Ind vs SL: ಲಂಕಾ ಎದುರಿನ ಸರಣಿಗೂ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್...!
ಬೆಂಗಳೂರು: ಭಾರತ ಹಾಗೂ ಶ್ರೀಲಂಕಾ (India vs Sri Lanka) ನಡುವಿನ ಮೂರು ಪಂದ್ಯಗಳ ಟಿ20 ಸರಣಿಗೆ ಕ್ಷಣಗಣನೆ ಆರಂಭವಾಗಿದೆ. ಫೆಬ್ರವರಿ 24ರಿಂದ ಆರಂಭವಾಗಲಿರುವ ಲಂಕಾ ಎದುರಿನ ಟಿ20 ಸರಣಿಗೂ ಮುನ್ನ ಟೀಂ ಇಂಡಿಯಾಗೆ (Team India) ಬಿಗ್ ಶಾಕ್ ಎದುರಾಗಿದ್ದು, ಭಾರತ ತಂಡದ ಇಬ್ಬರು ಸ್ಟಾರ್ ಆಟಗಾರರು ಹೊರಬಿದ್ದಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
ಬಿಸಿಸಿಐ ಮಾಹಿತಿಯ ಪ್ರಕಾರ, ದೀಪಕ್ ಚಹರ್ ಬಲ ತೊಡೆಯ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರೆ, ಇನ್ನು ವಿಂಡೀಸ್ ಎದುರಿನ ಮೂರನೇ ಹಾಗೂ ಕೊನೆಯ ಟಿ20 ಪಂದ್ಯದ ವೇಳೆ ಗಾಯಕ್ಕೆ ತುತ್ತಾಗಿರುವ ಸೂರ್ಯಕುಮಾರ್ ಯಾದವ್ ಕೂಡಾ ಗಾಯಕ್ಕೆ ಒಳಗಾಗಿದ್ದಾರೆ. ಈ ಇಬ್ಬರು ಆಟಗಾರರು ಬೆಂಗಳೂರಿನಲ್ಲಿರುವ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಇಬ್ಬರು ಆಟಗಾರರ ಅನುಪಸ್ಥಿತಿ ಟೀಂ ಇಂಡಿಯಾಗೆ ಕೊಂಚ ಹಿನ್ನಡೆಯಾಗುವ ಸಾಧ್ಯತೆಯಿದೆ. 2022ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಮಾರ್ಚ್ 27ರಿಂದ ಆರಂಭವಾಗುವ ಸಾಧ್ಯತೆಯಿದ್ದು, ಈ ವೇಳೆಗಾಗಲೇ ಸಂಪೂರ್ಣ ಫಿಟ್ ಆಗುವ ಸಾಧ್ಯತೆಯಿದೆ.
ದೀಪಕ್ ಚಹರ್ ಅವರನ್ನು ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು 14 ಕೋಟಿ ರುಪಾಯಿ ನೀಡಿ ತನ್ನ ತೆಕ್ಕೆಗೆ ಸೆಳೆದುಕೊಂಡಿತ್ತು. ಇನ್ನು 5 ಬಾರಿಯ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು 8 ಕೋಟಿ ರುಪಾಯಿ ನೀಡಿ ಹರಾಜಿಗೂ ಮುನ್ನವೇ ರೀಟೈನ್ ಮಾಡಿಕೊಂಡಿತ್ತು.
ತುಂಬಾ ಕುತೂಹಲಕಾರಿ ಅಂಶವೆಂದರೆ, ಇದುವರೆಗೂ ಬಿಸಿಸಿಐ, ದೀಪಕ್ ಚಹರ್ ಹಾಗೂ ಸೂರ್ಯಕುಮಾರ್ ಯಾದವ್ ಅವರಿಗೆ ಬದಲಿ ಆಟಗಾರರನ್ನು ಹೆಸರಿಸಿಲ್ಲ. ಈಗಾಗಲೇ ಲಂಕಾ ಎದುರಿನ ಸರಣಿಗೆ 16 ಆಟಗಾರನ್ನೊಳಗೊಂಡ ತಂಡವನ್ನು ಪ್ರಕಟಿಸಲಾಗಿದೆ. ಈ ಇಬ್ಬರು ಆಟಗಾರರು ಲಂಕಾ ಎದುರಿನ ಸೀಮಿತ ಓವರ್‌ಗಳ ಸರಣಿಯಲ್ಲಿ ಸ್ಥಾನ ಪಡೆದಿದ್ದರು.
ಲಂಕಾ ಎದುರಿನ ಟಿ20 ಸರಣಿಗೆ ಭಾರತ ತಂಡ ಹೀಗಿದೆ ನೋಡಿ:
ರೋಹಿತ್ ಶರ್ಮಾ(ನಾಯಕ), ಋತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ಇಶಾನ್ ಕಿಶನ್(ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ರವೀಂದ್ರ ಜಡೇಜಾ, ಯುಜುವೇಂದ್ರ ಚಹಲ್, ರವಿ ಬಿಷ್ಣೋಯ್, ಕುಲ್ದೀವ್ ಯಾದವ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಜಸ್‌ಪ್ರೀತ್ ಬುಮ್ರಾ(ಉಪನಾಯಕ), ಆವೇಶ್ ಖಾನ್.