MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Sports
  • Cricket
  • Ind Vs NZ Test Series: ಕಾನ್ಪುರ ಟೆಸ್ಟ್‌ಗೂ ಮುನ್ನ ಗುಡ್‌ ನ್ಯೂಸ್ ಕೊಟ್ಟ ಅಜಿಂಕ್ಯ ರಹಾನೆ..!

Ind Vs NZ Test Series: ಕಾನ್ಪುರ ಟೆಸ್ಟ್‌ಗೂ ಮುನ್ನ ಗುಡ್‌ ನ್ಯೂಸ್ ಕೊಟ್ಟ ಅಜಿಂಕ್ಯ ರಹಾನೆ..!

ಕಾನ್ಪುರ: ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ತಂಡಗಳ ನಡುವಿನ ಟಿ20 ಸರಣಿ (T20 Series) ಮುಕ್ತಾಯವಾಗಿದ್ದು, ಇದೀಗ ಉಭಯ ತಂಡಗಳ ನಡುವೆ ಎರಡು ಪಂದ್ಯಗಳ ಟೆಸ್ಟ್ ಸರಣಿ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಕಾನ್ಪುರದ ಗ್ರೀಕ್‌ ಪಾರ್ಕ್ ಮೈದಾನದಲ್ಲಿ (Green Park Stadium) ಮೊದಲ ಟೆಸ್ಟ್‌ ಪಂದ್ಯ ನವೆಂಬರ್ 25ರಿಂದ ಆರಂಭವಾಗಲಿದೆ. ಈ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ (Team India) ಹಂಗಾಮಿ ನಾಯಕ ಅಜಿಂಕ್ಯ ರಹಾನೆ (Ajinkya Rahane) ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ (Indian Cricket Fans) ಗುಡ್‌ ನ್ಯೂಸ್ ನೀಡಿದ್ದಾರೆ. ಏನದು ಗುಡ್‌ ನ್ಯೂಸ್ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

2 Min read
Contributor Asianet | Asianet News
Published : Nov 24 2021, 05:28 PM IST
Share this Photo Gallery
  • FB
  • TW
  • Linkdin
  • Whatsapp
17

ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ತಂಡಗಳ ನಡುವಿನ ಟಿ20 ಸರಣಿಯನ್ನು ರೋಹಿತ್ ಶರ್ಮಾ (Rohit Sharma) ನೇತೃತ್ವದ ಟೀಂ ಇಂಡಿಯಾ 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿಕೊಂಡಿತ್ತು. ಇದೀಗ ಭಾರತ ತಂಡವು ಟೆಸ್ಟ್ ಸರಣಿಯನ್ನಾಡಲು ಸಜ್ಜಾಗಿದೆ.

27

ಕಾನ್ಪುರದ ಗ್ರೀನ್‌ ಪಾರ್ಕ್‌ ಸ್ಟೇಡಿಯಂನಲ್ಲಿ (Green Park Stadium) ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯವು ನವೆಂಬರ್ 25ರಿಂದ ಆರಂಭವಾಗಲಿದೆ. ಈ ಸರಣಿ ಆರಂಭಕ್ಕೂ ಮುನ್ನ ಗಾಯದ ಸಮಸ್ಯೆಯಿಂದ ಕನ್ನಡಿಗ ಕೆ.ಎಲ್. ರಾಹುಲ್ (KL Rahul) ಹೊರಬಿದ್ದಿದ್ದರು.

37
শ্রেয়স আইয়ার

শ্রেয়স আইয়ার

ಇದೀಗ ಕೆ.ಎಲ್. ರಾಹುಲ್ (KL Rahul) ಬದಲಿಗೆ ಆಡುವ ಹನ್ನೊಂದರ ಬಳಗದಲ್ಲಿ ಶ್ರೇಯಸ್ ಅಯ್ಯರ್ (Shreyas Iyer) ಕಣಕ್ಕಿಳಿಯಲಿದ್ದಾರೆ ಎಂದು ಟೀಂ ಇಂಡಿಯಾ ಹಂಗಾಮಿ ನಾಯಕ ಅಜಿಂಕ್ಯ ರಹಾನೆ ತಿಳಿಸಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡುತ್ತಿರುವ 303ನೇ ಭಾರತೀಯ ಆಟಗಾರ ಎನ್ನುವ ಕೀರ್ತಿಗೆ ಶ್ರೇಯಸ್ ಅಯ್ಯರ್ ಪಾತ್ರರಾಗಲಿದ್ದಾರೆ.

47

ನ್ಯೂಜಿಲೆಂಡ್ ಎದುರಿನ ಮೊದಲ ಟೆಸ್ಟ್ ಪಂದ್ಯದಿಂದ ಹಾಲಿ ನಾಯಕ ವಿರಾಟ್ ಕೊಹ್ಲಿ (Virat Kohli) ವಿಶ್ರಾಂತಿ ಪಡೆದಿರುವುದರಿಂದ ಅಜಿಂಕ್ಯ ರಹಾನೆ ಕಾನ್ಪುರ ಟೆಸ್ಟ್‌ನಲ್ಲಿ ತಂಡವನ್ನು ನಾಯಕನಾಗಿ ಮುನ್ನಡೆಸಲಿದ್ದಾರೆ.

57

ಮೊದಲ ಟೆಸ್ಟ್‌ಗೂ ಮುನ್ನ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ರಹಾನೆ, ರಾಹುಲ್ ಗಾಯದ ಸಮಸ್ಯೆಯಿಂದಾಗಿ ಟೆಸ್ಟ್ ಸರಣಿಯಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ ಸೂರ್ಯಕುಮಾರ್ ಯಾದವ್‌ (Suryakumar Yadav) ತಂಡ ಕೂಡಿಕೊಂಡಿದ್ದಾರೆ. ರಾಹುಲ್ ಬದಲಿಗೆ ಶ್ರೇಯಸ್‌ ಅಯ್ಯರ್ ಟೆಸ್ಟ್‌ ಕ್ರಿಕೆಟ್‌ಗೆ (Test Cricket) ಪಾದಾರ್ಪಣೆ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

67

ರಾಹುಲ್ ಅನುಪಸ್ಥಿತಿ ತಂಡಕ್ಕೆ ದೊಡ್ಡ ಹೊಡೆತ ನೀಡಿದೆ. ಇಂಗ್ಲೆಂಡ್ ಪ್ರವಾಸದಲ್ಲಿ ರಾಹುಲ್ ಉತ್ತಮ ಪ್ರದರ್ಶನ ತೋರಿದ್ದರು. ಸದ್ಯ ರಾಹುಲ್ ಉತ್ತಮ ಫಾರ್ಮ್‌ನಲ್ಲಿದ್ದರು. ಅವರ ಸ್ಥಾನ ತುಂಬಲು ಯುವ ಆಟಗಾರರು ಕಾಯುತ್ತಿದ್ದಾರೆ. ರಾಹುಲ್ ಅನುಪಸ್ಥಿತಿ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ರಹಾನೆ ಹೇಳಿದ್ದಾರೆ.

77

ನಾನು, ನನ್ನ ಫಾರ್ಮ್‌ ಕುರಿತಂತೆ ಹೆಚ್ಚು ಆಲೋಚನೆ ಮಾಡಿಲ್ಲ. ತಂಡಕ್ಕೆ ನಾನು ಯಾವ ರೀತಿ ನೆರವಾಗಬೇಕು ಎನ್ನುವುದಷ್ಟನ್ನೇ ನಾನು ಯೋಚಿಸುತ್ತಿದ್ದೇನೆ. ಯಾವಾಗಲೂ ಶತಕ ಬಾರಿಸಲು ಸಾಧ್ಯವಾಗುವುದಿಲ್ಲ. ಭಾರತ ತಂಡವನ್ನು ಮುನ್ನಡೆಸುತ್ತಿರುವುದಕ್ಕೆ ಹೆಮ್ಮೆ ಎನಿಸುತ್ತಿದೆ. ನನ್ನಿಂದ ತಂಡಕ್ಕೆ ಉತ್ತಮವಾದುದನ್ನು ನೀಡಲು ಪ್ರಯತ್ನಿಸುತ್ತಿರುವುದಾಗಿ ರಹಾನೆ ಹೇಳಿದ್ದಾರೆ

About the Author

CA
Contributor Asianet
ಕ್ರಿಕೆಟ್
ಟೀಮ್ ಇಂಡಿಯಾ
ಟೆಸ್ಟ್ ಕ್ರಿಕೆಟ್
ಶ್ರೇಯಸ್ ಅಯ್ಯರ್
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved