ಇಂಗ್ಲೆಂಡ್ ಎದುರಿನ ಎರಡನೇ ಟೆಸ್ಟ್‌ಗೆ ಒಂದೆರಡಲ್ಲ ಟೀಂ ಇಂಡಿಯಾದಲ್ಲಿ 4 ಬದಲಾವಣೆ?
ಬರ್ಮಿಂಗ್‌ಹ್ಯಾಮ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಮೊದಲ ಟೆಸ್ಟ್ ಸೋಲಿನ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಟೀಂ ಇಂಡಿಯಾ ಪ್ರಮುಖ ಬದಲಾವಣೆಗಳೊಂದಿಗೆ ಕಣಕ್ಕಿಳಿಯಲು ಮುಂದಾಗಿದೆ ಎಂದು ವರದಿಯಾಗಿದೆ.

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯವು ಜುಲೈ 02ರಂದು ಆರಂಭವಾಗಲಿದೆ. ಈ ಟೆಸ್ಟ್ ಪಂದ್ಯಕ್ಕೆ ಬರ್ಮಿಂಗ್‌ಹ್ಯಾಮ್‌ನ ಎಜ್‌ಬಾಸ್ಟನ್ ಸ್ಟೇಡಿಯಂ ಆತಿಥ್ಯ ವಹಿಸಿದೆ.
ಈಗಾಗಲೇ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು 5 ವಿಕೆಟ್ ಅಂತರದ ಭರ್ಜರಿ ಗೆಲುವು ಸಾಧಿಸುವ ಮೂಲಕ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
ಇದೀಗ ಎರಡನೇ ಟೆಸ್ಟ್ ಗೆಲ್ಲುವ ಮೂಲಕ ಆತಿಥೇಯ ಇಂಗ್ಲೆಂಡ್‌ಗೆ ತಿರುಗೇಟು ನೀಡಲು ಟೀಂ ಇಂಡಿಯಾ ಎದುರು ನೋಡುತ್ತಿದೆ. ಹೀಗಾಗಿ ಕೆಲ ಬದಲಾವಣೆಗಳೊಂದಿಗೆ ಕಣಕ್ಕಿಳಿಯಲು ಸಜ್ಜಾಗಿದೆ.
ಈ ಮೊದಲು ಎರಡನೇ ಟೆಸ್ಟ್ ಪಂದ್ಯದಲ್ಲಿ ನಿತೀಶ್ ಕುಮಾರ್ ರೆಡ್ಡಿ ಹಾಗೂ ವಾಷಿಂಗ್ಟನ್ ಸುಂದರ್ ಈ ಇಬ್ಬರು ಭಾರತ ತಂಡ ಕೂಡಿಕೊಳ್ಳಬಹುದು ಎಂದು ವರದಿಯಾಗಿತ್ತು.
ಆದರೆ ಮತ್ತೊಂದು ಮಾಧ್ಯಮದ ವರದಿಯ ಪ್ರಕಾರ ಎರಡನೇ ಟೆಸ್ಟ್‌ನಲ್ಲಿ ಒಂದೆರಡಲ್ಲ ಬರೋಬ್ಬರಿ 4 ಬದಲಾವಣೆಗಳೊಂದಿಗೆ ಟೀಂ ಇಂಡಿಯಾ ಕಣಕ್ಕಿಳಿಯಲು ಮುಂದಾಗಿದೆ ಎಂದು ವರದಿಯಾಗಿದೆ.
ಹೌದು, ವೇಗಿ ಆಕಾಶ್‌ದೀಪ್ ಸಿಂಗ್, ಅರ್ಶದೀಪ್ ಸಿಂಗ್, ನಿತೀಶ್ ಕುಮಾರ್ ರೆಡ್ಡಿ ಹಾಗೂ ವಾಷಿಂಗ್ಟನ್ ಸುಂದರ್ ಹೀಗೆ ಈ ನಾಲ್ವರು ಆಟಗಾರರು ಎರಡನೇ ಟೆಸ್ಟ್‌ನಲ್ಲಿ ಕಣಕ್ಕಿಳಿಯಲಿದ್ದಾರೆ ಎಂದು ರೇವ್‌ಸ್ಪೋರ್ಟ್ಸ್ ವೆಬ್‌ಸೈಟ್ ವರದಿ ಮಾಡಿದೆ.