Rohit-Kohli ಕ್ರಿಕೆಟ್ ಭವಿಷ್ಯದ ಬಗ್ಗೆ ಅಚ್ಚರಿಯ ಹೇಳಿಕೆ ಕೊಟ್ಟ ಟೀಂ ಇಂಡಿಯಾ ಬ್ಯಾಟಿಂಗ್ ಕೋಚ್!
ರಾಂಚಿ: ಟೀಂ ಇಂಡಿಯಾ ಮಾಜಿ ನಾಯಕರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ 2027ರ ಏಕದಿನ ವಿಶ್ವಕಪ್ ಆಡ್ತಾರಾ ಎನ್ನುವ ಪ್ರಶ್ನೆ ಜೋರಾಗಿರುವ ಬೆನ್ನಲ್ಲೇ ಭಾರತದ ಬ್ಯಾಟಿಂಗ್ ಕೋಚ್ ಸಿತಾಂಶು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಏನದು ನೋಡೋಣ ಬನ್ನಿ.

ರೋಹಿತ್-ಕೊಹ್ಲಿ ಭವಿಷ್ಯದ ಬಗ್ಗೆ ಬ್ಯಾಟಿಂಗ್ ಕೋಚ್ ಮಾತು.
ಟೀಂ ಇಂಡಿಯಾ ಏಕದಿನ ತಂಡದಲ್ಲಿ ಕ್ರಿಕೆಟ್ ದಿಗ್ಗಜರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಸ್ಥಾನದ ಬಗ್ಗೆ ಪದೇ ಪದೇ ಚರ್ಚೆಗಳಾಗುತ್ತಿರುವ ಬಗ್ಗೆ ತಂಡದ ಬ್ಯಾಟಿಂಗ್ ಕೋಚ್ ಸಿತಾಂಶು ಪ್ರತಿಕ್ರಿಯಿಸಿದ್ದು, ಇಬ್ಬರ ಸ್ಥಾನದ ಬಗ್ಗೆ ಏಕೆ ಚರ್ಚೆ ಆಗುತ್ತಿದೆ ಅರ್ಥವಾಗುತ್ತಿಲ್ಲ ಎಂದಿದ್ದಾರೆ.
2027ರ ವಿಶ್ವಕಪ್‌ನಲ್ಲಿ ಇವರಿಬ್ಬರ ಆಯ್ಕೆ ಬಗ್ಗೆ ಈಗಲೇ ಏನೂ ಹೇಳಲು ಸಾಧ್ಯವಿಲ್ಲ!
ಅಲ್ಲದೆ, 2027ರ ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಆಯ್ಕೆ ಬಗ್ಗೆ ಈಗಲೇ ಹೇಳಲು ಸಾಧ್ಯವಿಲ್ಲ’ ಎಂದು ತಿಳಿಸಿದ್ದಾರೆ. ಇದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ
ಅವರ ಫಾರ್ಮ್ & ಫಿಟ್ನೆಸ್ ಉತ್ತಮವಾಗಿದೆ
‘ಇಬ್ಬರೂ ಚೆನ್ನಾಗಿ ಆಡುತ್ತಿದ್ದಾರೆ. ಹಾಗಾಗಿ ನಾವು ಅವರ ಭವಿಷ್ಯದ ಬಗ್ಗೆ ಏಕೆ ಚರ್ಚಿಸಬೇಕು? ಅವರ ಫಿಟ್ನೆಸ್, ಪ್ರದರ್ಶನ ಉತ್ತಮವಾಗಿದೆ.
ಅವರ ಫಾರ್ಮ್ ಇರುವವರೆಗೂ ಈ ಬಗ್ಗೆ ಮಾತಾಡುವುದರಲ್ಲಿ ಅರ್ಥವಿಲ್ಲ
ಅವರು ಇದೇ ರೀತಿ ಆಟ ಮುಂದುವರಿಸುವ ತನಕ ಬೇರೆ ಯಾವುದರ ಬಗ್ಗೆಯೂ ಮಾತನಾಡುವುದರಲ್ಲಿ ಅರ್ಥವಿಲ್ಲ.
ಈಗಲೇ 2027ರ ವಿಶ್ವಕಪ್ ಬಗ್ಗೆ ಯೋಚನೆಯಿಲ್ಲ
ತಂಡದ ಆಟಗಾರರಾಗಲಿ, ಆಡಳಿತ ಮಂಡಳಿಯವರಾಗಲಿ 2027ರ ವಿಶ್ವಕಪ್ ಬಗ್ಗೆ ಯೋಚಿಸುತ್ತಿಲ್ಲ. ರೋ-ಕೋ ಅದ್ಭುತ ಪ್ರದರ್ಶನ ನೀಡಿ ತಂಡಕ್ಕೆ ಕೊಡುಗೆ ನೀಡುತ್ತಿದ್ದಾರೆ. ಈ ಬಗ್ಗೆ ಚರ್ಚೆ ನಡೆಯಬಾರದು’ ಎಂದಿದ್ದಾರೆ.
2027ರ ವಿಶ್ವಕಪ್ ಮೇಲೆ ಕಣ್ಣಿಟ್ಟಿರುವ ವಿರಾಟ್-ರೋಹಿತ್ಭಾರತ
ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ 2027ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಮೇಲೆ ಕಣ್ಣಿಟ್ಟಿದ್ದಾರೆ. ಹೀಗಿರುವಾಗಲೇ ಟೀಂ ಇಂಡಿಯಾ ಬ್ಯಾಟಿಂಗ್ ಕೋಚ್ ಅವರ ಈ ಹೇಳಿಕೆ ಸಾಕಷ್ಟು ಮಹತ್ವ ಪಡೆದುಕೊಂಡಿದೆ.
ಹರಿಣಗಳ ಎದುರು ಮಿಂಚಿದ್ದ ರೋ-ಕೋ ಜೋಡಿ
ದಕ್ಷಿಣ ಆಫ್ರಿಕಾ ಎದುರಿನ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆಕರ್ಷಕ 135 ರನ್ ಸಿಡಿಸಿದರೆ, ರೋಹಿತ್ ಶರ್ಮಾ 57 ರನ್‌ಗಳನ್ನು ಬಾರಿಸಿ ತಂಡಕ್ಕೆ ಆಸರೆಯಾಗಿದ್ದರು. ಮೊದಲ ಏಕದಿನ ಪಂದ್ಯ ಗೆಲ್ಲುವಲ್ಲಿ ಈ ಇಬ್ಬರ ಇನ್ನಿಂಗ್ಸ್ ಪ್ರಮುಖ ಎನಿಸಿಕೊಂಡಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

