- Home
- Sports
- Cricket
- ಕಿವೀಸ್ ವಿರುದ್ಧ ಏಕದಿನಕ್ಕೆ ಇಂದು ಭಾರತ ತಂಡ ಆಯ್ಕೆ; ಶಮಿ ಸೇರಿ ಯಾರಿಗೆಲ್ಲಾ ಸಿಗುತ್ತೆ ಚಾನ್ಸ್?
ಕಿವೀಸ್ ವಿರುದ್ಧ ಏಕದಿನಕ್ಕೆ ಇಂದು ಭಾರತ ತಂಡ ಆಯ್ಕೆ; ಶಮಿ ಸೇರಿ ಯಾರಿಗೆಲ್ಲಾ ಸಿಗುತ್ತೆ ಚಾನ್ಸ್?
ನವದೆಹಲಿ: ಭಾರತ ಹಾಗೂ ನ್ಯೂಜಿಲೆಂಡ್ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಗೆ ಇಂದು ಬಿಸಿಸಿಐ ಆಯ್ಕೆ ಸಮಿತಿಯು ಭಾರತ ತಂಡವನ್ನು ಪ್ರಕಟಿಸಲಿದೆ. ಇದು ಸಾಕಷ್ಟು ನಿರೀಕ್ಷೆ ಹಾಗೂ ಕುತೂಹಲಗಳನ್ನು ಹುಟ್ಟುಹಾಕಿದೆ. ಈ ಕುರಿತಾದ ಡೀಟೈಲ್ಸ್ ಇಲ್ಲಿದೆ ನೋಡಿ.

ಏಕದಿನ ಸರಣಿಗೆ ಭಾರತ ತಂಡ
ನ್ಯೂಜಿಲೆಂಡ್ ವಿರುದ್ಧ ಜನವರಿ 11ರಿಂದ ಆರಂಭಗೊಳ್ಳಲಿರುವ 3 ಪಂದ್ಯಗಳ ಏಕದಿನ ಸರಣಿಗೆ ಶನಿವಾರ ಭಾರತ ತಂಡದ ಆಯ್ಕೆ ನಡೆಯಲಿದೆ.
ಅಜಿತ್ ಅಗರ್ಕರ್ ನೇತೃತ್ವದ ತಂಡ
ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ನ್ಯೂಜಿಲೆಂಡ್ ಎದುರಿನ ಏಕದಿನ ಸರಣಿಗೆ ಇಂದು 15 ಸದಸ್ಯರ ತಂಡವನ್ನು ಆಯ್ಕೆ ಮಾಡಲಿದೆ.
ಪಂತ್, ಸಿರಾಜ್ ಭವಿಷ್ಯ ನಿರ್ಧಾರ
ರಿಷಭ್ ಪಂತ್, ಮೊಹಮದ್ ಸಿರಾಜ್, ಮೊಹಮದ್ ಶಮಿ ಸೇರಿ ಕೆಲ ಆಟಗಾರರ ಏಕದಿನ ಕ್ರಿಕೆಟ್ ಭವಿಷ್ಯ ನಿರ್ಧಾರವಾಗುವ ಸಾಧ್ಯತೆ ಇದೆ.
ಶಮಿ ಕಮ್‌ಬ್ಯಾಕ್?
ದೇಶಿ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನದ ಮೂಲಕ ಮಿಂಚುತ್ತಿರುವ ಮೊಹಮ್ಮದ್ ಶಮಿ ತಂಡಕ್ಕೆ ಕಮ್‌ಬ್ಯಾಕ್ ಮಾಡುವ ನಿರೀಕ್ಷೆಯಿದೆ. ಇದರ ಬಗ್ಗೆ ಬಿಸಿಸಿಐ ಅಧಿಕಾರಿಗಳು ಈಗಾಗಲೇ ಸುಳಿವು ನೀಡಿದ್ದರು.
2024ರಲ್ಲಿ ಕೊನೆಯ ಏಕದಿನ ಕ್ರಿಕೆಟ್ ಆಡಿದ್ದ ಪಂತ್
ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ 2024ರ ಅಕ್ಟೋಬರ್‌ನಲ್ಲಿ ಕೊನೆಯ ಬಾರಿಗೆ ಭಾರತ ಏಕದಿನ ತಂಡವನ್ನು ಪ್ರತಿನಿಧಿಸಿದ್ದರು. ಹೀಗಾಗಿ ಪಂತ್ ಆಯ್ಕೆಯ ಕುರಿತಂತೆ ಸಾಕಷ್ಟು ಕುತೂಹಲವಿದೆ.
ಪಂತ್ ಹಿಂದಿಕ್ಕಿ ಸ್ಥಾನ ಪಡೆಯುತ್ತಾರಾ ಇಶಾನ್ ಕಿಶನ್
ಇಶಾನ್ ಕಿಶನ್, ದೇವದತ್ ಪಡಿಕ್ಕಲ್, ಧೃವ್ ಜುರೆಲ್ ಸೇರಿ ಹಲವು ಆಟಗಾರರು ಆಯ್ಕೆ ನಿರೀಕ್ಷೆಯಲ್ಲಿದ್ದಾರೆ. ಈಗಾಗಲೇ ಇಶಾನ್ ಕಿಶನ್ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿರುವುದರಿಂದ ಕಿಶನ್ ಮತ್ತೆ ಏಕದಿನ ತಂಡ ಕೂಡಿಕೊಳ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ
ಶ್ರೇಯಸ್ ಅಯ್ಯರ್ ಕಮ್‌ಬ್ಯಾಕ್ ನಿರೀಕ್ಷೆ
ಆಸ್ಟ್ರೇಲಿಯಾ ಎದುರಿನ ಸಿಡ್ನಿ ಏಕದಿನ ಪಂದ್ಯದ ವೇಳೆ ಗಾಯಗೊಂಡು ತಂಡದಿಂದ ಹೊರಗುಳಿದಿರುವ ಶ್ರೇಯಸ್ ಅಯ್ಯರ್, ತಂಡಕ್ಕೆ ಕಮ್‌ಬ್ಯಾಕ್ ಮಾಡ್ತಾರೋ ಅಥವಾ ಇಲ್ಲವೇ ಎನ್ನುವ ಕುತೂಹಲಕ್ಕೆ ತೆರೆ ಬೀಳಲಿದೆ.
ಬುಮ್ರಾ, ಪಾಂಡ್ಯಗೆ ರೆಸ್ಟ್
ಭವಿಷ್ಯದ ಮಹತ್ವದ ಟೂರ್ನಿಗಳನ್ನು ಗಮನದಲ್ಲಿಟ್ಟುಕೊಂಡು ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಹಾಗೂ ಮಾರಕ ವೇಗಿ ಜಸ್ಪ್ರೀತ್ ಜಸ್‌ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಬಹುದು ಎನ್ನಲಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

