ಇಂಗ್ಲೆಂಡ್ ಎದುರಿನ ಸೋಲಿಗೆ ಅಚ್ಚರಿ ಕಾರಣ ಬಿಚ್ಚಿಟ್ಟ ಹೆಡ್ ಕೋಚ್ ಗೌತಮ್ ಗಂಭೀರ್!
ಲೀಡ್ಸ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಆಘಾತಕಾರಿ ಸೋಲು ಎದುರಾಗಿದೆ. ಈ ಸೋಲಿಗೆ ನಿಜವಾದ ಕಾರಣ ಏನು ಎನ್ನುವುದನ್ನು ಟೀಂ ಇಂಡಿಯಾ ಹೆಡ್ ಕೋಚ್ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.

ಶುಭ್‌ಮನ್ ಗಿಲ್ ನೇತೃತ್ವದ ಟೀಂ ಇಂಡಿಯಾ, ಇಂಗ್ಲೆಂಡ್ ಎದುರಿನ ಮೊದಲ ಟೆಸ್ಟ್ ಪಂದ್ಯದಲ್ಲಿ 5 ವಿಕೆಟ್ ಅಂತರದ ಹೀನಾಯ ಸೋಲು ಅನುಭವಿಸಿದೆ.
ಟೀಂ ಇಂಡಿಯಾ ಬೌಲರ್‌ಗಳು ಎರಡನೇ ಇನ್ನಿಂಗ್ಸ್‌ನಲ್ಲಿ 371 ರನ್‌ಗಳನ್ನು ರಕ್ಷಿಸಿಕೊಳ್ಳಲು ವಿಫಲರಾದರು. ಹೀಗಿದ್ದೂ ಟೀಂ ಇಂಡಿಯಾ ಹೆಡ್ ಕೋಚ್ ಗೌತಮ್, ಈ ಸೋಲಿಗೆ ಬೇರೆಯದ್ದೇ ಕಾರಣ ಕೊಟ್ಟಿದ್ದಾರೆ.
ಮೊದಲ ಟೆಸ್ಟ್ ಪಂದ್ಯದ ಸೋಲಿಗೆ ಬ್ಯಾಟಿಂಗ್ ವಿಭಾಗದಲ್ಲಿ ಮಧ್ಯಮ ಹಾಗೂ ಕೆಳಕ್ರಮಾಂಕದ ಬ್ಯಾಟರ್‌ಗಳ ಅಸ್ಥಿರ ಪ್ರದರ್ಶನವೇ ಸೋಲಿಗೆ ಪ್ರಮುಖ ಕಾರಣ ಎಂದಿದ್ದಾರೆ.
ಇಂಗ್ಲೆಂಡ್ ಎದುರಿನ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ತಂಡವು ಕೊನೆಯ 7 ವಿಕೆಟ್‌ಗಳನ್ನು 41 ರನ್ ಅಂತರದಲ್ಲಿ ಕಳೆದುಕೊಂಡಿತು.
ಇನ್ನು ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತ ತಂಡವು ಕೊನೆಯ 6 ವಿಕೆಟ್‌ಗಳನ್ನು ಕೇವಲ 31 ರನ್ ಅಂತರದಲ್ಲಿ ಕಳೆದುಕೊಂಡಿತು.
ಮುಂಬರುವ ಪಂದ್ಯಗಳಲ್ಲಿ ಮಧ್ಯಮ ಹಾಗೂ ಕೆಳ ಕ್ರಮಾಂಕದ ಬ್ಯಾಟಿಂಗ್ ವಿಭಾಗ ಮತ್ತಷ್ಟು ಸುಧಾರಿಸಿಕೊಳ್ಳಬೇಕು ಎಂದು ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.
ಗೌತಮ್ ಗಂಭೀರ್ ಅವರ ಮಾತುಗಳು, ಮೇಲ್ನೋಟಕ್ಕೆ ಟೀಂ ಇಂಡಿಯಾ ಅನನುಭವಿ ಬೌಲರ್‌ಗಳನ್ನು ರಕ್ಷಿಸಿಕೊಳ್ಳಬೇಕೆನ್ನುವ ಇರಾದೆ ಇರುವಂತೆ ಕಂಡು ಬರುತ್ತಿದೆ.
ಸದ್ಯ ಟೀಂ ಇಂಡಿಯಾದಲ್ಲಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಹೊರತುಪಡಿಸಿದಂತೆ ಉಳಿದ ವೇಗಿಗಳಾದ ಶಾರ್ದೂಲ್ ಠಾಕೂರ್ ಹಾಗೂ ಪ್ರಸಿದ್ದ್ ಕೃಷ್ಣ ಅನನುಭವಿಗಳು ಎನಿಸಿಕೊಂಡಿದ್ದಾರೆ.