Ind vs WI: ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದಲ್ಲಿ ಒಂದು ಮಹತ್ವದ ಬದಲಾವಣೆ..?
ಬೆಂಗಳೂರು: ಭಾರತ ಹಾಗೂ ವೆಸ್ಟ್ ಇಂಡೀಸ್ (India vs West Indies) ತಂಡಗಳ ನಡುವಿನ ಎರಡನೇ ಏಕದಿನ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸರಣಿ ಗೆಲುವಿನತ್ತ ಚಿತ್ತ ನೆಟ್ಟಿದೆ. ಈಗಾಗಲೇ ಮೊದಲ ಪಂದ್ಯ ಗೆದ್ದು ಆತ್ಮವಿಶ್ವಾಸದಿಂದ ಬೀಗುತ್ತಿರುವ ಟೀಂ ಇಂಡಿಯಾ(Team India), ಎರಡನೇ ಪಂದ್ಯದಲ್ಲಿ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

1. ರೋಹಿತ್ ಶರ್ಮಾ: ಮೊದಲ ಏಕದಿನ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಸಿಡಿಸುವ ಮೂಲಕ ಮಿಂಚಿದ್ದ ರೋಹಿತ್ ಶರ್ಮಾ, ಸೀಮಿತ ಓವರ್‌ಗಳ ತಂಡದ ಪೂರ್ಣ ಪ್ರಮಾಣದ ನಾಯಕರಾದ ಬಳಿಕ ಮೊದಲ ಏಕದಿನ ಸರಣಿ ಗೆಲ್ಲಲು ಎದುರು ನೋಡುತ್ತಿದ್ದಾರೆ.
2. ಇಶಾನ್ ಕಿಶನ್: ಸ್ಪೋಟಕ ಎಡಗೈ ಬ್ಯಾಟರ್ ಇಶಾನ್ ಕಿಶಾನ್ ಮತ್ತೊಮ್ಮೆ ಆರಂಭಿಕ ಆಟಗಾರನಾಗಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚು. ಮೊದಲ ಪಂದ್ಯದಲ್ಲಿ ಕಿಶನ್ 28 ರನ್ ಬಾರಿಸಿದ್ದರು.
3. ವಿರಾಟ್ ಕೊಹ್ಲಿ: ಮಾಜಿ ನಾಯಕ ವಿರಾಟ್ ಕೊಹ್ಲಿ ಮೊದಲ ಪಂದ್ಯದಲ್ಲಿ ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿದ್ದರು. ಇಂದಿನ ಪಂದ್ಯದಲ್ಲಾದರೂ ಕಿಂಗ್ ಕೊಹ್ಲಿ ಮೂರಂಕಿ ಮೊತ್ತ ದಾಖಲಿಸುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ.
4. ಕೆ.ಎಲ್. ರಾಹುಲ್: ವೈಯುಕ್ತಿಕ ಕಾರಣದಿಂದಾಗಿ ಮೊದಲ ಪಂದ್ಯದಿಂದ ಹೊರಗುಳಿದಿದ್ದ ರಾಹುಲ್, ಇದೀಗ ಎರಡನೇ ಪಂದ್ಯದಲ್ಲಿ ತಂಡ ಕೂಡಿಕೊಳ್ಳಲಿದ್ದಾರೆ. ಹೀಗಾಗಿ ದೀಪಕ್ ಹೂಡಾ ಬೆಂಚ್ ಕಾಯಿಸಬೇಕಾಗಬಹುದು
5. ಸೂರ್ಯಕುಮಾರ್ ಯಾದವ್: ಟೀಂ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟರ್ ಸೂರ್ಯಕುಮಾರ್ ಯಾದವ್, ಮೊದಲ ಪಂದ್ಯದಲ್ಲಿ ಜವಾಬ್ದಾರಿಯುತ ಬ್ಯಾಟ್ ಬೀಸಿದ್ದರು. ಸೂರ್ಯ ಅಜೇಯ 34 ರನ್ ಬಾರಿಸಿದ್ದರು.
6. ರಿಷಭ್ ಪಂತ್: ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್, ಕಳೆದ ಪಂದ್ಯದಲ್ಲಿ ರನೌಟ್ ಆಗುವ ಮೂಲಕ ನಿರಾಸೆ ಅನುಭವಿಸಿದ್ದರು. ಮಧ್ಯಮ ಕ್ರಮಾಂಕದಲ್ಲಿ ಪಂತ್ ಅಬ್ಬರಿಸಿದರೇ ಟೀಂ ಇಂಡಿಯಾ ಬೃಹತ್ ಮೊತ್ತ ಕಲೆಹಾಕಬಹುದು.
7. ಶಾರ್ದೂಲ್ ಠಾಕೂರ್: ವೇಗಿ ಶಾರ್ದೂಲ್ ಠಾಕೂರ್ ಕಳೆದ ಪಂದ್ಯದಲ್ಲಿ ಹೆಚ್ಚಿನ ಕಮಾಲ್ ಮಾಡಲು ಸಾಧ್ಯವಾಗಿರಲಿಲ್ಲ. ಇದೀಗ ಎರಡನೇ ಪಂದ್ಯದಲ್ಲಿ ಮಿಂಚಲು ಠಾಕೂರ್ ಎದುರು ನೋಡುತ್ತಿದ್ದಾರೆ.
(photo source- Instagram)
8. ವಾಷಿಂಗ್ಟನ್ ಸುಂದರ್: ತಮಿಳುನಾಡು ಮೂಲದ ಆಫ್ ಸ್ಪಿನ್ನರ್ ವಾಷಿಂಗ್ಟನ್ ಸುಂದರ್ ಕಳೆದ ಪಂದ್ಯದಲ್ಲಿ ಪ್ರಮುಖ ಮೂರು ವಿಕೆಟ್ ಕಬಳಿಸಿ ಮಿಂಚಿದ್ದರು. ಇದೀಗ ಮತ್ತದೇ ಪ್ರದರ್ಶನ ತೋರಲು ಎದುರು ನೋಡುತ್ತಿದ್ದಾರೆ.
Yuzvendra Chahal
9. ಯುಜುವೇಂದ್ರ ಚಹಲ್: ಅನುಭವಿ ಲೆಗ್ ಸ್ಪಿನ್ನರ್ ಯುಜುವೇಂದ್ರ ಚಹಲ್, ಮೊದಲ ಏಕದಿನ ಪಂದ್ಯದಲ್ಲಿ 4 ವಿಕೆಟ್ ಕಬಳಿಸುವ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. ಅದೇ ಫಾರ್ಮ್ ಮುಂದುವರೆಸಿಕೊಂಡು ಹೋಗಲು ಎದುರು ನೋಡುತ್ತಿದ್ದಾರೆ.
Prasidh Krishna
10. ಪ್ರಸಿದ್ದ್ ಕೃಷ್ಣ: ಕರ್ನಾಟಕ ಮೂಲದ ನೀಳಕಾಯದ ವೇಗಿ ಪ್ರಸಿದ್ಧ್ ಕೃಷ್ಣ ಮೊದಲ ಪಂದ್ಯದಲ್ಲಿ 2 ವಿಕೆಟ್ ಕಬಳಿಸಿ ಮಿಂಚಿದ್ದರು. ಪ್ರಸಿದ್ಧ್ ಅವರಿಂದ ಮತ್ತೊಮ್ಮೆ ತಂಡ ಶಿಸ್ತುಬದ್ದ ಬೌಲಿಂಗ್ ನಿರೀಕ್ಷೆ ಮಾಡುತ್ತಿದೆ.
11. ಮೊಹಮ್ಮದ್ ಸಿರಾಜ್: ವೇಗಿ ಸಿರಾಜ್ ಕೂಡಾ ಮೊದಲ ಪಂದ್ಯದಲ್ಲಿ ಪರಿಣಾಮಕಾರಿ ಬೌಲಿಂಗ್ ನಡೆಸುವಲ್ಲಿ ಯಶಸ್ವಿಯಾಗಿದ್ದಾರೆ. ಆರಂಭದಲ್ಲೇ ತಂಡಕ್ಕೆ ವಿಕೆಟ್ ಕಬಳಿಸುವ ಕ್ಷಮತೆ ಹೊಂದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.