- Home
- Sports
- Cricket
- India vs England 1st T20 2026 ವೇಳಾಪಟ್ಟಿಯಲ್ಲಿ ಬದಲಾವಣೆ! ಈ ಸಮಯಕ್ಕೆ ಆರಂಭವಾಗಲಿದೆ ಹೈವೋಲ್ಟೇಜ್ ಮ್ಯಾಚ್
India vs England 1st T20 2026 ವೇಳಾಪಟ್ಟಿಯಲ್ಲಿ ಬದಲಾವಣೆ! ಈ ಸಮಯಕ್ಕೆ ಆರಂಭವಾಗಲಿದೆ ಹೈವೋಲ್ಟೇಜ್ ಮ್ಯಾಚ್
ಐರ್ಲೆಂಡ್ ಎದುರಿನ ಎರಡು ಪಂದ್ಯಗಳ ಟಿ20 ಸರಣಿ ವೈಟ್‌ವಾಷ್ ಅನುಭವಿಸಿದ ಬೆನ್ನಲ್ಲೇ ಇದೀಗ ಟೀಂ ಇಂಡಿಯಾ, ಇಂಗ್ಲೆಂಡ್ ಎದುರಿನ ಐದು ಪಂದ್ಯಗಳ ಟಿ20 ಸರಣಿಗೆ ಸಜ್ಜಾಗಿದೆ. ಮೊದಲ ಪಂದ್ಯದ ಆರಂಭಿಕ ಸಮಯದಲ್ಲಿ ಇದೀಗ ಬದಲಾವಣೆಯಾಗಿದೆ. ಈ ಕುರಿತಾದ ಅಪ್‌ಡೇಟ್ಸ್ ಇಲ್ಲಿದೆ.

ಭಾರತ-ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿ
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯವು ಜುಲೈ 01ರಿಂದ ಆರಂಭವಾಗಲಿದೆ. ಐರ್ಲೆಂಡ್ ಎದುರು 0-2 ಅಂತರದಲ್ಲಿ ಟಿ20 ಸರಣಿ ವೈಟ್‌ವಾಷ್ ಅನುಭವಿಸಿರುವ ಹಾಲಿ ಚಾಂಪಿಯನ್ ಭಾರತ, ಇಂಗ್ಲೆಂಡ್ ಎದುರು ಕಮ್‌ಬ್ಯಾಕ್ ಮಾಡಲು ಎದುರು ನೋಡುತ್ತಿದೆ.
ಚೇಸ್ಟರ್ ಲೀ ಸ್ಟ್ರೀಟ್‌ನ ರಿವರ್‌ಸೈಡ್ ಗ್ರೌಂಡ್ ಆತಿಥ್ಯ
ಇನ್ನು ಐರ್ಲೆಂಡ್ ಎದುರಿನ ಟಿ20 ಸರಣಿಯು ಭಾರತೀಯ ಕಾಲಮಾನ ಸಂಜೆ 6 ಗಂಟೆಯಿಂದ ಆರಂಭವಾಗಿತ್ತು. ಆದರೆ ಇದೀಗ ಇಂಗ್ಲೆಂಡ್ ಎದುರಿನ ಟಿ20 ಸರಣಿಯು ಕೊಂಚ ತಡವಾಗಿ ಆರಂಭವಾಗಲಿದೆ. ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯಕ್ಕೆ ಚೇಸ್ಟರ್ ಲೀ ಸ್ಟ್ರೀಟ್‌ನ ರಿವರ್‌ಸೈಡ್ ಗ್ರೌಂಡ್ ಆತಿಥ್ಯ ವಹಿಸಿದೆ.
ತಡವಾಗಿ ಆರಂಭವಾಗಲಿದೆ ಭಾರತ-ಇಂಗ್ಲೆಂಡ್ ಮೊದಲ ಟಿ20 ಮ್ಯಾಚ್
ಇನ್ನು ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಟಿ20 ಮ್ಯಾಚ್ ಸ್ಥಳೀಯ ಕಾಲಮಾನ ಸಂಜೆ 5.30ಕ್ಕೆ ಆರಂಭವಾಗಲಿದೆ. ಅಂದರೆ ಭಾರತೀಯ ಕಾಲಮಾನ ರಾತ್ರಿ 10 ಗಂಟೆಗೆ ಮೊದಲ ಟಿ20 ಪಂದ್ಯವು ಆರಂಭವಾಗಲಿದೆ. ಟೈಮ್ ಝೋನ್ ಕಾರಣದಿಂದಾಗಿ ಭಾರತದಲ್ಲಿ ಮ್ಯಾಚ್ ತಡವಾಗಿ ಆರಂಭವಾಗಲಿದೆ.
ಭಾರತ-ಇಂಗ್ಲೆಂಡ್ ನಡುವಿನ ಮ್ಯಾಚ್ ಎಲ್ಲಿ ವೀಕ್ಷಿಸಬಹುದು?
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯವು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರವಾಗಲಿದೆ. ಇದಷ್ಟೇ Sony LIV ಓಟಿಟಿ ಪ್ಲಾಟ್‌ಫಾರಂನಲ್ಲಿಯೂ ವೀಕ್ಷಿಸಬಹುದಾಗಿದೆ.
ಇಂಗ್ಲೆಂಡ್ ಎದುರಿನ ಟಿ20 ಸರಣಿಗೆ ಭಾರತ ತಂಡ
ಭಾರತ: ಶ್ರೇಯಸ್ ಅಯ್ಯರ್(ನಾಯಕ), ತಿಲಕ್ ವರ್ಮಾ, ಅಭಿಷೇಕ್ ಶರ್ಮಾ, ಅರ್ಶದೀಪ್ ಸಿಂಗ್, ಶಿವಂ ದುಬೆ, ಹರ್ಷಿತ್ ರಾಣಾ, ಇಶಾನ್ ಕಿಶನ್(ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಪ್ರಸಿದ್ದ್ ಕೃಷ್ಣ, ಪ್ರಿನ್ಸ್ ಯಾದವ್, ರವಿ ಬಿಷ್ಣೋಯಿ, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ವೈಭವ್ ಸೂರ್ಯವಂಶಿ, ಸುಯಾನ್ಶ್ ಶೆಡ್ಗೆ, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್.
ಭಾರತ ಎದುರಿನ ಟಿ20 ಸರಣಿಗೆ ಇಂಗ್ಲೆಂಡ್ ತಂಡ ಹೀಗಿದೆ:
ಹ್ಯಾರಿ ಬ್ರೂಕ್(ಕ್ಯಾಪ್ಟನ್), ರೆಹಾನ್ ಅಹಮದ್, ಜೋಫ್ರಾ ಆರ್ಚರ್, ಸೋನಿ ಬೇಕರ್, ಟಾಮ್ ಬಾಂಟನ್, ಜೇಕಬ್ ಬೆಥೆಲ್, ಜೋಸ್ ಬಟ್ಲರ್, ಜೇಮ್ಸ್ ಕ್ಲೋಸ್, ಜೋರ್ಡನ್ ಕಾಕ್ಸ್, ಸ್ಯಾಮ್ ಕರ್ರನ್, ಲಿಯಮ್ ಡಾಸನ್, ವಿಲ್ ಜ್ಯಾಕ್ಸ್, ಸಕೀಬ್ ಮೊಹಮೂದ್, ಆದಿಲ್ ರಶೀದ್, ಫಿಲ್ ಸಾಲ್ಟ್, ಜೋಶ್ ಟಂಗ್, ಲ್ಯೂಕ್ ವುಡ್
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

