- Home
- Sports
- Cricket
- India vs England 4th T20I: ಒಂದು ಪೈಸೆ ಖರ್ಚಿಲ್ಲದೇ ಫ್ರೀ ಆಗಿ ಲೈವ್ ಮ್ಯಾಚ್ ನೋಡೋದು ಹೇಗೆ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್
India vs England 4th T20I: ಒಂದು ಪೈಸೆ ಖರ್ಚಿಲ್ಲದೇ ಫ್ರೀ ಆಗಿ ಲೈವ್ ಮ್ಯಾಚ್ ನೋಡೋದು ಹೇಗೆ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್
ಬ್ರಿಸ್ಟೊಲ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ನಾಲ್ಕನೇ ಟಿ20 ಪಂದ್ಯ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಈ ಪಂದ್ಯವನ್ನು ನೀವು ಯಾವುದೇ ರೀಚಾರ್ಜ್ ಇಲ್ಲದೇ ಉಚಿತವಾಗಿ ವೀಕ್ಷಿಸಬಹುದು. ಅದು ಹೇಗೆ ಎನ್ನುವುದನ್ನು ನೋಡೋಣ ಬನ್ನಿ.

ಕಮ್‌ಬ್ಯಾಕ್ ಮಾಡಲು ಎದುರು ನೋಡುತ್ತಿದೆ ಟೀಂ ಇಂಡಿಯಾ
ಭಾರತ ಹಾಗೂ ಇಂಗ್ಲೆಂಡ್ ನಡುವಿನ ನಾಲ್ಕನೇ ಟಿ20 ಪಂದ್ಯಕ್ಕೆ ಬ್ರಿಸ್ಟೊಲ್‌ನ ಕೌಂಟಿ ಗ್ರೌಂಡ್ ಆತಿಥ್ಯ ವಹಿಸಿದೆ. ಈ ಪಂದ್ಯವು ಭಾರತೀಯ ಕಾಲಮಾನ ಇಂದು ರಾತ್ರಿ 10 ಗಂಟೆಯಿಂದ ಆರಂಭವಾಗಲಿದೆ. ಸದ್ಯ ಆತಿಥೇಯ ಇಂಗ್ಲೆಂಡ್ ತಂಡವು 5 ಪಂದ್ಯಗಳ ಟಿ20 ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಇದೀಗ ಇಂಗ್ಲೆಂಡ್ ಇಂದಿನ ಪಂದ್ಯ ಗೆದ್ದು ಮೊದಲ ಸಲ ಭಾರತ ಎದುರು ಟಿ20 ಸರಣಿ ಗೆಲ್ಲಲು ತುದಿಗಾಲಿನಲ್ಲಿ ನಿಂತಿದೆ. ಇನ್ನೊಂದೆಡೆ ಭಾರತ ತಂಡವು ಈ ಪಂದ್ಯ ಗೆದ್ದು, ಸರಣಿಯಲ್ಲಿ ಕಮ್‌ಬ್ಯಾಕ್ ಮಾಡಲು ಎದುರು ನೋಡುತ್ತಿದೆ.
ಭಾರತ-ಇಂಗ್ಲೆಂಡ್ ನಾಲ್ಕನೇ ಟಿ20 ಮ್ಯಾಚ್ ಉಚಿತವಾಗಿ ವೀಕ್ಷಿಸಬಹುದು
ಇನ್ನು ಈ ಹೈವೋಲ್ಟೇಜ್ ಮ್ಯಾಚ್ ಅನ್ನು ಉಚಿತವಾಗಿ ವೀಕ್ಷಿಸಬಹುದು ಎನ್ನುವುದು ಬಹುತೇಕ ಮಂದಿಗೆ ಗೊತ್ತಿಲ್ಲ. ಹೌದು, ಭಾರತ ಹಾಗೂ ಇಂಗ್ಲೆಂಡ್ ನಡುವೆ ಸಮಯದ ಅಂತರವಿರುವುದರಿಂದ ಈ ಪಂದ್ಯ ಭಾರತದಲ್ಲಿ ತಡರಾತ್ರಿ ಪ್ರಸಾರವಾಗಲಿದೆ. ಈ ಮ್ಯಾಚ್ ಶ್ರೇಯಸ್ ಅಯ್ಯರ್ ನೇತೃತ್ವದ ಟೀಂ ಇಂಡಿಯಾ ಪಾಲಿಗೆ ಸಾಕಷ್ಟು ಮಹತ್ವದ್ದೆನಿಸಿಕೊಂಡಿದೆ.
ಭಾರತ-ಇಂಗ್ಲೆಂಡ್ 4ನೇ ಟಿ20 ಮ್ಯಾಚ್ ಎಲ್ಲಿ ವೀಕ್ಷಿಸಬಹುದು?
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಸರಣಿಯ ಪ್ರಸಾರದ ಹಕ್ಕನ್ನು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ಪಡೆದುಕೊಂಡಿದೆ. ಇನ್ನು ಓಟಿಟಿಯಲ್ಲಿ ಜಿಯೋ ಹಾಟ್‌ಸ್ಟಾರ್‌ನಲ್ಲಿಯೂ ಈ ಪಂದ್ಯದ ನೇರಪ್ರಸಾರವನ್ನು ವೀಕ್ಷಿಸಬಹುದಾಗಿದೆ. ಅಂದಹಾಗೆ ಈ ಎರಡೂ ಚಾನೆಲ್‌ನಲ್ಲಿ ವೀಕ್ಷಿಸಲು ಸಬ್‌ಸ್ಕ್ರಿಪ್ಷನ್ ಪಡೆದುಕೊಂಡಿರಲೇಬೇಕಾಗುತ್ತದೆ.
ಭಾರತ-ಇಂಗ್ಲೆಂಡ್ ನಡುವಿನ ಮ್ಯಾಚ್ ಫ್ರೀ ಆಗಿ ಹೇಗೆ ವೀಕ್ಷಿಸಬಹುದು?
ಇನ್ನು ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟಿ20 ಸರಣಿಯ ಪಂದ್ಯಗಳನ್ನು ಉಚಿತವಾಗಿ ವೀಕ್ಷಿಸಬಹುದು ಎನ್ನುವ ವಿಚಾರ ಬಹುತೇಕ ಮಂದಿಗೆ ಗೊತ್ತಿಲ್ಲ. ಹೌದು, ಇಂಡೋ-ಇಂಗ್ಲೆಂಡ್ ನಡುವಿನ ಟಿ20 ಸರಣಿಯ ಪಂದ್ಯಗಳನ್ನು ಒಂದು ಪೈಸೆಯೂ ಖರ್ಚಿಲ್ಲದೇ ಫ್ರೀ ಡಿಶ್‌ನಲ್ಲಿ ವೀಕ್ಷಿಸಬಹುದು. ಡಿಡಿ ಸ್ಪೋರ್ಟ್ಸ್ ಉಚಿತ ಚಾನೆಲ್ ಆಗಿದ್ದು, ಈ ಚಾನೆಲ್ ಮೂಲಕ ಉಚಿತವಾಗಿ ವೀಕ್ಷಿಸಬಹುದು.
ಭಾರತ ಸಂಭಾವ್ಯ ತಂಡ:
ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಸಂಜು ಸ್ಯಾಮ್ಸನ್, ಇಶಾನ್ ಕಿಶನ್(ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್(ನಾಯಕ), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಹರ್ಷಿತ್ ರಾಣಾ, ಪ್ರಿನ್ಸ್ ಯಾದವ್, ಅರ್ಶದೀಪ್ ಸಿಂಗ್, ವರುಣ್ ಚಕ್ರವರ್ತಿ.
ಇಂಗ್ಲೆಂಡ್ ತಂಡ:
ಫಿಲ್ ಸಾಲ್ಟ್, ಜೋಸ್ ಬಟ್ಲರ್, ಹ್ಯಾರಿ ಬ್ರೂಕ್(ನಾಯಕ), ಜೇಕಬ್ ಬೆಥೆಲ್, ಟಾಮ್ ಬಾಂಟನ್, ಸ್ಯಾಮ್ ಕರ್ರನ್, ವಿಲ್ ಜ್ಯಾಕ್ಸ್, ಜೋಫ್ರಾ ಆರ್ಚರ್, ಲಿಯಾಮ್ ಡಾಸನ್, ಆದಿಲ್ ರಶೀದ್, ಜೋಶ್ ಟಂಗ್.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

