Ind vs NZ Series: ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ಅಪರೂಪದ ದಾಖಲೆ ಮುರಿದ ರೋಹಿತ್ ಶರ್ಮಾ..!
ಬೆಂಗಳೂರು: ನ್ಯೂಜಿಲೆಂಡ್ (New Zealand Cricket) ಎದುರಿನ ಮೂರನೇ ಹಾಗೂ ಕೊನೆಯ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ (Team India) 73 ರನ್‌ಗಳ ಸುಲಭ ಗೆಲುವು ದಾಖಲಿಸುವುದರೊಂದಿಗೆ 3 ಪಂದ್ಯಗಳ ಟಿ20 ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಇದೇ ಪಂದ್ಯದಲ್ಲಿ ಟೀಂ ಇಂಡಿಯಾ ಟಿ20 ತಂಡದ ನಾಯಕ ರೋಹಿತ್ ಶರ್ಮಾ (Rohit Sharma), ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಅಳಿಸಿಹಾಕುವಲ್ಲಿ ಹಿಟ್‌ಮ್ಯಾನ್ ಯಶಸ್ವಿಯಾಗಿದ್ದಾರೆ. ಇದರ ಜತೆಗೆ ಸಿಕ್ಸರ್ ಚಚ್ಚುವುದರಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಟೀಂ ಇಂಡಿಯಾ ಟಿ20 ಪೂರ್ಣ ಪ್ರಮಾಣದ ನಾಯಕನಾಗಿ ಮೊದಲ ಪ್ರಯತ್ನದಲ್ಲೇ ಯಶಸ್ವಿಯಾಗಿದ್ದು, ತವರಿನಲ್ಲಿ ನ್ಯೂಜಿಲೆಂಡ್ ಎದುರು ಟಿ20 ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿದೆ.
Rohit Sharma
ಕೋಲ್ಕತದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಕಿವೀಸ್ ವಿರುದ್ಧ 56 ರನ್ ಸಿಡಿಸಿದ ರೋಹಿತ್ ಶರ್ಮಾ, ಅಂತಾರಾಷ್ಟ್ರೀಯ ಟಿ20ಯಲ್ಲಿ 26ನೇ ಅರ್ಧಶತಕ ದಾಖಲಿಸಿದರು.
ತಮ್ಮ ಟಿ20 ಕ್ರಿಕೆಟ್ ವೃತ್ತಿಬದುಕಿನಲ್ಲಿ 4 ಶತಕ ಸಹ ಬಾರಿಸಿರುವ ರೋಹಿತ್, ಅಂತಾರಾಷ್ಟ್ರೀಯ ಟಿ20ಯಲ್ಲಿ 30 ಬಾರಿ 50ಕ್ಕಿಂತ ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎನ್ನುವ ವಿಶ್ವ ದಾಖಲೆ ಬರೆದಿದ್ದಾರೆ.
Virat Kohli
ಈ ಮೊದಲು ಭಾರತ ಟಿ20 ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ 29 ಅರ್ಧಶತಕ ಬಾರಿಸಿ ಅತಿಹೆಚ್ಚು ಬಾರಿ 50ಕ್ಕಿಂತ ಹೆಚ್ಚು ರನ್ ಗಳಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದರು. ಕೊಹ್ಲಿಯ ದಾಖಲೆಯನ್ನು ರೋಹಿತ್ ಮುರಿದಿದ್ದಾರೆ.
Babar Azam
ಇನ್ನು ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಆಜಂ 25 ಬಾರಿ 50+ ರನ್ ಗಳಿಸಿ, ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದಾರೆ. ಇತ್ತೀಚಿನ ದಿನಗಳಲ್ಲಿ ಬಾಬರ್ ಅಜಂ ಟಿ20 ಕ್ರಿಕೆಟ್‌ನಲ್ಲಿ ಅಮೋಘ ಫಾರ್ಮ್‌ನಲ್ಲಿದ್ದಾರೆ.
ಟೆಸ್ಟ್‌ನಲ್ಲಿ 50ಕ್ಕೂ ಹೆಚ್ಚು ಸಿಕ್ಸರ್, ಏಕದಿನದಲ್ಲಿ 100ಕ್ಕೂ ಹೆಚ್ಚು ಸಿಕ್ಸರ್ ಹಾಗೂ ಅಂತಾರಾಷ್ಟ್ರೀಯ ಟಿ20ಯಲ್ಲಿ 150ಕ್ಕೂ ಹೆಚ್ಚು ಸಿಕ್ಸರ್ ಸಿಡಿಸಿರುವ ಏಕೈಕ ಬ್ಯಾಟರ್ ಎನ್ನುವ ದಾಖಲೆಯನ್ನು ರೋಹಿತ್ ಹೊಂದಿರುವುದು ವಿಶೇಷ.
Rohit Sharma
ಇನ್ನು ತಮ್ಮ 56 ರನ್‌ಗಳ ಇನ್ನಿಂಗ್ಸ್‌ನಲ್ಲಿ 3 ಸಿಕ್ಸರ್ ಚಚ್ಚಿದ ರೋಹಿತ್ ಶರ್ಮಾ, ಅಂತಾರಾಷ್ಟ್ರೀಯ ಟಿ20ಯಲ್ಲಿ 150 ಸಿಕ್ಸರ್ ಪೂರೈಸಿದರು. ಈ ಮೈಲಿಗಲ್ಲು ತಲುಪಿದ ಭಾರತದ ಮೊದಲ ಹಾಗೂ ವಿಶ್ವದ 2ನೇ ಬ್ಯಾಟರ್ ಎನಿಸಿಕೊಂಡರು.
ರೋಹಿತ್ ಶರ್ಮಾಗಿಂತ ಮೊದಲು ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟರ್ ಮಾರ್ಟಿನ್ ಗಪ್ಟಿಲ್ ಈ ಸಾಧನೆ ಮಾಡಿದ್ದರು. ಮಾರ್ಟಿನ್ ಗಪ್ಟಿಲ್ ಚುಟುಕು ಕ್ರಿಕೆಟ್‌ನಲ್ಲಿ ಸದ್ಯ 161 ಸಿಕ್ಸರ್ ಸಿಡಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.