MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • IND vs ENG 2nd ODI: ಶುಭ್‌ಮನ್ ಗಿಲ್ ಅಲಭ್ಯರಾದರೆ ಯಾರು ಓಪನರ್? ಭಾರತ ಸಂಭಾವ್ಯ XI ಬಹಿರಂಗ

IND vs ENG 2nd ODI: ಶುಭ್‌ಮನ್ ಗಿಲ್ ಅಲಭ್ಯರಾದರೆ ಯಾರು ಓಪನರ್? ಭಾರತ ಸಂಭಾವ್ಯ XI ಬಹಿರಂಗ

ಬೆಂಗಳೂರು: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಇಂಗ್ಲೆಂಡ್ ಎದುರಿನ ಎರಡನೇ ಪಂದ್ಯಕ್ಕೆ ಭಾರತ ತಂಡದಲ್ಲಿ ಬದಲಾವಣೆಗಳಾಗುವ ಸಾಧ್ಯತೆಯಿದೆ. ಇಲ್ಲಿದೆ ಸಂಭಾವ್ಯ ತಂಡ.

2 Min read
Author : Naveen Kodase
Published : Jul 15 2026, 04:23 PM IST
Share this Photo Gallery
  • FB
  • TW
  • Linkdin
  • Whatsapp
16
ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ ಶುಭಾರಂಭ
Image Credit : BCCI/X

ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ ಶುಭಾರಂಭ

ಐರ್ಲೆಂಡ್ ಹಾಗೂ ಇಂಗ್ಲೆಂಡ್ ಎದುರು ಟಿ20 ಸರಣಿಯಲ್ಲಿ ವೈಟ್‌ವಾಷ್ ಮುಖಭಂಗ ಅನುಭವಿಸಿದ್ದ ಟೀಂ ಇಂಡಿಯಾ, ಇದೀಗ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಗೆಲುವಿನ ಖಾತೆ ತೆರೆದಿದೆ. ಎಜ್‌ಬಾಸ್ಟನ್‌ನಲ್ಲಿ ಮಂಗಳವಾರ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ಎದುರು ಟೀಂ ಇಂಡಿಯಾ ಆರು ವಿಕೆಟ್‌ಗಳ ಗೆಲುವು ಸಾಧಿಸಿ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
ಏಕದಿನ ಕ್ರಿಕೆಟ್‌ಗೆ ರೋಹಿತ್, ಕೊಹ್ಲಿ, ಬುಮ್ರಾ ಕಮ್‌ಬ್ಯಾಕ್
Image Credit : Getty

ಏಕದಿನ ಕ್ರಿಕೆಟ್‌ಗೆ ರೋಹಿತ್, ಕೊಹ್ಲಿ, ಬುಮ್ರಾ ಕಮ್‌ಬ್ಯಾಕ್

2026ರ ಐಪಿಎಲ್ ಟೂರ್ನಿಯ ಬಳಿಕ ಇದೇ ಮೊದಲ ಸಲ ಭಾರತದ ಕ್ರಿಕೆಟ್ ದಿಗ್ಗಜರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾಗೂ ಜಸ್ಪ್ರೀತ್ ಬುಮ್ರಾ ಮೈದಾನಕ್ಕಿಳಿದರು. ರೋಹಿತ್, ಕೊಹ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದರೆ, 2023ರ ಏಕದಿನ ವಿಶ್ವಕಪ್ ಫೈನಲ್‌ ಬಳಿಕ ಭಾರತ ಪರ ಮೊದಲ ಏಕದಿನ ಪಂದ್ಯವನ್ನಾಡಿದ ಬುಮ್ರಾ, ಇಂಗ್ಲೆಂಡ್ ನಾಯಕ ಹ್ಯಾರಿ ಬ್ರೂಕ್ ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾದರು.

Related Articles

Related image1
ಟಿ20 ಸೋಲಿನ ಕಹಿ ಮರೆತ ಭಾರತ; ಮೊದಲ ಏಕದಿನದಲ್ಲಿ ಇಂಗ್ಲೆಂಡ್‌ಗೆ ತಿರುಗೇಟು ಕೊಟ್ಟ ಟೀಂ ಇಂಡಿಯಾ
Related image2
ಬರ್ಮಿಂಗ್‌ಹ್ಯಾಮ್‌ನಲ್ಲಿ ವಿರಾಟ್ ಕೊಹ್ಲಿ ಹೆಸರಲ್ಲಿದ್ದ ಅಪರೂಪದ ದಾಖಲೆ ಮುರಿದ ಶುಭ್‌ಮನ್ ಗಿಲ್!
36
ಆತಂಕ ಸೃಷ್ಟಿಸಿದ ಗಿಲ್ ಗಾಯದ ಸಮಸ್ಯೆ:
Image Credit : Getty

ಆತಂಕ ಸೃಷ್ಟಿಸಿದ ಗಿಲ್ ಗಾಯದ ಸಮಸ್ಯೆ:

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯದ 26ನೇ ಓವರ್‌ನಲ್ಲಿ ಟೀಂ ಇಂಡಿಯಾ ನಾಯಕ ಶುಭ್‌ಮನ್ ಗಿಲ್ 80 ರನ್ ಗಳಿಸಿ ಮುನ್ನುಗ್ಗುತ್ತಿದ್ದಾಗ ಅವರ ಬಲಗಾಲಿನಲ್ಲಿ ನೋವು ಕಾಣಿಸಿಕೊಂಡಿದೆ. ಇದಾದ ಬಳಿಕ ರಿಟೈರ್ಡ್‌ ಹರ್ಟ್ ಪಡೆದುಕೊಂಡು ಗಿಲ್ ಮೈದಾನ ತೊರೆದರು. ಇದೀಗ ಗಿಲ್ ಗಾಯದ ಸಮಸ್ಯೆ ತಂಡದಲ್ಲಿ ಆತಂಕ ಮನೆಮಾಡಿದೆ.

46
ಗಿಲ್ ಹೊರಗುಳಿದರೆ ಇಶಾನ್ ಕಿಶನ್‌ಗೆ ಅವಕಾಶ?
Image Credit : X/@AnkanKar (Screengrab)

ಗಿಲ್ ಹೊರಗುಳಿದರೆ ಇಶಾನ್ ಕಿಶನ್‌ಗೆ ಅವಕಾಶ?

ಇನ್ನು ಶುಭ್‌ಮನ್ ಗಿಲ್ ಗಾಯದ ಗಂಭೀರತೆಯ ಬಗ್ಗೆ ಇನ್ನೂ ಯಾವುದೇ ಸ್ಪಷ್ಟತೆ ಸಿಕ್ಕಿಲ್ಲ. ಗಿಲ್ ವಿಚಾರದಲ್ಲಿ ಟೀಮ್ ಮ್ಯಾನೇಜ್‌ಮೆಂಟ್ ಯಾವುದೇ ರಿಸ್ಕ್ ತೆಗೆದುಕೊಳ್ಳಲು ಸಿದ್ದವಿಲ್ಲ. ಹೀಗಾಗಿ ಜುಲೈ 16ರಂದು ನಡೆಯಲಿರುವ ಎರಡನೇ ಏಕದಿನ ಪಂದ್ಯಕ್ಕೂ ಮುನ್ನ ಗಿಲ್ ಸಂಪೂರ್ಣ ಫಿಟ್ ಆಗಿರದಿದ್ದರೇ, ಅವರ ಬದಲಿಗೆ ಆರಂಭಿಕನಾಗಿ ಇಶಾನ್ ಕಿಶನ್ ಆಡುವ ಹನ್ನೊಂದರ ಬಳಗ ಕೂಡಿಕೊಳ್ಳುವ ನಿರೀಕ್ಷೆಯಿದೆ.

56
ಬ್ರಾರ್ ಅಲಭ್ಯರಾದರೇ ಅರ್ಶದೀಪ್ ಸಿಂಗ್‌ಗೆ ಅವಕಾಶ
Image Credit : Instagram

ಬ್ರಾರ್ ಅಲಭ್ಯರಾದರೇ ಅರ್ಶದೀಪ್ ಸಿಂಗ್‌ಗೆ ಅವಕಾಶ

ಇನ್ನು ಟೀಂ ಇಂಡಿಯಾ ಬೌಲಿಂಗ್ ಮಾಡುವ ವೇಳೆಯಲ್ಲಿ 48ನೇ ಓವರ್‌ನಲ್ಲಿ ಗುರ್ನೂರ್ ಬ್ರಾರ್ ರನ್‌ ಅಪ್ ಮಾಡುವ ವೇಳೆಯಲ್ಲಿ ತೊಡಕು ಉಂಟಾಗಿತ್ತು. ಇದಾದ ಬಳಿಕ ಬ್ರಾರ್ ಮೈದಾನ ತೊರೆದರು. ಬ್ರಾರ್ ಅನುಪಸ್ಥಿತಿಯಲ್ಲಿ ಅಕ್ಷರ್ ಪಟೇಲ್ ಬೌಲಿಂಗ್ ಕಂಪ್ಲೀಟ್ ಮಾಡಿದರು. ಇನ್ನು ಬ್ರಾರ್ ಲಭ್ಯತೆ ಬಗ್ಗೆ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ. ಬ್ರಾರ್ ಅಲಭ್ಯರಾದರೇ ಅರ್ಶದೀಪ್ ಸಿಂಗ್ ಭಾರತ ತಂಡ ಕೂಡಿಕೊಳ್ಳುವ ಸಾಧ್ಯತೆಯಿದೆ.

66
ಎರಡನೇ ಏಕದಿನ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ
Image Credit : Getty

ಎರಡನೇ ಏಕದಿನ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ

ರೋಹಿತ್ ಶರ್ಮಾ, ಶುಭ್‌ಮನ್ ಗಿಲ್/ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ವಾಷಿಂಗ್ಟನ್ ಸುಂದರ್, ಕೆ ಎಲ್ ರಾಹುಲ್(ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಶಿವಂ ದುಬೆ, ಗುರ್ನೂರ್ ಬ್ರಾರ್/ಅರ್ಶದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ದ್ ಕೃಷ್ಣ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಟೀಮ್ ಇಂಡಿಯಾ
ಇಂಗ್ಲೆಂಡ್ ಕ್ರಿಕೆಟ್
ಶುಭಮನ್ ಗಿಲ್

Latest Videos
Recommended Stories
Recommended image1
ಭಾರತಕ್ಕೆ ಡ್ರಗ್ಸ್ ಸಪ್ಲೇ ಮಾಡಿ ಸಿಕ್ಕಿಬಿದ್ದ ಪಾಕಿಸ್ತಾನದ ಈ ಕ್ರಿಕೆಟಿಗರು, ರಹಸ್ಯ ಬಿಚ್ಚಿ ಮಾಜಿ MHA ಅಧಿಕಾರಿ
Recommended image2
ಬರ್ಮಿಂಗ್‌ಹ್ಯಾಮ್‌ನಲ್ಲಿ ವಿರಾಟ್ ಕೊಹ್ಲಿ ಹೆಸರಲ್ಲಿದ್ದ ಅಪರೂಪದ ದಾಖಲೆ ಮುರಿದ ಶುಭ್‌ಮನ್ ಗಿಲ್!
Recommended image3
Dhoni Earpiece: ಏಕದಿನ ಪಂದ್ಯದಲ್ಲಿ ಗಮನ ಸೆಳೆದ ಧೋನಿ ಕಿವಿ? ಕೂಲ್‌ ಕ್ಯಾಪ್ಟನ್‌ ಹಾಕಿಕೊಂಡಿದ್ದ ಡಿವೈಸ್‌ ಯಾವ್ದು?
Related Stories
Recommended image1
ಟಿ20 ಸೋಲಿನ ಕಹಿ ಮರೆತ ಭಾರತ; ಮೊದಲ ಏಕದಿನದಲ್ಲಿ ಇಂಗ್ಲೆಂಡ್‌ಗೆ ತಿರುಗೇಟು ಕೊಟ್ಟ ಟೀಂ ಇಂಡಿಯಾ
Recommended image2
ಬರ್ಮಿಂಗ್‌ಹ್ಯಾಮ್‌ನಲ್ಲಿ ವಿರಾಟ್ ಕೊಹ್ಲಿ ಹೆಸರಲ್ಲಿದ್ದ ಅಪರೂಪದ ದಾಖಲೆ ಮುರಿದ ಶುಭ್‌ಮನ್ ಗಿಲ್!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved