Ind vs WI: ಕೆ ಎಲ್ ರಾಹುಲ್ ಔಟ್, ಟೀಂ ಇಂಡಿಯಾಗೆ ಬಲಿಷ್ಠ ಆಟಗಾರ ಸೇರ್ಪಡೆ..!
ತರೌಬ: ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಕ್ಲೀನ್‌ಸ್ವೀಪ್ ಮಾಡಿ ಬೀಗುತ್ತಿರುವ ಟೀಂ ಇಂಡಿಯಾ, ಇದೀಗ ಟಿ20 ಸವಾಲನ್ನು ಸ್ವೀಕರಿಸಲು ಸಜ್ಜಾಗಿದೆ. ಜುಲೈ 29ರಿಂದ ಆಗಸ್ಟ್ 07ರವರೆಗೆ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವೆ 5 ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ. ಈ ಸರಣಿಗೂ ಮುನ್ನ ಕೆ ಎಲ್ ರಾಹುಲ್ ಭಾರತ ತಂಡದಿಂದ ಹೊರಬಿದ್ದಿರುವುದರಿಂದ ಹೊಸ ಆಟಗಾರ ಟೀಂ ಇಂಡಿಯಾ ಕೂಡಿಕೊಂಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ವೆಸ್ಟ್ ಇಂಡೀಸ್ ಎದುರಿನ 5 ಪಂದ್ಯಗಳ ಟಿ20 ಸರಣಿಗೂ ಮುನ್ನ ಕೆ ಎಲ್ ರಾಹುಲ್ ಸಂಪೂರ್ಣ ಫಿಟ್ನೆಸ್ ಸಾಬೀತು ಪಡಿಸದ ಹಿನ್ನೆಲೆಯಲ್ಲಿ ಕನ್ನಡದ ತಾರಾ ಆಟಗಾರರ ವಿಂಡೀಸ್ ಎದುರಿನ ಸರಣಿಯಿಂದ ಹೊರಬಿದ್ದಿದ್ದರು. ಇದೀಗ ಮೊದಲ ಟಿ20 ಪಂದ್ಯ ಆರಂಭಕ್ಕೂ ಮುನ್ನ ರಾಹುಲ್ ಬದಲಿಗೆ ಹೊಸ ಆಟಗಾರನನ್ನು ಬಿಸಿಸಿಐ ಹೆಸರಿಸಿದೆ.
Sanju Samson
ಹೌದು, ವೆಸ್ಟ್ ಇಂಡೀಸ್ ಎದುರಿನ ಏಕದಿನ ಸರಣಿಯಲ್ಲಿ ಮಿಂಚಿನ ಪ್ರದರ್ಶನ ತೋರಿದ್ದ ಸಂಜು ಸ್ಯಾಮ್ಸನ್‌ಗೆ ಅದೃಷ್ಟ ಖುಲಾಯಿಸಿದ್ದು, ಇದೀಗ ಟಿ20 ಸರಣಿಗೆ ಟೀಂ ಇಂಡಿಯಾದೊಳಗೆ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕೆ ಎಲ್ ರಾಹುಲ್ ಅವರ ಬದಲಿಗೆ ಸಂಜು ಸ್ಯಾಮ್ಸನ್‌ಗೆ ಅವಕಾಶ ಕಲ್ಪಿಸಲಾಗಿದೆ.
sanju jassie gift
ಕೇರಳ ಮೂಲದ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಅವರನ್ನು ಮೊದಲು ವಿಂಡೀಸ್ ಎದುರಿನ ಏಕದಿನ ಸರಣಿಗೆ ಆಯ್ಕೆ ಮಾಡಲಾಗಿತ್ತು. ಆದರೆ ಟಿ20 ಸರಣಿಯಿಂದ ಕೈಬಿಡಲಾಗಿತ್ತು. ಆದರೆ ಇದೀಗ ಸಂಜುಗೆ ಟಿ20 ಸರಣಿಗೆ ಆಯ್ಕೆ ಮಾಡಲಾಯಿತು.
ತೊಡೆ ಸಂದಿನ ಗಾಯಕ್ಕೆ ಒಳಗಾಗಿ ಜರ್ಮನಿಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಿಕೊಂಡು ವಾಪಾಸ್ಸಾಗಿದ್ದ ಕೆ ಎಲ್ ರಾಹುಲ್, ವೆಸ್ಟ್ ಇಂಡೀಸ್ ಎದುರಿನ ಟಿ20 ಸರಣಿಗೆ ತಂಡ ಕೂಡಿಕೊಳ್ಳುವ ವಿಶ್ವಾಸದಲ್ಲಿದ್ದರು. ಆದರೆ ವಿಂಡೀಸ್ ಎದುರಿನ ಸರಣಿಗೂ ಮುನ್ನ ಮತ್ತೆ ಕೋವಿಡ್‌ಗೆ ತುತ್ತಾಗಿದ್ದರಿಂದ ಹೆಚ್ಚಿನ ವಿಶ್ರಾಂತಿಯ ಉದ್ದೇಶದಿಂದ ವಿಂಡೀಸ್ ಎದುರಿನ ಟಿ20 ಸರಣಿಯಿಂದ ಹೊರಬಿದ್ದಿದ್ದಾರೆ.
ಇನ್ನು ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದಲ್ಲಿ ಸ್ಥಾನ ಪಡೆಯಲು ಸಂಜು ಸ್ಯಾಮ್ಸನ್‌ಗೆ ಮತ್ತೊಂದು ಅವಕಾಶ ಸಿಕ್ಕಿದ್ದು, ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದು ಅಬ್ಬರಿಸಲು ಸಂಜು ಎದುರು ನೋಡುತ್ತಿದ್ದಾರೆ.
ವಿಶ್ವಕಪ್‌ಗೆ ಸಿದ್ಧತೆ ನಡೆಸಲು ಭಾರತಕ್ಕೆ 16 ಪಂದ್ಯಗಳು (ವಿಂಡೀಸ್ ವಿರುದ್ಧ 5, ಏಷ್ಯಾಕಪ್‌ನಲ್ಲಿ 5-ಫೈನಲ್ ಪ್ರವೇಶಿಸಿದರೆ, ಆಸ್ಪ್ರೇಲಿಯಾ ವಿರುದ್ಧ 3, ದಕ್ಷಿಣ ಆಫ್ರಿಕಾ ವಿರುದ್ಧ 3) ಸಿಗಲಿವೆ. ಹೀಗಾಗಿ ಪ್ರತಿ ಪಂದ್ಯದಲ್ಲೂ ತನ್ನ ನ್ಯೂನ್ಯತೆಗಳನ್ನು ಸರಿಪಡಿಸಿಕೊಂಡು ಬಲಿಷ್ಠ ತಂಡ ಕಟ್ಟುವತ್ತ ಟೀಂ ಇಂಡಿಯಾ ಚಿತ್ತ ನೆಟ್ಟಿದೆ.