- Home
- Sports
- Cricket
- 2026ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಎರಡು ಅಪರೂಪದಲ್ಲೇ ಅಪರೂಪದ ದಾಖಲೆ ಬರೆಯಲು ರೆಡಿಯಾದ ಟೀಂ ಇಂಡಿಯಾ!
2026ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಎರಡು ಅಪರೂಪದಲ್ಲೇ ಅಪರೂಪದ ದಾಖಲೆ ಬರೆಯಲು ರೆಡಿಯಾದ ಟೀಂ ಇಂಡಿಯಾ!
ಬೆಂಗಳೂರು: ಬಹುನಿರೀಕ್ಷಿತ 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ದಿನಗಣನೆ ಆರಂಭವಾಗಿದೆ. ಟೂರ್ನಿಗೆ ಈಗಾಗಲೇ ಭಾರತ ಕ್ರಿಕೆಟ್ ತಂಡ ಪ್ರಕಟವಾಗಿದೆ. ಈ ಟೂರ್ನಿಯಲ್ಲಿ ಭಾರತ ತಂಡವು ಅಪರೂಪದಲ್ಲೇ ಅಪರೂಪದ ದಾಖಲೆ ಬರೆಯಲು ರೆಡಿಯಾಗಿದೆ. ಏನದು ಎನ್ನುವ ಕುತೂಹಲಕ್ಕೆ ಇಲ್ಲಿದೆ ಉತ್ತರ.

ಅಪರೂಪದ ದಾಖಲೆ ಬರೆಯಲು ಟೀಂ ಇಂಡಿಯಾ ರೆಡಿ
2024ರಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಟಿ20 ವಿಶ್ವಕಪ್ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಇದೀಗ ಚಾಂಪಿಯನ್ ಪಟ್ಟ ಉಳಿಸಿಕೊಳ್ಳಲು ಸೂರ್ಯಕುಮಾರ್ ಪಡೆ ತುದಿಗಾಲಿನಲ್ಲಿ ನಿಂತಿದೆ.
ಸತತ ಎರಡು ಬಾರಿ ಯಾವ ತಂಡವು ಟಿ20 ವಿಶ್ವಕಪ್ ಗೆದ್ದಿಲ್ಲ
ಇದೀಗ ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ಐಸಿಸಿ ಟಿ20 ವಿಶ್ವಕಪ್ ಗೆದ್ದ ಮೊದಲ ತಂಡ ಎನ್ನುವ ಅಪರೂಪದ ದಾಖಲೆ ಬರೆಯಲು ರೆಡಿಯಾಗಿದೆ.
ಟಿ20 ವಿಶ್ವಕಪ್‌ಗೆ ಭಾರತ-ಶ್ರೀಲಂಕಾ ಜಂಟಿ ಆತಿಥ್ಯ
2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ಹಾಗೂ ಶ್ರೀಲಂಕಾ ಜಂಟಿ ಆತಿಥ್ಯ ವಹಿಸಿವೆ. ಇದೀಗ ತವರಿನ ಮೈದಾನದಲ್ಲಿ ಚಾಂಪಿಯನ್ ಆಗಲು ಸೂರ್ಯಕುಮಾರ್ ಯಾದವ್ ಪಡೆ ಎದುರು ನೋಡುತ್ತಿದೆ.
ಆತಿಥ್ಯ ವಹಿಸಿದ ಯಾವ ದೇಶವೂ ಟಿ20 ವಿಶ್ವಕಪ್ ಗೆದ್ದಿಲ್ಲ
ಇದುವರೆಗೂ ಆತಿಥ್ಯ ವಹಿಸಿದ ಯಾವುದೇ ದೇಶವು ಟಿ20 ವಿಶ್ವಕಪ್ ಟ್ರೋಫಿ ಜಯಿಸಿಲ್ಲ. ಭಾರತ ತಂಡವು ಇದೀಗ ಟ್ರೋಫಿ ಗೆದ್ದು ಹೊಸ ಇತಿಹಾಸ ಬರೆಯಲು ಸುವರ್ಣಾವಕಾಶ ಒದಗಿ ಬಂದಿದೆ.
ಭಾರತಕ್ಕೆ ಯುಎಸ್‌ಎ ಮೊದಲ ಎದುರಾಳಿ
ಭಾರತ ತಂಡವು ಫೆಬ್ರವರಿ 07ರಂದು ಯುಎಸ್‌ಎ ವಿರುದ್ದ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ. ಈ ಪಂದ್ಯಕ್ಕೆ ಮುಂಬೈನ ವಾಂಖೇಡೆ ಮೈದಾನ ಆತಿಥ್ಯ ವಹಿಸಿದೆ.
3ನೇ ಟಿ20 ವಿಶ್ವಕಪ್ ಮೇಲೆ ಕಣ್ಣು
ಭಾರತ ತಂಡವು ಈಗಾಗಲೇ 2007 ಹಾಗೂ 2024ರಲ್ಲಿ ಟಿ20 ವಿಶ್ವಕಪ್ ಚಾಂಪಿಯನ್ ಆಗಿದ್ದು, ಈ ಬಾರಿಯೂ ಚಾಂಪಿಯನ್ ಆದರೇ ಮೂರು ಬಾರಿ ಟಿ20 ವಿಶ್ವಕಪ್ ಗೆದ್ದ ಮೊದಲ ತಂಡ ಎನ್ನುವ ಅಪರೂಪದ ಹೆಗ್ಗಳಿಕೆ ಟೀಂ ಇಂಡಿಯಾ ಪಾಲಾಗಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

