MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • Ind vs NZ Mumbai Test: ಎರಡನೇ ಟೆಸ್ಟ್‌ ಆರಂಭಕ್ಕೂ ಮುನ್ನ ಟೀಂ ಇಂಡಿಯಾಗೆ ಬಿಗ್. ಮೂವರು ಆಟಗಾರರು ಔಟ್‌!

Ind vs NZ Mumbai Test: ಎರಡನೇ ಟೆಸ್ಟ್‌ ಆರಂಭಕ್ಕೂ ಮುನ್ನ ಟೀಂ ಇಂಡಿಯಾಗೆ ಬಿಗ್. ಮೂವರು ಆಟಗಾರರು ಔಟ್‌!

ಮುಂಬೈ: ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ನಡುವಿನ ಎರಡನೇ ಟೆಸ್ಟ್‌ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಹೀಗಿರುವಾಗಲೇ ಮುಂಬೈನಲ್ಲಿ (Mumbai) ಕಳೆದೆರಡು ದಿನ ಸುರಿದ ನಿರಂತರ ಮಳೆಯಿಂದಾಗಿ ಪಂದ್ಯ ನಿಗದಿತ ಸಮಯಕ್ಕೆ ಆರಂಭವಾಗಿಲ್ಲ. ಹೀಗಿರುವಾಗಲೇ ಸರಣಿ ಗೆಲ್ಲಲು ಎದುರು ನೋಡುತ್ತಿರುವ ಭಾರತ ತಂಡಕ್ಕೆ (Indian Cricket Team) ಅತಿದೊಡ್ಡ ಶಾಕ್ ಎದುರಾಗಿದ್ದು, ತಂಡದ ಮೂರು ಸ್ಟಾರ್ ಆಟಗಾರರು ಎರಡಮೇ ಟೆಸ್ಟ್ ಪಂದ್ಯದಿಂದ (Test Cricket) ಹೊರಬಿದ್ದಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 

2 Min read
Author : Suvarna News | Asianet News
| Updated : Dec 03 2021, 03:21 PM IST
Share this Photo Gallery
  • FB
  • TW
  • Linkdin
  • Whatsapp
18

ಭಾರತ ಹಾಗೂ ನ್ಯೂಜಿಲೆಂಡ್ ನಡುವೆ ಕಾನ್ಪುರದ ಗ್ರೀನ್‌ ಪಾರ್ಕ್‌ ಕ್ರಿಕೆಟ್‌ ಮೈದಾನದಲ್ಲಿ ನಡೆದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಭಾರತ ಮೂಲದ ರಚಿನ್ ರವೀಂದ್ರ ಹಾಗೂ ಅಜಾಜ್ ಪಟೇಲ್‌ ದಿಟ್ಟ ಹೋರಾಟ ನಡೆಸುವ ಮೂಲಕ ಪಂದ್ಯ ರೋಚಕ ಡ್ರಾದಲ್ಲಿ ಅಂತ್ಯವಾಗುವಂತೆ ಮಾಡಿದ್ದರು.

28

ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲ ಪಂದ್ಯ ಡ್ರಾದಲ್ಲಿ ಅಂತ್ಯವಾಗಿದ್ದರಿಂದ ಇದೀಗ ಎರಡನೇ ಟೆಸ್ಟ್ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಹೀಗಿರುವಾಗಲೇ ಎರಡನೇ ಟೆಸ್ಟ್‌ ಪಂದ್ಯಕ್ಕೂ ಮುನ್ನ ಮಳೆ ಸುರಿದಿದ್ದರಿಂದ ಮುಂಬೈನ ವಾಂಖೆಡೆ ಮೈದಾನದಲ್ಲಿ ಇನ್ನೂ ಟಾಸ್ ಕೂಡಾ ನಡೆದಿಲ್ಲ.

38

ಎರಡನೇ ಟೆಸ್ಟ್ ಪಂದ್ಯ ಗೆದ್ದು ತವರಿನಲ್ಲಿ ಸರಣಿ ಕೈವಶ ಮಾಡಿಕೊಳ್ಳುವ ಲೆಕ್ಕಾಚಾರದಲ್ಲಿದ್ದ ಟೀಂ ಇಂಡಿಯಾಗೆ ಬಿಗ್‌ ಶಾಕ್ ಎದುರಾಗಿದ್ದು, ತಂಡದ ಮೂವರು ಅನುಭವಿ ಕ್ರಿಕೆಟಿಗರು ಮುಂಬೈ ಟೆಸ್ಟ್‌ ಪಂದ್ಯದಿಂದ ಹೊರಬಿದ್ದಿದ್ದಾರೆ.

48

ಹೌದು, ಟೀಂ ಇಂಡಿಯಾ ಟೆಸ್ಟ್ ತಂಡದ ಉಪನಾಯಕ ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ ಹಾಗೂ ವೇಗಿ ಇಶಾಂತ್ ಶರ್ಮಾ ಮುಂಬೈ ಟೆಸ್ಟ್‌ ಪಂದ್ಯದಿಂದ ಹೊರಬಿದ್ದಿರುವುದಾಗಿ ಬಿಸಿಸಿಐ ಖಚಿತಪಡಿಸಿದೆ. 

58

ಕಿವೀಸ್ ವಿರುದ್ದದ ಮೊದಲ ಟೆಸ್ಟ್‌ ಪಂದ್ಯದ ಕೊನೆಯ ದಿನದಾಟದಲ್ಲಿ ಇಶಾಂತ್ ಶರ್ಮಾ ಅವರ ಎಡ ಕಿರುಬೆರಳು ಕೀಲು ತಪ್ಪಿದ್ದು, ವೈದ್ಯಕೀಯ ಸಿಬ್ಬಂದಿಗಳು ಅವರ ಬೆರಳಿನ ಮೇಲೆ ನಿಗಾಯಿಟ್ಟಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬಿಸಿಸಿಐ ತಿಳಿಸಿದೆ.
 

68

ಇನ್ನು ಮೊದಲ ಟೆಸ್ಟ್‌ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಆಕರ್ಷಕ ಅರ್ಧಶತಕ ಬಾರಿಸಿದ್ದಷ್ಟೇ ಅಲ್ಲದೇ ಬೌಲಿಂಗ್‌ನಲ್ಲೂ ನೆರವಾಗಿದ್ದ ಆಲ್ರೌಂಡರ್ ರವೀಂದ್ರ ಜಡೇಜಾ ಅವರ ಬಲ ಮುಂಗೈ ಗಾಯಗೊಂಡಿದ್ದು, ವೈದ್ಯಕೀಯ ಸಿಬ್ಬಂದಿ ವಿಶ್ರಾಂತಿ ಪಡೆಯಲು ಸೂಚಿಸಿರುವುದರಿಂದ ಜಡ್ಡು ಸಹಾ ಎರಡನೇ ಟೆಸ್ಟ್ ಪಂದ್ಯದಿಂದ ಹೊರಬಿದ್ದಿದ್ದಾರೆ.
 

78
Ajinkya Rahane

Ajinkya Rahane

ಇನ್ನು ಅಜಿಂಕ್ಯ ರಹಾನೆ ಕಾನ್ಪುರ ಟೆಸ್ಟ್ ವೇಳೆ ಫೀಲ್ಡಿಂಗ್ ಮಾಡುವಾಗ ಎಡಗಾಲು ಸ್ನಾಯು ಸೆಳೆತಕ್ಕೆ ಒಳಗಾಗಿದ್ದಾರೆ. ರಹಾನೆ ಸಂಪೂರ್ಣವಾಗಿ ಸ್ನಾಯು ಸೆಳೆತದಿಂದ ಗುಣಮುಖರಾಗದ ಹಿನ್ನೆಲೆಯಲ್ಲಿ ಮುಂಬೈ ಟೆಸ್ಟ್‌ ಪಂದ್ಯದಿಂದ ಹೊರಬಿದ್ದಿದ್ದಾರೆ.

88

ಇದೀಗ ರಹಾನೆ ಬದಲಿಗೆ ವಿರಾಟ್ ಕೊಹ್ಲಿ, ಇಶಾಂತ್ ಶರ್ಮಾ ಬದಲಿಗೆ ಮೊಹಮ್ಮದ್ ಸಿರಾಜ್ ತಂಡ ಕೂಡಿಕೊಳ್ಳುವುದು ಖಚಿತ ಎನಿಸಿದ್ದು, ಜಡೇಜಾ ಬದಲಿಗೆ ಯಾರು ತಂಡ ಕೂಡಿಕೊಳ್ಳಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News
ಕ್ರಿಕೆಟ್
ಟೀಮ್ ಇಂಡಿಯಾ
ಟೆಸ್ಟ್ ಕ್ರಿಕೆಟ್

Latest Videos
Recommended Stories
Recommended image1
IPL ಡೀಲ್‌ಗಾಗಿ ದಕ್ಷಿಣ ಆಫ್ರಿಕಾ ವಿರುದ್ಧ ಸೋತ ವೆಸ್ಟ್‌ ಇಂಡೀಸ್‌? ಪಾಕ್‌ ಮಾಜಿ ಸ್ಪಿನ್ನರ್‌ ಸಕ್ಲೇನ್ ಮುಷ್ತಾಕ್ ಗಂಭೀರ ಆರೋಪ!
Recommended image2
IND vs ZIM: T20 ವಿಶ್ವಕಪ್‌ನಲ್ಲಿ ಭಾರತದ ವಿಶ್ವರೂಪ; ಜಿಂಬಾಬ್ವೆ ಈ ಸೋಲನ್ನು ವರ್ಷಗಳ ಕಾಲ ನೆನಪಿಸಿಕೊಳ್ಳುತ್ತದೆ!
Recommended image3
ಚೆಪಾಕ್‌ ನೆಲದಲ್ಲಿ ಜಿಂಬಾಬ್ವೆ ಛಿದ್ರ ಮಾಡಿದ ಟೀಮ್‌ ಇಂಡಿಯಾ, ಸೆಮಿಫೈನಲ್‌ಗೆ ಈಗ ವಿಂಡೀಸ್‌ ಜೊತೆ ಫೈಟ್‌!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved