- Home
- Sports
- Cricket
- ಗೌತಮ್ ಗಂಭೀರ್ ಯುಗಾಂತ್ಯಕ್ಕೆ ವೇದಿಕೆ ಸಜ್ಜು? ಹಂಗಾಮಿ ಕೋಚ್ ವಿವಿಎಸ್ ಲಕ್ಷ್ಮಣ್ ಕೊಂಡಾಡಿದ ಕ್ಯಾಪ್ಟನ್ ಶ್ರೇಯಸ್ ಅಯ್ಯರ್
ಗೌತಮ್ ಗಂಭೀರ್ ಯುಗಾಂತ್ಯಕ್ಕೆ ವೇದಿಕೆ ಸಜ್ಜು? ಹಂಗಾಮಿ ಕೋಚ್ ವಿವಿಎಸ್ ಲಕ್ಷ್ಮಣ್ ಕೊಂಡಾಡಿದ ಕ್ಯಾಪ್ಟನ್ ಶ್ರೇಯಸ್ ಅಯ್ಯರ್
ಹರಾರೆ: ಜಿಂಬಾಬ್ವೆ ಎದುರಿನ ಮೂರು ಪಂದ್ಯಗಳ ಟಿ20 ಸರಣಿ ಕ್ಲೀನ್ ಸ್ವೀಪ್ ಮಾಡಿದ ಬೆನ್ನಲ್ಲೇ ಹಂಗಾಮಿ ಕೋಚ್ ಲಕ್ಷ್ಮಣ್‌ಗೆ ಧನ್ಯವಾದ ಹೇಳುವ ಮೂಲಕ ಟೀಂ ಇಂಡಿಯಾ ಟಿ20 ತಂಡದ ನಾಯಕ ಶ್ರೇಯಸ್ ಅಯ್ಯರ್, ಹೆಡ್ ಕೋಚ್ ಗೌತಮ್ ಗಂಭೀರ್‌ಗೆ ಟಾಂಗ್ ಕೊಟ್ರಾ? ಇಲ್ಲಿದೆ ಅಪ್‌ಡೇಟ್ಸ್

ಜಿಂಬಾಬ್ವೆ ಎದುರು ಟಿ20 ಸರಣಿ ಕ್ಲೀನ್‌ಸ್ವೀಪ್ ಮಾಡಿದ ಟೀಂ ಇಂಡಿಯಾ
ಗೌತಮ್ ಗಂಭೀರ್ ಮಾರ್ಗದರ್ಶನದಲ್ಲಿ ಹಾಲಿ ಚಾಂಪಿಯನ್ ಟೀಂ ಇಂಡಿಯಾ, ಕ್ರಿಕೆಟ್ ಶಿಶು ಐರ್ಲೆಂಡ್ ಮತ್ತು ಇಂಗ್ಲೆಂಡ್ ಎದುರು ಟಿ20 ಸರಣಿಯಲ್ಲಿ ವೈಟ್‌ವಾಷ್ ಮುಖಭಂಗ ಅನುಭವಿಸಿತ್ತು. ಇದೀಗ ಶ್ರೇಯಸ್ ಅಯ್ಯರ್ ನೇತೃತ್ವದ ಭಾರತ ತಂಡವು ವಿವಿಎಸ್ ಲಕ್ಷ್ಮಣ್ ಮಾರ್ಗದರ್ಶನದಲ್ಲಿ ಜಿಂಬಾಬ್ವೆ ಎದುರು ಮೂರು ಪಂದ್ಯಗಳ ಟಿ20 ಸರಣಿಯನ್ನು ಕ್ಲೀನ್‌ಸ್ವೀಪ್ ಮಾಡುವ ಮೂಲಕ ಗೆಲುವಿನ ಹಳಿಗೆ ಮರಳುವಲ್ಲಿ ಯಶಸ್ವಿಯಾಗಿದೆ.
ನಮ್ಮಲ್ಲಿ ಸ್ಪೂರ್ತಿ ತುಂಬಿದ್ದಕ್ಕೆ ಧನ್ಯವಾದ
ಜಿಂಬಾಬ್ವೆ ವಿರುದ್ಧ ಮೂರು 3 ಪಂದ್ಯಗಳ ಟಿ20 ಸರಣಿ ಕ್ಲೀನ್‌ಸ್ವಿಪ್ ಬೆನ್ನಲ್ಲೇ ಟೀಂ ಇಂಡಿಯಾದ ಟಿ20 ನಾಯಕ ಶ್ರೇಯಸ್ ಅಯ್ಯರ್ ಅವರು ಹಂಗಾಮಿ ಕೋಚ್ ವಿವಿಎಸ್ ಲಕ್ಷ್ಮಣ್ ಅವರಿಗೆ ‘ನಮ್ಮಲ್ಲಿ ಸ್ಫೂರ್ತಿ ತುಂಬಿದ್ದಕ್ಕೆ ಧನ್ಯವಾದಗಳು’ ಎಂದಿದ್ದಾರೆ. ಈ ಮೂಲಕ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರಿಗೆ ಟಾಂಗ್ ಕೊಟ್ಟರೇ ಎಂಬ ಚರ್ಚೆ ಶುರುವಾಗಿದೆ.
VVS ಲಕ್ಷ್ಮಣ್‌ಗೆ ಶ್ರೇಯಸ್ ಅಯ್ಯರ್ ಧನ್ಯವಾದ
ಬಿಸಿಸಿಐ ಬಿಡುಗಡೆ ಮಾಡಿರುವ ಡ್ರೆಸ್ಸಿಂಗ್ ರೂಂ ವಿಡಿಯೋದಲ್ಲಿ ಲಕ್ಷ್ಮಣ್ ಬಗ್ಗೆ ಮಾತನಾಡಿರುವ ಶ್ರೇಯಸ್, ‘ನಾವು ಕೈಬಿಟ್ಟ ಕ್ಯಾಚ್‌ಗಳನ್ನು ಹೊರತುಪಡಿಸಿ ಸರಣಿಯುದ್ದಕ್ಕೂ ದೋಷ ರಹಿತವಾಗಿ ಆಡಿದ್ದೇವೆ. ಸಹಾಯಕ ಸಿಬ್ಬಂದಿ ಸೇರಿದಂತೆ ತಂಡದ ಪ್ರತಿಯೊಬ್ಬರ ಅದ್ಭುತ ಪ್ರಯತ್ನ ಇದಾಗಿತ್ತು. ನಮ್ಮನ್ನು ಪ್ರೇರೇಪಿಸಿದ್ದಕ್ಕಾಗಿ, ಸ್ಫೂತಿ ನೀಡಿದ್ದಕ್ಕಾಗಿ ವಿವಿಎಸ್ ಸರ್‌ಗೆ ಧನ್ಯವಾದಗಳು’ ಎಂದಿದ್ದಾರೆ.
ತಾರಾ ಆಟಗಾರರ ಅನುಪಸ್ಥಿತಿಯಲ್ಲಿ ಟಿ20 ಸರಣಿ ಗೆದ್ದ ಭಾರತ
ಭಾರತ ತಂಡವು ಜಿಂಬಾಬ್ವೆ ಪ್ರವಾಸದಲ್ಲಿ ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಅರ್ಶದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ ಹಾಗೂ ಅರ್ಶದೀಪ್ ಸಿಂಗ್ ಅವರಂತಹ ಸ್ಟಾರ್ ಆಟಗಾರರ ಅನುಪಸ್ಥಿತಿಯಲ್ಲೂ ಲಕ್ಷ್ಮಣ್ ಮಾರ್ಗದರ್ಶದಲ್ಲಿ ಅದ್ಬುತ ಪ್ರದರ್ಶನ ತೋರುವ ಮೂಲಕ ಟಿ20 ಸರಣಿ ಜಯಿಸುವಲ್ಲಿ ಯಶಸ್ವಿಯಾಗಿದೆ.
ಗಂಭೀರ್-ಅಯ್ಯರ್ ಸಂಬಂಧ ಅಷ್ಟಕ್ಕಷ್ಟೇ?
ಈಗಾಗಲೇ ಟೀಂ ಇಂಡಿಯಾ ಹೆಡ್ ಕೋಚ್ ಗೌತಮ್ ಗಂಭೀರ್ ಹಾಗೂ ಭಾರತ ಟಿ20 ತಂಡದ ನಾಯಕ ಶ್ರೇಯಸ್ ಅಯ್ಯರ್ ನಡುವಿನ ಸಂಬಂಧ ಅಷ್ಟೊಂದು ಚೆನ್ನಾಗಿಲ್ಲ ಎನ್ನುವಂತಹ ಮಾತುಗಳು ಕೇಳಿ ಬರುತ್ತಿವೆ. ಇದರ ನಡುವೆ ಶ್ರೇಯಸ್ ಅಯ್ಯರ್ ಅವರು ಆಡಿರುವ ಮಾತುಗಳು ಚರ್ಚೆಗೆ ಗ್ರಾಸವಾಗಿದೆ.
ಲಕ್ಷ್ಮಣ್ ಹೆಡ್ ಕೋಚ್ ಆಗಲು ಆಗ್ರಹ
ಲಕ್ಷ್ಮಣ್ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ನ ಮುಖ್ಯಸ್ಥರಾಗಿದ್ದು, ಭಾರತದ ಕೆಲ ಸರಣಿಗಳಿಗೆ ಹಂಗಾಮಿ ಕೋಚ್ ಆಗಿ ಕಾರ್ಯನಿರ್ವಹಿಸುತ್ತಾರೆ. ಇನ್ನು ಮುಂಬರುವ ದಿನಗಳಲ್ಲೂ ವಿವಿಎಸ್ ಲಕ್ಷ್ಮಣ್ ಅವರೇ ಟೀಂ ಇಂಡಿಯಾ ಹೆಡ್‌ಕೋಚ್ ಆಗಲಿ ಎನ್ನುವಂತಹ ಆಗ್ರಹ ಸೋಷಿಯಲ್ ಮೀಡಿಯಾದಲ್ಲಿ ಜೋರಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

