ಇಂಗ್ಲೆಂಡ್ ಎದುರಿನ ಮೂರನೇ ಟಿ20 ಪಂದ್ಯದ ಭಾರತದ ಸಂಭಾವ್ಯ ತಂಡ; ಬದಲಾವಣೆ ಮಾಡುತ್ತಾ ಟೀಂ ಇಂಡಿಯಾ?
ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಸರಣಿಯ ಮೂರನೇ ಪಂದ್ಯ ರಾಜ್‌ಕೋಟ್‌ನಲ್ಲಿ ಟೀಂ ಇಂಡಿಯಾ ಹ್ಯಾಟ್ರಿಕ್ ಗೆಲುವು ಸಾಧಿಸುತ್ತಾ? ತಿಲಕ್ ವರ್ಮಾ ಫಾರ್ಮ್ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಭಾರತದ ಆಡುವ ಹನ್ನೊಂದರ ಬಳಗದಲ್ಲಿ ಬದಲಾವಣೆಯಾಗುತ್ತಾ ನೋಡೋಣ ಬನ್ನಿ

ಭಾರತ vs ಇಂಗ್ಲೆಂಡ್ 3ನೇ T20 ಪಂದ್ಯ
ಭಾರತ ಹಾಗೂ ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟಿ20 ಸರಣಿಯ ಮೂರನೇ ಪಂದ್ಯ ಜನವರಿ 28 ರಂದು ರಾಜ್‌ಕೋಟ್‌ನಲ್ಲಿ ನಡೆಯಲಿದೆ. ಈ ಪಂದ್ಯದ ಮೇಲೆ ಕ್ರಿಕೆಟ್ ಅಭಿಮಾನಿಗಳ ಚಿತ್ತ ನೆಟ್ಟಿದೆ.
ಸರಣಿ ಗೆಲ್ಲುವ ತವಕದಲ್ಲಿ ಭಾರತ
ಮೊದಲ ಎರಡು ಪಂದ್ಯಗಳಲ್ಲಿ ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತ ಗೆಲುವಿನ ನಗೆ ಬೀರಿದೆ. ಈ ಪಂದ್ಯ ಗೆದ್ದು ಸರಣಿ ವಶಪಡಿಸಿಕೊಳ್ಳುವ ಗುರಿ ಟೀಂ ಇಂಡಿಯಾ ಹೊಂದಿದೆ.
ತಿಲಕ್ ವರ್ಮಾ ಮೇಲೆ ಕಣ್ಣು
ಚೆನ್ನೈನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ 72 ರನ್ ಗಳಿಸಿದ ತಿಲಕ್ ವರ್ಮಾ ಫಾರ್ಮ್ ಮುಂದುವರಿಯುತ್ತದೆಯೇ ಎಂದು ನೋಡಬೇಕಿದೆ.
ಈ ಬ್ಯಾಟ್ಸ್‌ಮನ್‌ಗಳಿಗೆ ತಿರುಗೇಟು?
ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ ಮತ್ತು ಸೂರ್ಯಕುಮಾರ್ ಯಾದವ್ ರಾಜ್‌ಕೋಟ್‌ನಲ್ಲಿ ಫಾರ್ಮ್‌ಗೆ ಮರಳುವರೇ ಎನ್ನುವ ಕುತೂಹಲ ಕೂಡಾ ಜೋರಾಗಿದೆ. ಸಂಜು ಹಾಗೂ ಸೂರ್ಯ ಸತತ ವೈಫಲ್ಯ ಅನುಭವಿಸಿದ್ದಾರೆ.
ಇಂಗ್ಲೆಂಡ್‌ನನ್ನು ಕಡೆಗಣಿಸುವಂತಿಲ್ಲ
ಎರಡು ಪಂದ್ಯಗಳಲ್ಲಿ ಸೋತರೂ ಇಂಗ್ಲೆಂಡ್ ತಂಡ ತಿರುಗೇಟು ನೀಡುವ ಸಾಮರ್ಥ್ಯ ಹೊಂದಿದೆ. ಜೋಸ್ ಬಟ್ಲರ್ ನೇತೃತ್ವದ ಆಂಗ್ಲರ ಪಡೆ ಈ ಪಂದ್ಯ ಗೆದ್ದು ಸರಣಿಯನ್ನು ಜೀವಂತವಾಗಿಟ್ಟುಕೊಳ್ಳಲು ಎದುರು ನೋಡುತ್ತಿದೆ.
ಭಾರತೀಯ ಬೌಲರ್‌ಗಳ ಮೇಲೂ ನಿರೀಕ್ಷೆ
ಎಡಗೈ ವೇಗಿ ಅರ್ಶ್‌ದೀಪ್ ಸಿಂಗ್ ಮತ್ತು ಮಾಂತ್ರಿಕ ಸ್ಪಿನ್ನರ್ ವರುಣ್ ಚಕ್ರವರ್ತಿ ಮತ್ತೆ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಿದೆ.
ಪಂದ್ಯ ಎಲ್ಲಿ, ಯಾವಾಗ ನೋಡಬಹುದು?
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಟಿ20 ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದ್ದು, ಡಿಸ್ನಿ+ ಹಾಟ್‌ಸ್ಟಾರ್, ಸ್ಟಾರ್ ಸ್ಪೋರ್ಟ್ಸ್ ನಲ್ಲಿ ವೀಕ್ಷಿಸಬಹುದು.
ಸಂಭಾವ್ಯ ಪ್ಲೇಯಿಂಗ್ 11
ಸೂರ್ಯಕುಮಾರ್ ಯಾದವ್, ಅಕ್ಷರ್ ಪಟೇಲ್, ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಧ್ರುವ್ ಜುರೆಲ್, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ಅರ್ಶ್‌ದೀಪ್ ಸಿಂಗ್, ಹಾರ್ದಿಕ್ ಪಾಂಡ್ಯ ಸ್ಥಾನ ಪಡೆಯುವ ಸಾಧ್ಯತೆಯಿದೆ.