- Home
- Sports
- Cricket
- ಟಿ20 ವಿಶ್ವಕಪ್‌ಗೆ ಟೀಂ ಇಂಡಿಯಾ ರೆಡಿ; ಯಾವ ಐಪಿಎಲ್ ತಂಡದ ಆಟಗಾರರು ಎಷ್ಟಿದ್ದಾರೆ? ಯಾರದ್ದು ಸಿಂಹಪಾಲು?
ಟಿ20 ವಿಶ್ವಕಪ್‌ಗೆ ಟೀಂ ಇಂಡಿಯಾ ರೆಡಿ; ಯಾವ ಐಪಿಎಲ್ ತಂಡದ ಆಟಗಾರರು ಎಷ್ಟಿದ್ದಾರೆ? ಯಾರದ್ದು ಸಿಂಹಪಾಲು?
ಬೆಂಗಳೂರು: ಮುಂಬರುವ ಫೆಬ್ರವರಿ 07ರಿಂದ ಆರಂಭವಾಗಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ 15 ಆಟಗಾರರನ್ನೊಳಗೊಂಡ ಭಾರತ ತಂಡ ಪ್ರಕಟವಾಗಿದ್ದು, ಯಾವ ಐಪಿಎಲ್ ತಂಡದ ಆಟಗಾರರು ಎಷ್ಟು ಸಂಖ್ಯೆಯಲ್ಲಿ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ ನೋಡೋಣ ಬನ್ನಿ.

ಟಿ20 ವಿಶ್ವಕಪ್‌ಗೆ ಭಾರತ ತಂಡ
ಹಾಲಿ ಚಾಂಪಿಯನ್ ಭಾರತ ತಂಡವು ಇದೀಗ ಮತ್ತೊಮ್ಮೆ ಐಸಿಸಿ ಟಿ20 ವಿಶ್ವಕಪ್ ಗೆಲ್ಲುವ ವಿಶ್ವಾಸದಲ್ಲಿದ್ದು, ಸೂರ್ಯಕುಮಾರ್ ಯಾದವ್ ನಾಯಕನಾಗಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.
ಮತ್ತೊಮ್ಮೆ ಕಪ್ ಗೆಲ್ಲಲು ರೆಡಿಯಾದ ಭಾರತ
ಸಾಕಷ್ಟು ಯುವ ಹಾಗೂ ಅನುಭವಿ ಆಟಗಾರರನ್ನೊಳಗೊಂಡ ತಂಡವನ್ನು ಬಿಸಿಸಿಐ ಆಯ್ಕೆ ಸಮಿತಿಯು ಆಯ್ಕೆ ಮಾಡಿದ್ದು, ತವರಿನಲ್ಲೇ ನಡೆಯಲಿರುವ ಚುಟುಕು ವಿಶ್ವಕಪ್ ಗೆಲ್ಲಲು ಭಾರತ ತುದಿಗಾಲಿನಲ್ಲಿ ನಿಂತಿದೆ.
ಟಿ20 ವಿಶ್ವಕಪ್‌ಗೆ ಭಾರತ ತಂಡಮತ್ತೊ
ಇನ್ನು ಈ ಬಾರಿಯ ಟಿ20 ವಿಶ್ವಕಪ್ ಟೂರ್ನಿಗೆ ಯಾವ ಐಪಿಎಲ್ ತಂಡದಿಂದ ಎಷ್ಟು ಆಟಗಾರರು ಭಾರತ ತಂಡಕ್ಕೆ ಆಯ್ಕೆಯಾಗಿದ್ಧಾರೆ ಎನ್ನುವ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.
ಆರ್‌ಸಿಬಿ, ಲಖನೌ, ರಾಜಸ್ಥಾನ ರಾಯಲ್ಸ್‌ಗೆ ನಿರಾಸೆ
ಹಾಲಿ ಚಾಂಪಿಯನ್ ಆರ್‌ಸಿಬಿ, ಮಾಜಿ ಚಾಂಪಿಯನ್ ರಾಜಸ್ಥಾನ ರಾಯಲ್ಸ್ ಹಾಗೂ ಲಖನೌ ಸೂಪರ್ ಜೈಂಟ್ಸ್ ತಂಡದಿಂದ ಯಾವೊಬ್ಬ ಆಟಗಾರನೂ ಈ ಬಾರಿಯ ವಿಶ್ವಕಪ್ ಟೂರ್ನಿಗೆ ಭಾರತ ತಂಡದಲ್ಲಿ ಸ್ಥಾನ ಪಡೆದಿಲ್ಲ.
1. ಗುಜರಾತ್ ಟೈಟಾನ್ಸ್: 01
ಗುಜರಾತ್ ಟೈಟಾನ್ಸ್‌ನಿಂದ ಸ್ಟಾರ್ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಸ್ಥಾನ ಪಡೆದಿದ್ದಾರೆ.
2. ಪಂಜಾಬ್ ಕಿಂಗ್ಸ್: 01
ಪಂಜಾಬ್ ಕಿಂಗ್ಸ್ ತಂಡದ ಮಾರಕ ಎಡಗೈ ವೇಗಿ ಅರ್ಶದೀಪ್ ಸಿಂಗ್, ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅರ್ಶದೀಪ್ ಸಿಂಗ್ ಪವರ್ ಪ್ಲೇ ಹಾಗೂ ಡೆತ್ ಓವರ್‌ನಲ್ಲಿ ಪರಿಣಾಮಕಾರಿ ದಾಳಿ ನಡೆಸುತ್ತಾ ಬಂದಿದ್ದಾರೆ.
3. ಚೆನ್ನೈ ಸೂಪರ್ ಕಿಂಗ್ಸ್: 02
ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಹಾಗೂ ಆಲ್ರೌಂಡರ್ ಶಿವಂ ದುಬೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರವಾಗಿ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
4. ಸನ್‌ರೈಸರ್ಸ್ ಹೈದರಾಬಾದ್: 02
ಸನ್‌ರೈಸರ್ಸ್ ಹೈದರಾಬಾದ್ ತಂಡದ ಸ್ಪೋಟಕ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಹಾಗೂ ಬ್ಯಾಕ್‌ಅಪ್ ವಿಕೆಟ್ ಕೀಪರ್ ಆಗಿ ಇಶಾನ್ ಕಿಶನ್ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
5. ಡೆಲ್ಲಿ ಕ್ಯಾಪಿಟಲ್ಸ್: 02
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಹಾಗೂ ಆಲ್ರೌಂಡರ್ ಅಕ್ಷರ್ ಪಟೇಲ್ ಉಪನಾಯಕರಾಗಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇದರ ಜತೆಗೆ ಅನುಭವಿ ಸ್ಪಿನ್ನರ್ ಕುಲ್ದೀಪ್ ಯಾದವ್ ಕೂಡಾ ಸ್ಥಾನ ಪಡೆದಿದ್ದಾರೆ.
06. ಕೋಲ್ಕತಾ ನೈಟ್ ರೈಡರ್ಸ್: 03
ಕೋಲ್ಕತಾ ನೈಟ್ ರೈಡರ್ಸ್ ತಂಡದಿಂದ ಮಿಸ್ಟ್ರಿ ಸ್ಪಿನ್ನರ್ ವರುಣ್ ಚಕ್ರವರ್ತಿ, ಮ್ಯಾಚ್ ಫಿನಿಶರ್ ಖ್ಯಾತಿಯ ರಿಂಕು ಸಿಂಗ್ ಹಾಗೂ ಮಾರಕ ಯುವ ವೇಗಿ ಹರ್ಷಿತ್ ರಾಣಾ ಹೀಗೆ ಮೂವರು ಆಟಗಾರರು ಸ್ಥಾನ ಪಡೆದಿದ್ದಾರೆ.
07. ಮುಂಬೈ ಇಂಡಿಯನ್ಸ್: 04
ನಿರೀಕ್ಷೆಯಂತೆಯೇ ಮುಂಬೈ ಇಂಡಿಯನ್ಸ್ ತಂಡದಿಂದ ನಾಯಕ ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ ಹೀಗೆ ನಾಲ್ವರು ಆಟಗಾರರು ವಿಶ್ವಕಪ್ ಟೂರ್ನಿಗೆ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

