MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • Pink Ball Test: ಬೆಂಗಳೂರು ಟೆಸ್ಟ್‌ಗೆ ಟೀಂ ಇಂಡಿಯಾದಲ್ಲಿ ಒಂದು ಮಹತ್ವದ ಬದಲಾವಣೆ..?

Pink Ball Test: ಬೆಂಗಳೂರು ಟೆಸ್ಟ್‌ಗೆ ಟೀಂ ಇಂಡಿಯಾದಲ್ಲಿ ಒಂದು ಮಹತ್ವದ ಬದಲಾವಣೆ..?

ಬೆಂಗಳೂರು: ಭಾರತ ಹಾಗೂ ಶ್ರೀಲಂಕಾ (India vs Sri Lanka) ತಂಡಗಳ ನಡುವಿನ ಎರಡನೇ ಟೆಸ್ಟ್‌ ಪಂದ್ಯಕ್ಕೆ ಬೆಂಗಳೂರಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂಗೆ ಆತಿಥ್ಯವನ್ನು ವಹಿಸಿದೆ. ಬೆಂಗಳೂರು (Bengaluru) ಇದೇ ಮೊದಲ ಬಾರಿಗೆ ಪಿಂಕ್ ಬಾಲ್ ಟೆಸ್ಟ್‌ಗೆ (Pink Ball Test) ಸಾಕ್ಷಿಯಾಗಲಿದೆ. ಮೊಹಾಲಿ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ಬೀಗುತ್ತಿರುವ ಟೀಂ ಇಂಡಿಯಾ (Team India), ಇದೀಗ ಪಿಂಕ್‌ ಬಾಲ್ ಟೆಸ್ಟ್‌ ಪಂದ್ಯಕ್ಕೆ ಟೀಂ ಇಂಡಿಯಾ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ. 

2 Min read
Author : Suvarna News | Asianet News
Published : Mar 11 2022, 11:48 AM IST
Share this Photo Gallery
  • FB
  • TW
  • Linkdin
  • Whatsapp
111
1. ರೋಹಿತ್ ಶರ್ಮಾ

1. ರೋಹಿತ್ ಶರ್ಮಾ

ಟೀಂ ಇಂಡಿಯಾ ಟೆಸ್ಟ್ ತಂಡದ ನಾಯಕ ರೋಹಿತ್ ಶರ್ಮಾ, ಎರಡನೇ ಟೆಸ್ಟ್ ಪಂದ್ಯದಲ್ಲಿ ದೊಡ್ಡ ಮೊತ್ತ ಕಲೆಹಾಕುವ ನಿರೀಕ್ಷೆಯಲ್ಲಿದ್ದಾರೆ. ಮೊಹಾಲಿ ಟೆಸ್ಟ್ ಪಂದ್ಯದಲ್ಲಿ ರೋಹಿತ್ 29 ರನ್‌ ಬಾರಿಸಿ ವಿಕೆಟ್‌ ಒಪ್ಪಿಸಿದ್ದರು. ಟೆಸ್ಟ್ ತಂಡದ ನಾಯಕರಾದ ಬಳಿಕ ರೋಹಿತ್ ಶರ್ಮಾ ಮೊದಲ ಟೆಸ್ಟ್ ಸರಣಿ ಗೆಲುವಿನ ವಿಶ್ವಾಸದಲ್ಲಿದ್ದಾರೆ.

211
2. ಮಯಾಂಕ್‌ ಅಗರ್‌ವಾಲ್

2. ಮಯಾಂಕ್‌ ಅಗರ್‌ವಾಲ್

ಟೆಸ್ಟ್ ತಂಡದ ಆರಂಭಿಕ ಬ್ಯಾಟರ್‌ ಮಯಾಂಕ್‌ ಅಗರ್‌ವಾಲ್‌ಗೆ ಪಿಂಕ್ ಬಾಲ್‌ ಟೆಸ್ಟ್‌ನಲ್ಲಿ ಮತ್ತೊಂದು ಅವಕಾಶ ಸಿಗುವ ಸಾಧ್ಯತೆಯಿದೆ. ಮೊದಲ ಪಂದ್ಯದಲ್ಲಿ 33 ರನ್‌ ಬಾರಿಸಿದ್ದ ಮಯಾಂಕ್‌, ಇದೀಗ ತವರಿನಲ್ಲಿ ಅಬ್ಬರಿಸಲು ಎದುರು ನೋಡುತ್ತಿದ್ದಾರೆ.
 

311
3. ಹನುಮ ವಿಹಾರಿ

3. ಹನುಮ ವಿಹಾರಿ

ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ ಅನುಪಸ್ಥಿತಿಯಲ್ಲಿ ಮೊದಲ ಟೆಸ್ಟ್‌ ಪಂದ್ಯದಲ್ಲಿ ಸಮಯೋಚಿತ ಅರ್ಧಶತಕ ಬಾರಿಸುವ ಮೂಲಕ ಆಯ್ಕೆ ಸಮಿತಿ ಮನ ಗೆದ್ದಿದ್ದರು. ವಿಹಾರಿ ಇದೀಗ ಮತ್ತೊಮ್ಮೆ ಮೂರನೇ ಕ್ರಮಾಂಕ ಭದ್ರಪಡಿಸಿಕೊಳ್ಳಲು ಎದುರು ನೋಡುತ್ತಿದ್ದಾರೆ.
 

411
4. ವಿರಾಟ್ ಕೊಹ್ಲಿ

4. ವಿರಾಟ್ ಕೊಹ್ಲಿ

ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಕಳೆದ ಎರಡೂವರೆ ವರ್ಷಗಳಿಂದ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಶತಕ ಬಾರಿಸಲು ವಿಫಲರಾಗಿದ್ದಾರೆ. ಕೊಹ್ಲಿ ತನ್ನ ನೆಚ್ಚಿನ ಸ್ಟೇಡಿಯಂನಲ್ಲಿ ಶತಕದ ಬರ ನೀಗಿಸಿಕೊಳ್ಳಲು ಕಾಯುತ್ತಿದ್ದಾರೆ.
 

511
5. ರಿಷಭ್ ಪಂತ್

5. ರಿಷಭ್ ಪಂತ್

ವಿಕೆಟ್ ಕೀಪರ್ ಬ್ಯಾಟರ್ ಪಂತ್, ಮೊಹಾಲಿ ಟೆಸ್ಟ್ ಪಂದ್ಯದಲ್ಲಿ ಆಕರ್ಷಕ 96 ರನ್ ಬಾರಿಸಿ, ಕೇವಲ 4 ರನ್‌ಗಳ ಅಂತರದಲ್ಲಿ ಶತಕ ವಂಚಿತರಾಗಿದ್ದರು. ಪಂತ್ ಬೆಂಗಳೂರಿನಲ್ಲೂ ಸ್ಪೋಟಕ ಬ್ಯಾಟಿಂಗ್ ನಡೆಸಲು ರೆಡಿಯಾಗಿದ್ದಾರೆ.

611
6. ಶ್ರೇಯಸ್ ಅಯ್ಯರ್‌

6. ಶ್ರೇಯಸ್ ಅಯ್ಯರ್‌

ವಿಂಡೀಸ್ ಎದುರಿನ ಟಿ20 ಸರಣಿಯಲ್ಲಿ ಸತತ 3 ಅರ್ಧಶತಕ ಬಾರಿಸಿ ಆಯ್ಕೆ ಸಮಿತಿ ಮನಗೆದ್ದಿರುವ ಶ್ರೇಯಸ್ ಅಯ್ಯರ್, ಮೊದಲ ಟೆಸ್ಟ್‌ನಲ್ಲಿ ಹೆಚ್ಚು ಕಮಾಲ್ ಮಾಡಲು ಸಾಧ್ಯವಾಗಿರಲಿಲ್ಲ. ಹೀಗಿದ್ದೂ ಅಯ್ಯರ್‌ಗೆ ಮತ್ತೊಂದು ಅವಕಾಶ ಸಿಗುವುದು ಬಹುತೇಕ ಖಚಿತ

711
7. ರವೀಂದ್ರ ಜಡೇಜಾ

7. ರವೀಂದ್ರ ಜಡೇಜಾ

ಮೊಹಾಲಿ ಟೆಸ್ಟ್‌ ಪಂದ್ಯದಲ್ಲೇ ಅಜೇಯ 175 ರನ್ ಹಾಗೂ ಬೌಲಿಂಗ್‌ನಲ್ಲಿ 9 ವಿಕೆಟ್ ಕಬಳಿಸಿದ್ದ ರವೀಂದ್ರ ಜಡೇಜಾ, ಟೆಸ್ಟ್ ಆಲ್ರೌಂಡರ್ ಶ್ರೇಯಾಂಕದಲ್ಲಿ ನಂ.1 ಸ್ಥಾನಕ್ಕೇರಿದ್ದಾರೆ. ಜಡೇಜಾ ತಮ್ಮ ಫಾರ್ಮ್ ಮುಂದುವರೆಸಿಕೊಂಡು ಹೋಗಲು ತುದಿಗಾಲಿನಲ್ಲಿ ನಿಂತಿದ್ದಾರೆ.
 

811
8. ರವಿಚಂದ್ರನ್ ಅಶ್ವಿನ್‌

8. ರವಿಚಂದ್ರನ್ ಅಶ್ವಿನ್‌

ಟೀಂ ಇಂಡಿಯಾ ಆನುಭವಿ ಆಫ್‌ಸ್ಪಿನ್ನರ್ ರವಿಚಂದ್ರನ್ ಅಶ್ವಿನ್‌, ತಮ್ಮ ಆಲ್ರೌಂಡ್ ಪ್ರದರ್ಶನದ ಮೂಲಕ ತಂಡಕ್ಕೆ ನೆರವಾಗುತ್ತಿದ್ದಾರೆ. ಮೊಹಾಲಿ ಟೆಸ್ಟ್‌ನಲ್ಲಿ ಕಪಿಲ್ ದೇವ್ ಗರಿಷ್ಠ ವಿಕೆಟ್ ದಾಖಲೆ ಹಿಂದಿಕ್ಕಿರುವ ಅಶ್ವಿನ್, ತಂಡದ ರಿಯಲ್ ಮ್ಯಾಚ್ ವಿನ್ನರ್ ಎನಿಸಿದ್ದಾರೆ.
 

911
9. ಅಕ್ಷರ್ ಪಟೇಲ್‌

9. ಅಕ್ಷರ್ ಪಟೇಲ್‌

ಕಳೆದ ಪಂದ್ಯದಲ್ಲಿ ಜಯಂತ್ ಯಾದವ್ ಅವರಿಂದ ನಿರೀಕ್ಷಿತ ಪ್ರದರ್ಶನ ಮೂಡಿ ಬಂದಿರಲಿಲ್ಲ. ಹೀಗಾಗಿ ಸಂಪೂರ್ಣ ಫಿಟ್ ಆಗಿರುವ ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ ಪಿಂಕ್ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.

1011
10. ಮೊಹಮ್ಮದ್ ಶಮಿ

10. ಮೊಹಮ್ಮದ್ ಶಮಿ

ಟೀಂ ಇಂಡಿಯಾ ಅನುಭವಿ ವೇಗಿ ಶಮಿ, ಮೊಹಾಲಿ ಟೆಸ್ಟ್‌ ಪಂದ್ಯದ ಎರಡು ಇನಿಂಗ್ಸ್‌ಗಳಿಂದ ಒಟ್ಟು 3 ವಿಕೆಟ್ ಕಬಳಿಸಿದ್ದರು. ಬೆಂಗಳೂರು ಟೆಸ್ಟ್ ಪಂದ್ಯದಲ್ಲಿ ಮತ್ತಷ್ಟು ವಿಕೆಟ್ ಪಡೆಯಲು ಶಮಿ ಸಾಕಷ್ಟು ಬೆವರು ಹರಿಸುತ್ತಿದ್ದಾರೆ.
 

1111
11. ಜಸ್ಪ್ರೀತ್ ಬುಮ್ರಾ

11. ಜಸ್ಪ್ರೀತ್ ಬುಮ್ರಾ

28 ವರ್ಷದ ಮಾರಕ ವೇಗಿ ಜಸ್ಪ್ರೀತ್ ಬುಮ್ರಾ, ಮೊಹಾಲಿ ಟೆಸ್ಟ್‌ ಪಂದ್ಯದಲ್ಲಿ ಗಮನಾರ್ಹ ಪ್ರದರ್ಶನ ತೋರಲು ವಿಫಲವಾಗಿದ್ದರು. ಆದರೆ, ಯಾವ ಕ್ಷಣದಲ್ಲಿ ಬೇಕಾದರೂ ಅಪಾಯಕಾರಿಯಾಗಬಲ್ಲ ಬುಮ್ರಾ, ಬೆಂಗಳೂರಿನಲ್ಲಿ ಲಂಕಾ ಬ್ಯಾಟರ್‌ಗಳನ್ನು ಕಾಡಲು ರೆಡಿಯಾಗಿದ್ದಾರೆ.
 

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News
ಕ್ರಿಕೆಟ್
ಟೀಮ್ ಇಂಡಿಯಾ

Latest Videos
Recommended Stories
Recommended image1
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ RCB ಮ್ಯಾಚ್ ಫಿಕ್ಸ್ ಆಯ್ತು; ಆದ್ರೆ ಕಾಲ್ತುಳಿತದಲ್ಲಿ ಸತ್ತ 11 ಜನರ ಕೇಸ್ ಏನಾಯ್ತು?
Recommended image2
ಅರ್ಜುನ್ ತೆಂಡೂಲ್ಕರ್ ಸಾನಿಯಾ ಮೆಹಂದಿ ಸೆರಮನಿ ಮೊದಲ ವಿಡಿಯೋ ಬಹಿರಂಗ
Recommended image3
ಡ್ಯಾಡಿ ಡ್ಯೂಟಿ, ಲಂಡನ್‌ನಲ್ಲಿ ಪ್ರತಿ ದಿನ ಮಗನ ಶಾಲೆಗೆ ಕರೆದುಕೊಂಡು ಹೋಗ್ತಾರೆ ಕೊಹ್ಲಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved