MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ಆಸ್ಟ್ರೇಲಿಯಾ ಪ್ರವಾಸದಿಂದ ಹೊರಬಿದ್ದ ಟಾಪ್-5 ಆಟಗಾರರಿವರು! ಮುಗಿಯಿತಾ ಈ ಇಬ್ಬರ ಕ್ರಿಕೆಟ್ ಬದುಕು?

ಆಸ್ಟ್ರೇಲಿಯಾ ಪ್ರವಾಸದಿಂದ ಹೊರಬಿದ್ದ ಟಾಪ್-5 ಆಟಗಾರರಿವರು! ಮುಗಿಯಿತಾ ಈ ಇಬ್ಬರ ಕ್ರಿಕೆಟ್ ಬದುಕು?

ಬೆಂಗಳೂರು: ಇದೇ ಅಕ್ಟೋಬರ್ 19ರಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ಎದುರಿನ ಸೀಮಿತ ಓವರ್‌ಗಳ ಸರಣಿಗೆ ಭಾರತ ತಂಡ ಪ್ರಕಟವಾಗಿದ್ದು, ಈ 5 ಸ್ಟಾರ್ ಆಟಗಾರರಿಗೆ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ. ಈ ಪೈಕಿ ಇಬ್ಬರು ಕ್ರಿಕೆಟಿಗರ ಏಕದಿನ ಕ್ರಿಕೆಟ್ ವೃತ್ತಿಬದುಕು ಮಗಿದೇಹೋಯ್ತಾ ಎನ್ನುವ ಅನುಮಾನ ಕಾಡಲಾರಂಭಿಸಿದೆ. 

1 Min read
Author : Naveen Kodase
Published : Oct 05 2025, 05:53 PM IST
Share this Photo Gallery
  • FB
  • TW
  • Linkdin
  • Whatsapp
17
ಆಸೀಸ್ ಸರಣಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ
Image Credit : ANI

ಆಸೀಸ್ ಸರಣಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ

ಭಾರತ ಹಾಗೂ ಅಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಇದೇ ಅಕ್ಟೋಬರ್ 19ರಿಂದ ಆರಂಭವಾಗಲಿದೆ. ಈ ಸರಣಿಗೆ ರೋಹಿತ್ ಶರ್ಮಾ ಬದಲಿಗೆ ಶುಭ್‌ಮನ್ ಗಿಲ್‌ಗೆ ಬಿಸಿಸಿಐ ಆಯ್ಕೆ ಸಮಿತಿಯು ನಾಯಕ ಪಟ್ಟ ಕಟ್ಟಿದೆ.

27
ಐದು ಬಿಗ್ ನೇಮ್ಸ್ ಮಿಸ್ಸಿಂಗ್
Image Credit : Getty

ಐದು ಬಿಗ್ ನೇಮ್ಸ್ ಮಿಸ್ಸಿಂಗ್

ಇನ್ನು ಈ ಸರಣಿಗೆ ಆಯ್ಕೆಯಾಗಬೇಕಿದ್ದ ಐವರು ಆಟಗಾರರಿಗೆ ಭಾರತ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ. ಇವರನ್ನು ಆಯ್ಕೆ ಸಮಿತಿಯು ಕಡೆಗಣಿಸಿದೆ. ಯಾರು ಆ ಐದು ಆಟಗಾರರು ಎನ್ನುವುದನ್ನು ನೋಡೋಣ ಬನ್ನಿ.

Related Articles

Related image1
ಏಷ್ಯಾಕಪ್ ಟ್ರೋಫಿ ಸ್ವೀಕರಿಸದ ಚಾಂಪಿಯನ್ ಭಾರತ! ಕ್ರಿಕೆಟ್ ಇತಿಹಾಸದಲ್ಲೇ ಕಂಡು ಕೇಳರಿಯದ ಘಟನೆ
Related image2
ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಆಸ್ಟ್ರೇಲಿಯಾ ಪ್ರವಾಸವೇ ಕೊನೆ ಸರಣಿ?
37
1. ಸಂಜು ಸ್ಯಾಮ್ಸನ್
Image Credit : Getty

1. ಸಂಜು ಸ್ಯಾಮ್ಸನ್

ಕೇರಳ ಮೂಲದ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್‌ಗೆ ಏಕದಿನ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ. ಸಂಜು ಬದಲಿಗೆ ಆಯ್ಕೆ ಸಮಿತಿಯು ಧ್ರುವ್ ಜುರೆಲ್‌ಗೆ ವಿಕೆಟ್ ಕೀಪರ್ ಆಗಿ ಸ್ಥಾನ ನೀಡಿದೆ. ಹೀಗಾಗಿ ಸಂಜು ಮುಂಬರುವ ದಿನಗಳಲ್ಲಿ ಭಾರತ ಏಕದಿನ ತಂಡದಲ್ಲಿ ಸ್ಥಾನ ಪಡೆಯೋದು ಅನುಮಾನ ಎನಿಸಿದೆ.

47
2. ತಿಲಕ್ ವರ್ಮಾ
Image Credit : X/BCCI

2. ತಿಲಕ್ ವರ್ಮಾ

ಏಷ್ಯಾಕಪ್ ಫೈನಲ್‌ನಲ್ಲಿ ಪಾಕಿಸ್ತಾನ ಎದುರು ಕೆಚ್ಚೆದೆಯ ಆಟದ ಮೂಲಕ ಮಿಂಚಿದ್ದ ತಿಲಕ್ ವರ್ಮಾ, ಭಾರತ ಏಕದಿನ ತಂಡದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದರು. ಹೀಗಿದ್ದೂ ತಿಲಕ್ ವರ್ಮಾ ಅವರನ್ನು ಆಯ್ಕೆ ಸಮಿತಿ ಕಡೆಗಣಿಸಿದ್ದು ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ.

57
3. ರವೀಂದ್ರ ಜಡೇಜಾ
Image Credit : ANI

3. ರವೀಂದ್ರ ಜಡೇಜಾ

ಭಾರತ ಟೆಸ್ಟ್‌ ತಂಡದ ಉಪನಾಯಕ ರವೀಂದ್ರ ಜಡೇಜಾ ಅವರಿಗೂ ಈ ಬಾರಿ ಏಕದಿನ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ. ಜಡ್ಡು ಬದಲಿಗೆ ಆಲ್ರೌಂಡರ್ ಆಗಿ ಅಕ್ಷರ್ ಪಟೇಲ್ ಹಾಗೂ ವಾಷಿಂಗ್ಟನ್ ಸುಂದರ್‌ಗೆ ಸ್ಥಾನ ನೀಡಲಾಗಿದೆ. ಹೀಗಾಗಿ ಜಡ್ಡು ಅವರ ಏಕದಿನ ವೃತ್ತಿಬದುಕು ಮುಗಿಯಿತಾ ಎನ್ನುವ ಅನುಮಾನ ಅಭಿಮಾನಿಗಳನ್ನು ಕಾಡಲಾರಂಭಿಸಿದೆ.

67
4. ವರುಣ್ ಚಕ್ರವರ್ತಿ
Image Credit : Getty

4. ವರುಣ್ ಚಕ್ರವರ್ತಿ

ಮಿಸ್ಟ್ರಿ ಸ್ಪಿನ್ನರ್ ಖ್ಯಾತಿಯ ವರುಣ್ ಚಕ್ರವರ್ತಿ ಅವರಿಗೂ ಈ ಬಾರಿ ಏಕದಿನ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ. ಸದ್ಯ ವರುಣ್ ಚಕ್ರವರ್ತಿ ಭಾರತ ಟಿ20 ತಂಡದಲ್ಲಿ ಸ್ಥಾನ ಪಡೆಯುತ್ತಿದ್ದು, ಏಕದಿನ ತಂಡದಲ್ಲಿ ಸ್ಥಾನ ಪಡೆಯಲು ಇನ್ನಷ್ಟು ಸಮಯ ಕಾಯಬೇಕಿದೆ.

77
5. ಮೊಹಮ್ಮದ್ ಶಮಿ
Image Credit : X/Vishal.

5. ಮೊಹಮ್ಮದ್ ಶಮಿ

ಐಸಿಸಿ ಟೂರ್ನಿಗಳಲ್ಲಿ ಭಾರತದ ಬೌಲಿಂಗ್ ಅಸ್ತ್ರವಾಗಿ ಗುರುತಿಸಿಕೊಂಡಿರುವ ಅನುಭವಿ ವೇಗಿ ಮೊಹಮ್ಮದ್ ಶಮಿಯನ್ನು ಇದೀಗ ಆಯ್ಕೆ ಸಮಿತಿ ಕಡೆಗಣಿಸಿದೆ. ಹೀಗಾಗಿ ಶಮಿ ಅವರು ಅಂತಾರಾಷ್ಟ್ರೀಯ ವೃತ್ತಿಬದುಕಿಗೆ ಪೂರ್ಣವಿರಾಮ ಇಡುವ ಸಮಯ ಬಂದಿದೆಯೇ ಎನ್ನುವ ಅನುಮಾನ ಶುರುವಾಗಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಟೀಮ್ ಇಂಡಿಯಾ
ಬಿಸಿಸಿಐ
ಆಸ್ಟ್ರೇಲಿಯಾ
ಸಂಜು ಸ್ಯಾಮ್ಸನ್

Latest Videos
Recommended Stories
Recommended image1
ಮತ್ತೆ ಇಂಡೋ-ಪಾಕ್ ಪಂದ್ಯ, ಐಸಿಸಿ ಟಿ20 ವಿಶ್ವಕಪ್ ಮಹಿಳಾ ಟೂರ್ನಿ ವೇಳಾಪಟ್ಟಿ ಪ್ರಕಟ
Recommended image2
ಅ-19 ವಿಶ್ವಕಪ್ ಹೀರೋ ವೈಭವ್ ಸೂರ್ಯವಂಶಿಗೆ ದುಬಾರಿ ಕಾರು ಗಿಫ್ಟ್ ಕೊಟ್ಟ ಟಾಟಾ
Recommended image3
ಸಚಿನ್ ತೆಂಡೂಲ್ಕರ್‌ಗೆ ಮಾಡಿದ್ದ ಅನ್ಯಾಯ ಒಪ್ಪಿಕೊಂಡ ಅಂಪೈರ್ ಸ್ಟೀವ್ ಬಕ್ನರ್; 22 ವರ್ಷಗಳ ಬಳಿಕ ರಹಸ್ಯ ಬಹಿರಂಗ!
Related Stories
Recommended image1
ಏಷ್ಯಾಕಪ್ ಟ್ರೋಫಿ ಸ್ವೀಕರಿಸದ ಚಾಂಪಿಯನ್ ಭಾರತ! ಕ್ರಿಕೆಟ್ ಇತಿಹಾಸದಲ್ಲೇ ಕಂಡು ಕೇಳರಿಯದ ಘಟನೆ
Recommended image2
ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಆಸ್ಟ್ರೇಲಿಯಾ ಪ್ರವಾಸವೇ ಕೊನೆ ಸರಣಿ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved