನು ಕಾಡಲು ಸಜ್ಜಾಗಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.