- Home
- Sports
- Cricket
- ಐರ್ಲೆಂಡ್ ಎದುರಿನ ಸೋಲಿನ ಬೆನ್ನಲ್ಲೇ ಎರಡನೇ ಮ್ಯಾಚ್‌ಗೆ 3 ಬದಲಾವಣೆ ಫಿಕ್ಸ್..! ವೈಭವ್ ಸೂರ್ಯವಂಶಿಗೆ ಸಿಗುತ್ತಾ ಚಾನ್ಸ್?
ಐರ್ಲೆಂಡ್ ಎದುರಿನ ಸೋಲಿನ ಬೆನ್ನಲ್ಲೇ ಎರಡನೇ ಮ್ಯಾಚ್‌ಗೆ 3 ಬದಲಾವಣೆ ಫಿಕ್ಸ್..! ವೈಭವ್ ಸೂರ್ಯವಂಶಿಗೆ ಸಿಗುತ್ತಾ ಚಾನ್ಸ್?
ಬೆಂಗಳೂರು: ಶ್ರೇಯಸ್ ಅಯ್ಯರ್ ನೇತೃತ್ವದಲ್ಲಿ ಟೀಂ ಇಂಡಿಯಾ ಆಡಿದ ಮೊದಲ ಪಂದ್ಯದಲ್ಲಿಯೇ ಐರ್ಲೆಂಡ್ ಎದುರು ಆಘಾತಕಾರಿ ಸೋಲು ಅನುಭವಿಸಿದೆ. ಹೀಗಾಗಿ ಎರಡನೇ ಪಂದ್ಯದಲ್ಲಿ ಭಾರತ 3 ಬದಲಾವಣೆಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.

ಐರ್ಲೆಂಡ್ ಎದುರು ಮೊದಲ ಪಂದ್ಯ ಸೋತ ಭಾರತ
ಬೆಲ್‌ಫಾಸ್ಟ್‌ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಭಾರತ ಎದುರು ಐರ್ಲೆಂಡ್ ತಂಡವು 34 ರನ್‌ಗಳ ರೋಚಕ ಜಯ ಸಾಧಿಸಿದೆ. ಇದರೊಂದಿಗೆ ಐರ್ಲೆಂಡ್ ತಂಡವು ಎರಡು ಪಂದ್ಯಗಳ ಟಿ20 ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಇದಷ್ಟೇ ಅಲ್ಲದೇ ಇದೇ ಮೊದಲ ಬಾರಿಗೆ ಐರ್ಲೆಂಡ್ ತಂಡವು ಭಾರತ ಎದುರು ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಇದೀಗ ಸರಣಿ ಸಮಬಲ ಸಾಧಿಸಲು ಭಾರತ ಹೋರಾಡಬೇಕಿದೆ.
ಭಾರತ ತಂಡದಲ್ಲಿ ಮೂರು ಬದಲಾವಣೆ?
ಈ ಹೀನಾಯ ಸೋಲಿನ ಬೆನ್ನಲ್ಲೇ ಭಾರತ ತಂಡವು ಇದೀಗ ಎರಡನೇ ಪಂದ್ಯದಲ್ಲಿ ಮೂರು ಪ್ರಮುಖ ಬದಲಾವಣೆಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ. ಯಾಕೆಂದರೆ ಕೊನೆಯ ಟಿ20 ಪಂದ್ಯವನ್ನೂ ಭಾರತ ಸೋತರೇ ಟಿ20 ಸರಣಿ ಸೋಲಿನ ಮುಖಭಂಗ ಅನುಭವಿಸಬೇಕಾಗುತ್ತದೆ. ಹೀಗಾಗಿ ಜೂನ್ 28ರಂದು ನಡೆಯಲಿರುವ ಎರಡನೇ ಪಂದ್ಯದಲ್ಲಿ ಭಾರತ ಯಾವ ಮೂರು ಬದಲಾವಣೆ ಮಾಡಲಿದೆ ಎನ್ನುವುದನ್ನು ನೋಡೋಣ ಬನ್ನಿ.
ವೈಭವ್ ಸೂರ್ಯವಂಶಿಗೆ ಸಿಗಲಿದೆ ಚಾನ್ಸ್:
15 ವರ್ಷದ ವೈಭವ್ ಸೂರ್ಯವಂಶಿ, ಮೊದಲ ಟಿ20 ಪಂದ್ಯದಲ್ಲೇ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಲು ತುದಿಗಾಲಿನಲ್ಲಿ ನಿಂತಿದ್ದರು. ಆದರೆ ಟೀಮ್ ಮ್ಯಾನೇಜ್‌ಮೆಂಟ್ ಅಭಿಷೇಕ್ ಶರ್ಮಾ ಜತೆ ಸಂಜು ಸ್ಯಾಮ್ಸನ್ ಅವರನ್ನು ಆರಂಭಿಕನಾಗಿ ಕಣಕ್ಕಿಳಿಸಿತು. ಸಂಜು ಕೇವಲ 5 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಹೀಗಾಗಿ ಎರಡನೇ ಟಿ20 ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಬದಲಿಗೆ ವೈಭವ್ ಸೂರ್ಯವಂಶಿಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ.
ವಾಷಿಂಗ್ಟನ್ ಸುಂದರ್ ಬದಲಿಗೆ ಸೂರ್ಯಾನ್ಶ್ ಶೆಡ್ಗೆಗೆ ಚಾನ್ಸ್?
ಐರ್ಲೆಂಡ್ ಎದುರಿನ ಮೊದಲ ಪಂದ್ಯದಲ್ಲಿ ವಾಷಿಂಗ್ಟನ್ ಸುಂದರ್ ಆಲ್ರೌಂಡರ್ ಆಗಿ ನಿರಾಸೆ ಮೂಡಿಸಿದ್ದರು. ಹೀಗಾಗಿ ಎರಡನೇ ಪಂದ್ಯದಲ್ಲಿ ಸುಂದರ್‌ಗೆ ವಿಶ್ರಾಂತಿ ನೀಡಿ ವೇಗದ ಬೌಲಿಂಗ್ ಆಲ್ರೌಂಡರ್ ವಾಷಿಂಗ್ಟನ್ ಸುಂದರ್‌ಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ.
ಪ್ರಸಿದ್ದ್ ಕೃಷ್ಣ ಬದಲಿಗೆ ಪ್ರಿನ್ಸ್ ಯಾದವ್‌ಗೆ ಚಾನ್ಸ್:
ಇನ್ನು ಮೊದಲ ಟಿ20 ಪಂದ್ಯದಲ್ಲಿ ಪ್ರಸಿದ್ದ್ ಕೃಷ್ಣ 4 ಓವರ್‌ನಲ್ಲಿ 57 ರನ್ ನೀಡಿ ದುಬಾರಿಯಾಗಿದ್ದರು. ಹೀಗಾಗಿ ಪ್ರಸಿದ್ದ್‌ಗೆ ವಿಶ್ರಾಂತಿ ನೀಡಿ ಎರಡನೇ ಟಿ20 ಪಂದ್ಯದಲ್ಲಿ ಯುವ ವೇಗಿ ಪ್ರಿನ್ಸ್ ಯಾದವ್‌ಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗುವ ಸಾಧ್ಯತೆಯಿದೆ. ಪ್ರಿನ್ಸ್ ಯಾದವ್ 19ನೇ ಸೀಸನ್ ಐಪಿಎಲ್ ಟೂರ್ನಿಯಲ್ಲಿ ಲಖನೌ ಸೂಪರ್ ಜೈಂಟ್ಸ್ ಪರ ಮಿಂಚಿನ ಪ್ರದರ್ಶನ ತೋರಿದ್ದರು.
ಐರ್ಲೆಂಡ್ ಎದುರಿನ ಎರಡನೇ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಹೀಗಿದೆ:
ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಇಶಾನ್ ಕಿಶನ್(ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್(ನಾಯಕ), ತಿಲಕ್ ವರ್ಮಾ, ಶಿವಂ ದುಬೆ, ಸೂರ್ಯಾನ್ಶ್ ಶೆಡ್ಗೆ, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಅರ್ಶದೀಪ್ ಸಿಂಗ್, ಪ್ರಿನ್ಸ್ ಯಾದವ್.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

